ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಒಪ್ಪಿಗೆ

ನವದೆಹಲಿ: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿಂದು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲವು ರಾಜ್ಯಗಳು ಜಾತಿ ಸಮೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು ಎಂಬ ಹಿನ್ನೆಲೆಯಲ್ಲಿ ಜನಗಣತಿಯಲ್ಲಿ ಜಾತಿಗಣತಿಯ ಮಾಹಿತಿಯನ್ನು ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಜಾತಿ […]
ದೇಶದ ಪವಿತ್ರ ಚಾರ್‌ಧಾಮ್ ಯಾತ್ರೆ ನಾಳೆಯಿಂದ ಆರಂಭ

ಭಾರತದ ಅತ್ಯಂತ ಪವಿತ್ರ ತೀರ್ಥಯಾತ್ರೆಯಲ್ಲಿ ಒಂದಾದ ಉತ್ತರಾಖಂಡದಲ್ಲಿ ನಡೆಯುವ ಚಾರ್‌ಧಾಮ್ ಯಾತ್ರೆ ನಾಳೆ ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಆರಂಭವಾಗಲಿದೆ. ಉತ್ತರ ಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ಬಾಗಿಲು ತೆರೆಯುವುದರೊಂದಿಗೆ ಯಾತ್ರೆ ಆರಂಭವಾಗಲಿದೆ. ರುದ್ರಪ್ರಯಾಗ್ ಜಿಲ್ಲೆಯ ಕೇದರಾನಾಥ ದೇವಾಲಯದ ದ್ವಾರಗಳು ಮೇ 2 ರಂದು ಹಾಗೂ ಚಮೋಲಿ ಜಿಲ್ಲೆಯ ಬದರಿನಾಥ್ ಧಾಮದ ಬಾಗಿಲುಗಳು ಮೇ 4 ರಂದು ತೆರಯಲಿದೆ. ವೈದಿಕ ಸ್ತೋತ್ರಗಳು ಮತ್ತು ಇತರೆ ಧಾರ್ಮಿಕ ಆಚರಣೆಗಳ ನಡುವೆ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ […]
ಭಾರತೀಯ ಸೈನ್ಯಕ್ಕೆ ಸಂಪೂರ್ಣ ಸ್ವಾತಂತ್ರ್ಯ : ಗುರಿ, ಸಮಯ ನಿರ್ಧರಿಸಿ ಉಗ್ರರನ್ನು ಹೊಡೆದು ಹಾಕಿ: ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ಭೂಸೇನೆ, ವಾಯುಸೇನೆ, ನೌಕಾಸೇನೆಯ ಮುಖ್ಯಸ್ಥರ ಜೊತೆ ಸಭೆ ನಡೆಸಿದರು. ಭಯೋತ್ಪಾದನೆಯನ್ನು ಸಂಪೂರ್ಣ ತೊಡೆದು ಹಾಕುವುದು ನಮ್ಮ ರಾಷ್ಟ್ರೀಯ ಸಂಕಲ್ಪ. ಭಾರತೀಯ ಸೇನೆಯ […]
ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು […]
ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ : ಗುರುದತ್ತ ಹೆಗಡೆ

ಶಿವಮೊಗ್ಗ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಕುರಿತಂತೆ ಮೇ 5 ರಿಂದ 21 ವರೆಗೆ ಜಿಲ್ಲೆಯಲ್ಲಿ ಗಣತಿದಾರರು ಮನೆ-ಮನೆಗೆ ತೆರಳಿ ಸಮೀಕ್ಷೆ ಕಾರ್ಯ ನಡೆಸಲಿದ್ದು ಈ ಸಮೀಕ್ಷೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಸಮುದಾಯದವರು ತಮ್ಮ ಮೂಲಜಾತಿಯನ್ನು ತಿಳಿಸಬಹುದಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಆಯೋಗದಿಂದ ಪರಿಶಿಷ್ಟ […]
ಶಿಕಾರಿಪುರ ಪೋಲಿಸರ ಭರ್ಜರಿ ಕಾರ್ಯಚರಣೆ : 16 ಬೈಕ್ ಗಳ ವಶ..!

ಶಿಕಾರಿಪುರ ಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೋಲಿಸರು 16 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳುವಾದ ಬೈಕ್ ಹಾಗೂ ಆರೋಪಿತರ ಪತ್ತೆಗಾಗಿ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಅನಿಲ್ ಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ. ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಕೇಶವ್* […]
ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ :ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]
ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮ ರಥೋತ್ಸವ

ಶಿಕಾರಿಪುರ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ ಶನುವಾರ ಅದ್ದೂರಿಯಾಗಿ ನೆರವೇರಿತು. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು. ರಥೋತ್ಸವದ ವೇಳೆ ಗರುಡ ದರ್ಶನ..! ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ ನಂತರ ರಥವನ್ನು ಎಳೆಯಲಾಗುತ್ತದೆ. ಮಾಜಿ ಸಿಎಂ ಬಿಎಸ್ ವೈ ಭಾಗಿ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹುಚ್ಚರಾಯಸ್ವಾಮಿಯ ಪರಮಭಕ್ತರಾಗಿದ್ದು ರಥೋತ್ಸವಕ್ಕೆ ತಪ್ಪದೆ ಆಗಮಿಸುತ್ತಾರೆ. ಮಕ್ಕಳಾದ ಸಂಸದ ಬಿವೈ […]
ಹುಚ್ಚರಾಯಸ್ವಾಮಿ ಜಾತ್ರೆ ಪ್ರಯುಕ್ತ ಪುರಸಭೆಯಿಂದ ಅನ್ನಸಂತರ್ಪಣೆ ಪಾನಕ ವಿತರಣೆ

ಶಿಕಾರಿಪುರ ಪುರಸಭೆಯ ವತಿಯಿಂದ ಶ್ರೀ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಿರುವ ಸರ್ವ ಭಕ್ತಾದಿಗಳಿಗೆ ತರಳಬಾಳು ಸಮುದಾಯ ಭವನದಲ್ಲಿ ದಿನಾಂಕ 11.04.2025 ರ ಶುಕ್ರವಾರ ರಾತ್ರಿ ಅನ್ನ ಸಂತರ್ಪಣೆ ವಿತರಣೆ ನಡೆಸಲಾಗುವುದು. ದಿನಾಂಕ 12.04.2025 ರ ಶನಿವಾರ ಬೆಳಗ್ಗೆ 6: 30ರಿಂದ 11:30ವರೆಗೆ ಉಪಹಾರ ವ್ಯವಸ್ಥೆ ಮತ್ತು ಸಂಜೆ 5:00 ವರೆಗೆ ಪಾನಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸರ್ವ ಭಕ್ತಾದಿಗಳು ಆಗಮಿಸಿ ಶ್ರೀ ಹುಚ್ಚರಾಯಸ್ವಾಮಿ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ. ಪಟ್ಟಣದ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕರಿಂದ ಪಾನಕ,ಮಜ್ಜಗೆ […]
ದೂಪದಹಳ್ಳಿ ಬಳಿ ಮಹಿಷಿ ಮಠ ದರೋಡೆ ಆರೋಪಿ ಕಾಲಿಗೆ ಗುಂಡು..!

ಶಿಕಾರಿಪುರ ಪಟ್ಟಣದ ಪ್ರಗತಿ ನಗರದ ನಿವಾಸಿ ಆರೋಪಿ ಶ್ರೀನಿವಾಸ್ ಅವರ ಎಡಗಾಲಿಗೆ ಮಾಲೂರು ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ಮಾಲೂರು ಪಿಎಸ್ಐ ವ್ಯಾಪ್ತಿಯಲ್ಲಿ ನಡೆದ ಮಹಿಷಿ ಮಠದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.ಆತನಿಗೂ ಅಪರಾಧ ಹಿನ್ನೆಲೆ ಇದೆ. ಪಿಎಸ್ ಐ ಕುಮಾರ್ ಮತ್ತು ತಂಡ ಆರೋಪಿ ಶ್ರೀನಿವಾಸ್ ಅವರನ್ನು ಹಿಡಿಯಲು ಪ್ರಯತ್ನಿಸಿದಾಗ ಪೋಲಿಸ್ ಸಿಬ್ಬಂದಿ ಸಂತೋಷ್ ಮೇಲೆ ಆರೋಪಿ ದಾಳಿ ಮಾಡಲು ಯತ್ನಿಸಿದಾನೆ. ಪದೇ ಪದೇ ಎಚ್ಚರಿಕೆ ನೀಡಿದ್ದರೂ ಶರಣಾಗದೆ ಮತ್ತೆ ದಾಳಿ ಮಾಡಲು […]