ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ನಿವಾಸ ಶೋಧ..!

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಮನೆ ಸೇರಿದಂತೆ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ಮಾಡಿದ್ದಾರೆ. ಗದಗ ನಗರದ ಹುಡ್ಕೋ ಕಾಲೊನಿಯ ಗಂಗಾಧರ ಶಿರೋರ ಅವರ ಮನೆ ಹಾಗೂ ನಗರದ ಸಂಬಂಧಿಕರ ಮತ್ತು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಅವರ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಪೋಲಿಸರು […]

ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ ..!

ಶಿಕಾರಿಪುರ: ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದಾರೆ. ಈ ವೇಳೆ ತಾಲೂಕ್ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರಸಾದ್ ಮಾತನಾಡಿ ಪೌರ ಕಾರ್ಮಿಕರು ಹಾಗೂ ಪೌರ ನೌಕರರು ಪುರಸಭೆ ಮುಂಭಾಗದ ಹೊರ ಗುತ್ತಿಗೆ ಪದ್ಧತಿ ಸ್ಥಗಿತಗೊಳಿಸಿ, ಪೌರ ಕಾರ್ಮಿಕರನ್ನು, ನೌಕರರನ್ನು ಕಾಯಂಗೊಳಿಸಬೇಕು. ಜೀವನ ಭದ್ರತೆ ಇಲ್ಲದೆ, ಅನೇಕ ವರ್ಷಗಳಿಂದಲೂ ಪೌರ ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲರನ್ನೂ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಇಲ್ಲದಿದ್ದರೆ, ಮುಷ್ಕರ […]

ಶಿಕಾರಿಪುರ ಪುರಸಭೆಯಲ್ಲಿ ಭೂ ಪರಿವರ್ತನೆ ಬ್ರಹ್ಮಾಂಡ ಭ್ರಷ್ಟಾಚಾರ:ಗೋಣಿ ಪ್ರಕಾಶ್ ಆರೋಪ

ಶಿಕಾರಿಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಜಮೀನು ಭೂ ಪರಿವರ್ತನೆ ಎನ್ ಓ ಸಿ ನೀಡಲು ಪುರಸಭಾ ಮುಖ್ಯಾಧಿಕಾರಿಗಳ ಹಾಗೂ ನಿಕಟಪೂರ್ವ ಅಧ್ಯಕ್ಷರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಪುರಸಭಾ ಸದಸ್ಯ ಗೋಣಿ ಪ್ರಕಾಶ್ ಗಂಭೀರವಾಗಿ ಆರೋಪಿಸಿದ್ದಾರೆ. ಪುರಸಭಾ ಸಭಾಂಗಣದಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣದ ಪುರಸಭೆಗೆ ಒಳಪಡುವ ರೈತರು ನಿವೇಶನೆ ಭೂ ಪರಿವರ್ತನೆ ಏನ್ ಓ ಸಿ‌ ನೀಡಲು ತಮ್ಮ ಜಮೀನುಗಳ ದಾಖಲೆ ಸಹಿತ ಪುರಸಭೆಗೆ ಅರ್ಜಿ […]

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಗೇಟ್ ಪಾಸ್ : ರಮೇಶ್ ಗುಂಡ ಆರೋಪ..!

ಶಿಕಾರಿಪುರ ಪಟ್ಟಣದ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡಾರವರು ಮಾತನಾಡಿ ಪಟ್ಟಣದ ಹಾಗೂ ತಾಲೂಕಿನ ಅನೇಕ ಖಾಸಗಿ ವಿದ್ಯಾ ಸಂಸ್ಥೆಗಳು ಎಲ್ ಕೆ ಜಿ ಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿ ನಂತರಅಂಕಗಳು ಕಡಿಮೆ ಬಂದಿದೆ ಎಂದು 9ನೇ ತರಗತಿಯ ನಂತರ ಎಸ್ ಎಸ್ ಎಲ್ ಸಿ ಗೆ ಹೋಗಬೇಕಿದ್ದ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಖಾಸಗಿ ಶಾಲೆಗೆ ಅಥವಾ ಸರ್ಕಾರಿ ಶಾಲೆಗೆ ಹೋಗುವಂತೆ ಶಾಲೆಯಿಂದ ವರ್ಗಾವಣೆ ಪತ್ರ ನೀಡಿ ಕಳಿಸಿದ್ದಾರೆ ಎಂದು […]

ಉಪನೋಂದಣಿ ಕಚೇರಿ 2ನೇ ಮತ್ತು 4ನೇ ಶನಿವಾರ ಮತ್ತು ಭಾನುವಾರದಂದು ಕಾರ್ಯನಿರ್ವಹಣೆ..!

ಶಿವಮೊಗ್ಗ: ಜೂನ್ ಮಾಹೆಯಲ್ಲಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಉಪನೋಂದಣಿ ಕಚೇರಿ ಜೂ. 01, ತೀರ್ಥಹಳ್ಳಿ ಉಪನೋಂದಣಿ ಕಚೇರಿ ಜೂ.08, ಶಿಕಾರಿಪುರ ಉಪನೋಂದಣಿ ಕಚೇರಿ ಜೂ.14, ಸೊರಬ ಉಪನೋಂದಣಿ ಕಚೇರಿ ಜೂ.15, ಸಾಗರ ಉಪನೋಂದಣಿ ಕಚೇರಿ ಜೂ.22, ಭದ್ರಾವತಿ ಉಪನೋಂದಣಿ ಕಚೇರಿ ಜೂ.28 ಹಾಗೂ ಹೊಸನಗರ ಉಪನೋಂದಣಿ ಕಚೇರಿ ಜೂ.29 ರಂದು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿಕಾರಿಪುರ ತಾಲೂಕಿ‌‌ನ ಎರಡು ಗ್ರಾಮ ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟ..!

ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಮತ್ತು ಬಳ್ಳಿಗಾವಿ ಗ್ರಾಮ ಪಂಚಾಯತಿ ತಲಾ‌ 1 ಕ್ಷೇತ್ರಕ್ಕೆ ಮೆ.25 ರಂದು ಉಪ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಇಂದು ಪ್ರಕಟವಾಗಿದೆ‌. ಅಂಬಾರಗೊಪ್ಪ ಗ್ರಾಮ ಪಂಚಾಯತಿ ಒಂದು ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ 4 ಜನ ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದು ಕಾಂಗ್ರೆಸ್ ಬೆಂಬಲಿತ ಮಂಜುನಾಯ್ಕ್ ಅವರು 216 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದಾರೆ. ಸುರೇಶ್ ನಾಯ್ಕ್ 77 ಮತ್ತು ಹಾಗೂ ರಘುನಾಯ್ಕ್ 74 ದಯಾನಂದನಾಯ್ಕ್ 23 ಮತಗಳನ್ನು ಪಡೆದುಕೊಂಡಿದ್ದಾರೆ. ಬಳ್ಳಿಗಾವಿ ಗ್ರಾಮ ಪಂಚಾಯತಿ ಮಳ್ಳೂರು […]

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು‌ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಶಿಷ್ಟ ರಕ್ಷಣೆ-ದುಷ್ಟರ […]

ಸರ್ಕಾರದ ಎರಡು ವರ್ಷದಲ್ಲಿ ಅತ್ಯುತ್ತಮ ಕಾರ್ಯ: ಸಚಿವ ಮಧು ಬಂಗಾರಪ್ಪ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ: ದರ್ಶನ್ ಉಳ್ಳಿ

ಶಿಕಾರಿಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಪರ ಜನಸಾಮಾನ್ಯರ ಪರವಾದ‌ ಆಡಳಿತ ನೀಡಿದೆ‌ ಜೊತೆ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಎರಡು ವರ್ಷದಲ್ಲಿ ಶಿಕ್ಷಣ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಇತಿಹಾಸದಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಮೂಲಕ ಇದುವರೆಗೂ ಯಾವ ಸಚಿವರು ಮಾಡದೇ ಇರುವ ಕೆಲಸವನ್ನು ಮಾಡಿದ್ದಾರೆ‌. 13 ಸಾವಿರ ಕಾಯಂ ಶಿಕ್ಷಕರ ನೇಮಕಾತಿ,ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಶಿಕ್ಷಕರ ನೇಮಕ ಮುಂದಿನ ದಿನಗಳಲ್ಲಿ 71 ಸಾವಿರ ಶಿಕ್ಷಕರ […]

ಶಿಕಾರಿಪುರ: ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಕಾರ್ಯಾಗಾರ..!

ಶಿಕಾರಿಪುರ: ಭಾರತೀಯ ವಿದ್ಯಾರ್ಥಿ ಸಂಘ ಶಿಕಾರಿಪುರ ಶಾಖೆ ಹಾಗೂ ಶ್ರೀ ಶಿವಶರಣರ ಮಾದರ ಚನ್ನಯ್ಯ ಜನ್ಮಸ್ಥಳ ಅಭಿವೃದ್ಧಿ ಸಮಿತಿ ಬಳ್ಳಿಗಾವಿ ವತಿಯಿಂದ ಎಸ್ಎಸ್ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನಗ ಕಾರ್ಯಾಗಾರವನ್ನು ದಿ:30 ರಂದು ಪಟ್ಟಣದ ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ಮುಖೇಶ್ ಮತ್ತಿಕೊಟ್ಟೆ ತಿಳಿಸಿದ್ದಾರೆ. ಪಟ್ಟಣದ ಪತ್ರಿಕಾ‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ ಎಸ್ ಎಲ್ ಸಿ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ಶಿಕ್ಷಣ ತಜ್ಞ […]