ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಿರಿ – ಹಿಂದೂ ಜನಜಾಗೃತಿ ಸಮಿತಿ

ಶಿಕಾರಿಪುರ: ಫೆ14 ರ ವ್ಯಾಲೆಂಟೈನ್ ಡೇ ಯಂದು ನಡೆಯುವ ಅನಾಚಾರಗಳನ್ನು ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳವಾರ ಶಿಕಾರಿಪುರದ ತಾಲೂಕು ಕಚೇರಿ, ಡಿವೈಎಸ್ಪಿ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ 14 ಫೆಬ್ರವರಿಯನ್ನು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ದುಷ್ಟ ಪ್ರವೃತ್ತಿಯು ಭಾರತದಲ್ಲಿಯೂ ವ್ಯಾಪಕವಾಗಿ ಪಸರಿಸಿದೆ ಪಾಶ್ಚಾತ್ಯರ ವ್ಯಾಪಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವ ಪೀಳಿಗೆ ಭೋಗವಾದ ಮತ್ತು ಅನೈತಿಕತೆಯಲ್ಲಿ […]
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್‌ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ […]
ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಮದುವೆ: ಅಭಿಮಾನಿಗಳಿಗೆ ಮುಕ್ತ ಅವಕಾಶ

ಮೈಸೂರು : ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಅವರ ವಿವಾಹ ಫೆಬ್ರವರಿ 15ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ನೆರವೇರಲಿದ್ದು ಅಭಿಮಾನಿಗಳು ಪಾಲ್ಗೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ. ಈ ಕುರಿತು ಸ್ವತಃ ನಟ ಡಾಲಿ ಧನಂಜಯ್ ಅವರು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು ಎಲ್ಲವು ಮೈಸೂರಿನಿಂದಲೇ. ತಾಯಿ ಚಾಮುಂಡೇಶ್ವರಿ […]
ಮೂಲಭೂತ ಸೌಕರ್ಯ ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಹಿಸಿ ಗ್ರಾಮ ಅಧಿಕಾರಿಗಳ ಪ್ರತಿಭಟನೆ..!

ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಆಚರಣದಲ್ಲಿ ಸೋಮವಾರ ಗ್ರಾಮ ಆಡಳಿತ ಅಧಿಕಾರಿಗಳು ( ಗ್ರಾಮ ಲೇಕ್ಕಿಗರು) ಪ್ರತಿಭಟನೆ ಧರಣಿ ನಡೆಸಿದ್ದಾರೆ. ಕಂದಾಯ ಇಲಾಖೆಯ ಮೂಲ ಆಧಾರ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಉತ್ತಮ ಕಛೇರಿ ಪೀಠೋಪಕರಣಗಳನ್ನು ಒದಗಿಸಬೇಕು ಹಾಗೂ ಇನ್ನು ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಫೆ.10 ರಂದು ಇಡೀ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು ತಾಲೂಕಿನ ಎಲ್ಲಾ ವಿಎ ಸಿಬ್ಬಂದಿಗಳು ಇಂದು ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆ ನಡೆಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಈ […]
ರಾಜ್ಯ ಮಟ್ಟದ ಡೊಳ್ಳು ಕುಣಿತದಲ್ಲಿಕುಸ್ಕೂರು ಸರ್ಕಾರಿ ಪ್ರೌಢ ಶಾಲೆ ಪ್ರಥಮ

ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ಗ್ರಾಮ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಡೊಳ್ಳು ಕುಣಿತ ಜನಪದ ನೃತ್ಯ ಸ್ಪರ್ಧೆಯಲ್ಲಿ, ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥನ ಪಡೆದಿದ್ದಾರೆ . ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ, ಎಸ್ ಡಿಎಂಸಿ ಕಮಿಟಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಸುದ್ದಿ ಮತ್ತು ಜಾಹೀರಾತಿಗಾಗಿ-7411515737
ಚಿಕ್ಕಮಗಳೂರು : ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ..!

ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ಮೂಡಿದೆ.
ಕೊವಿಡ್ ಲಸಿಕೆ ಅಡ್ಡಪರಿಣಾಮ ಸಮರ್ಪಕ ಸಂಶೋಧನೆಗೆ ಸಿಎಂ ಸೂಚನೆ..!

ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರಈ ಸಮಸ್ಯೆಯ ಮೂಲ ಪತ್ತೆಮಾಡಿ, […]
ದೆಹಲಿ ವಿಧಾನಸಭೆ ಚುನಾವಣೆ : ಬಿಜೆಪಿಗೆ ಭರ್ಜರಿ ಧಮಾಕ..!

ದೆಹಲಿ: ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಯಂತೆ ಎಲ್ಲಾ 70 ವಿಧಾನಸಭಾ ಸ್ಥಾನಗಳ ಅಂಕಿಅಂಶಗಳು ಲಭ್ಯವಿದ್ದು, 19 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ದೆಹಲಿ ಎನ್‌ಸಿಟಿಯಲ್ಲಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ನವದೆಹಲಿ ಕ್ಷೇತ್ರದಲ್ಲಿ ತಮ್ಮ ಹತ್ತಿರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ಗಿಂತ ಹಿಂದುಳಿದಿದ್ದಾರೆ. ಇತರೆ ಪ್ರಮುಖ ಆಮ್ […]
15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈಗಾಗಲೇ ಹದಿಮೂರು ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಮುರುಘಮಠದ ಅನುಭವ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ’ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-2025’ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲೆ, ಸಂಗೀತ ಮತ್ತು ಇತರೆ ಸಾಂಸ್ಕೃತಿಕ ಕಲೆಗಳನ್ನು ಕಲಿಸುವ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿ […]
ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ […]