ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. […]
ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದ್ದಿ ಜಾಹೀರಾತಿಗಾಗಿ- 7411515737
ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಯತ್ನಾಳ್ ಉಚ್ಚಾಟನೆ..!

ಬಿಜೆಪಿಯ ಹಿರಿಯ ನಾಯಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ದ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು […]
ಚಿಕ್ಕಮಗಳೂರಿಗೆ ಸಮೀಪವೇ ಬಂದ ಒಂಟಿ ಸಲಗ: ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು: ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಸಿಸಿಟಿವಿಯಲ್ಲಿ ಸೆರೆನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ […]
ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು:ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ […]
ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮಾರ್ಚ್ 15 ರಿಂದ 17 ವರೆಗೆ ತಾತ್ಕಾಲಿಕ ನಿರ್ಬಂಧ..!

ಚಿಕ್ಕಮಗಳೂರು ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು […]
ಪೋಲಿಸರು ಸ್ವತ ವಾಹನದ ಮೇಲೆ ಪೋಲಿಸ್ ಎಂದು ಬರೆಸುವಂತಿಲ್ಲ:ಡಾ.ಜಿ ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್ ಉತ್ತರಿಸಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು […]
ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರ ಮಾಹಿತಿ ನೀಡಲು ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ.ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ […]
3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ

ವಿಧಾನಪರಿಷತ್ತು: ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್ ನ 3025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ ಮೈಸೂರು ಮಹಾರಾಜರು 1900ರಲ್ಲಿ ಅಧಿಸೂಚನೆ ಹೊರಡಿಸಿರುತ್ತಾರೆ. ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ […]
ಟೆಕ್ನಿಕಲ್ ಆಫಿಸರ್ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್‌ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ(ವಿಎಲ್‌ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಸಂಸ್ಥೆಯ ವೆಬ್‌ಸೈಟ್ www.sims_shimogaj.com ನಲ್ಲಿ ಪಡೆಯತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ […]