ಶಿರಾಳಕೊಪ್ಪದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ: ಶಿಕಾರಿಪುರದಲ್ಲಿ ಶೀಘ್ರದಲ್ಲಿ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರ : ಶಿರಾಳಕೊಪ್ಪ ಪಟ್ಟಣದಲ್ಲಿ ಇಂದು ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಈಗಾಗಲೇ ಸೊರಬ ಆನವಟ್ಟಿ, ಶಿರಾಳಕೊಪ್ಪ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದು. ಮುಂದಿನ ದಿನಗಳಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಸಹ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಿದ್ದೇವೆ ಎಂದರು. ದಿವಂಗತ ಶ್ರೀಮತಿ ಇಂದಿರಾ ಗಾಂಧಿ ಪ್ರಧಾನಿಯಾದ ಸಮಯದಲ್ಲಿ ಬಡವರ ಕಲ್ಯಾಣಕ್ಕಾಗಿ 20 ಅಂಶಗಳ ಕಾರ್ಯಕ್ರಮವನ್ನು ಅವರ ಹಮ್ಮಿಕೊಂಡಿದ್ದು. ಅದರಲ್ಲಿ ಹಸಿವು ಮುಕ್ತ ಭಾರತ ಕಾರ್ಯಕ್ರಮವು ಒಂದಾಗಿದೆ. ವಿರೋಧ ಪಕ್ಷದವರು ಇಷ್ಟು ದಿನ ನಾವು […]

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ :ಜನರು ಆತಂಕ ಪಡುವ ಅಗತ್ಯವಿಲ್ಲ :ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ […]

ಕುವೆಂಪು ವಿವಿ, ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಯಡವಟ್ಟು,ಪರೀಕ್ಷೆ ದಿಢೀರ್ ರದ್ದು: ಗೊದ್ದಲಕ್ಕೆ ಕಾರಣರಾದ ಅಧ್ಯಾಪಕರ ವಿರುದ್ಧ ಕ್ರಮಕ್ಕೆ ಸೂಚನೆ

ಶಿವಮೊಗ್ಗ : ಪ್ರಶ್ನೆ ಪತ್ರಿಕೆಯಲ್ಲಿನ ಗೊಂದಲದಿಂದಾಗಿ ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಕನ್ನಡ ಐಚ್ಛಿಕ ಪರೀಕ್ಷೆ ದಿಢೀ‌ರ್ ರದ್ದಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ಹಿಂಪಡೆದು ಕಳುಹಿಸಲಾಗಿದೆ. ಬಿ.ಎ. 6ನೇ ಸೆಮಿಸ್ಟರ್ ಐಚ್ಛಿಕ ಕನ್ನಡ ಪರೀಕ್ಷೆ (ಪ್ರಶ್ನೆ ಪತ್ರಿಕೆ ಸಂಖ್ಯೆ 30632) ಇಂದು ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಬದಲಾದ ಹಿನ್ನೆಲೆ ಗೊಂದಲ ಉಂಟಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಲಕೋಟೆ ತೆರೆದಾಗ ಪ್ರಶ್ನೆ ಪತ್ರಿಕೆಯಲ್ಲಿನ ಸಮಸ್ಯೆ ಗೊತ್ತಾಗಿದೆ. ಆತಂಕ, ಗೊಂದಲದಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ ಇವತ್ತು […]

ಮುಂಗಾರು ಪೂರ್ವ ಮಳೆಗೆ ಅಧಿಕಾರಿಗಳು ಮನಚ್ಚರಿಕೆ‌ ವಹಿಸಿ: ಸಂಸದ ಬಿವೈ ರಾಘವೇಂದ್ರ ಸೂಚನೆ

ಶಿಕಾರಿಪುರ: ತಾಲ್ಲೂಕಿನಲ್ಲಿ ಮುಂಗಾರು ಪೂರ್ವ ಮಳೆ ನಿರೀಕ್ಷೆಗಿಂತಲೂ ಹೆಚ್ಚಾಗಿದ್ದು ಯಾವುದೆ ಅನಾಹುತ ಆಗದಂತೆ ಈಗಲೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದಲ್ಲಿ ಗುರುವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಮುಂಗಾರು ಆರಂಭಕ್ಕೂ ಮುನ್ನವೆ ತಾಲ್ಲೂಕಿನ ಅಂಜನಾಪುರ, ಅಂಬ್ಲಿಗೊಳ್ಳ ನಾಲೆ ಸ್ವಚ್ಛಗೊಳಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು, ಶಾಲೆ, ಹಾಸ್ಟೆಲ್ ಆರಂಭಗೊಂಡ ನಂತರ ಸ್ವಚ್ಚತೆ ಕೈಗೊಳ್ಳದೆ ಮಳೆಗಾಲಕ್ಕೂ ಮುನ್ನೆಚ್ಚರಿಕೆ ಸೇರಿ ಈಗಲೆ ಯಾವುದೆ ಸಣ್ಣ ಪುಟ್ಟ ಕೆಲಸ ಪೂರ್ಣಗೊಳಿಸಬೇಕು. ಆರೋಗ್ಯ ಕೇಂದ್ರದಲ್ಲೂ ಮಳೆಗಾಲಕ್ಕೆ ಅಗತ್ಯವಿರುವ ಔಷಧ […]

ಸಾರ್ವಜನಿಕರಿಗೆ ತೊಂದರೆ ಕೊಡದೆ ಜವಾಬ್ದಾರಿಯಿಂದ‌ ಕರ್ತವ್ಯ ನಿರ್ವಹಿಸಿ: ಶಾಸಕ ಬಿ ವೈ ವಿಜಯೇಂದ್ರ

ಶಿಕಾರಿಪುರ: ಪಟ್ಟಣದ ತಾಲೂಕ್ ಕಛೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಿಸಿ ಶಾಸಕ ಬಿವೈ ವಿಜಯೇಂದ್ರ ಮಾತನಾಡಿದರು. ಸರ್ಕಾರ ಕಂದಾಯ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಗಮನಿಸಿ ತಂತ್ರಜ್ಞಾನ ಬಳಸಿಕೊಂಡು‌ ಜನರಿಗೆ ಹೆಚ್ಚು ಸೇವೆ‌ ಒದಗಿಸು ಅಧಿಕಾರಿಗಳಿಗೆ ಸಹಕಾರಿಯಾಗಲು ಲ್ಯಾಪ್ ಟಾಪ್ ನೀಡಲಾಗಿದೆ‌.ಶಿಕಾರಿಪುರ ತಾಲೂಕು ರಾಜ್ಯದಲ್ಲಿ ಅಭಿವೃದ್ಧಿ ಹೊಂದಿದ ತಾಲೂಕು ಎಂಬ ಹೆಗ್ಗಳಿಕೆಗೆ ಸಾಕ್ಷಿಯಾಗಿದೆ ಅಧಿಕಾರಿಗಳು ಜ‌ನರಿಗೆ ತೊಂದರೆ ಕೊಡದೆ ಪ್ರೀತಿ ವಿಶ್ವಾಸದಿಂದ ಕೆಲಸ ಮಾಡಬೇಕು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು‌. ಸಂಸದ ಬಿವೈ ರಾಘವೇಂದ್ರ […]

ರಾಜ್ಯದ ಐದು ನವೀಕೃತ ರೈಲು ನಿಲ್ದಾಣಗಳು ನಾಳೆ ಪ್ರಧಾನಿಯಿಂದ ವರ್ಚ್ಯುಯಲ್ ಮೂಲಕ ಲೋಕಾರ್ಪಣೆ

ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಅತ್ಯಾಧುನಿಕ ಸೌಲಭ್ಯಗಳಿಂದ ನವೀಕೃತಗೊಳಿಸಲಾಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಐದು ರೈಲು ನಿಲ್ದಾಣಗಳನ್ನು ವರ್ಚ್ಯುಯಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಈ ಪೈಕಿ ಬೆಳಗಾವಿಯ ಗೋಕಾಕ ರೋಡ್ ರೈಲು ನಿಲ್ದಾಣ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮಾರುಕಟ್ಟೆಯ ಆಕರ್ಷಣೆ ಹಾಗೂ ಗೋಕಾಕ ಫಾಲ್ಸ್ ದಂತಹ ಪ್ರವಾಸಿ ಕೇಂದ್ರದ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಪ್ರಮುಖ ರೈಲು ನಿಲ್ದಾಣವಾಗಿರುವ ಗೋಕಾಕ ರೋಡ್ […]

ರಾಜಕಾಲುವೆ ಒತ್ತುವರಿ ತೆರವು ಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ

ರಾಜಧಾನಿ ಬೆಂಗಳೂರಿನ ಮಳೆ ಹಾನಿ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ನಗರ ಪ್ರದಕ್ಷಿಣೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ವೇಳೆ ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದ್ದಾರೆ. ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಬಳಿಕ ಊಃಖ ಲೇಔಟ್, […]

ಬೆಂಗಳೂರು ಜಲಾವೃತ:ರಾಜ್ಯ ಸರ್ಕಾರ ಮೋಜು: ಬಿ ವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಹೊಸಪೇಟೆಯಲ್ಲಿ ಮೋಜು ಮಾಡುತ್ತಿದೆ. ಎರಡು ವರ್ಷ ಪೂರ್ಣಗೊಳಿಸಿದ್ದನ್ನು ತಿಳಿಸಿ ಮೋಜು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ನಿಯೋಗವು ಇಂದು ಸಿಲ್ಕ್ ಬೋರ್ಡಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿತ್ತು. ಮಳೆ ಹಾನಿಗೆ ಕಾರಣಗಳು, ಆಗಿರುವ ಹಾನಿ ಕುರಿತು ನಿಯೋಗವು ಪರಿಶೀಲಿಸಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.ಬೆಂಗಳೂರಿನ […]

ಶಿಕಾರಿಪುರ ಸರ್ಕಾರಿ ವೈದ್ಯ ಲೋಕಯುಕ್ತ ಬಲೆಗೆ..!

ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯರೊಬ್ಬರು ಲಂಚವನ್ನು ಸ್ವೀಕರಿಸುವ ವೇಳೆ ಲೋಕಯುಕ್ತ ಅಧಿಕಾರಿಗಳು‌ ದಾಳಿ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬಾತ ತಮ್ಮ ಸಂಬಂಧಿಕರೊಬ್ಬ ಮರಣೋತ್ತರ ವರದಿ ಪಡೆಯಲು ಅರ್ಜಿ ಸಲ್ಲಿಸಿದ್ದರು ವರದಿಯನ್ನು ನೀಡಲು ಡಾ.ಗೋಪಲ್ ಜಿ ಹರಗಿ‌ ಅವರು 20,000 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು 10,000 ಲಂಚದ ಹಣವನ್ನು ನೀಡುವ ವೇಳೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಟ್ರಾಪ್ ಕಾರ್ಯಾಚರಣೆಯಲ್ಲಿ ಲೋಕಯುಕ್ತ ಅಧೀಕ್ಷಕರಾದ ಮಂಜುನಾಥ ಚೌಧರಿ ಉಪ ಅಧೀಕ್ಷಕರಾದ […]

ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ ವಿವಿಧ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ […]