ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು ಅಪಾರ ಪ್ರಮಾಣದ ಅರಣ್ಯ ನಾಶ..!

ಚಿಕ್ಕಮಗಳೂರು : ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮುಳ್ಳಯ್ಯನಗಿರಿ, ಸೀತಾಳ್ಳಯ್ಯನಗಿರಿ ಪರ್ವತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು 15 ಕಿಲೋ ಮೀಟರ್ ಗು ಹೆಚ್ಚು ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ ಸ್ಥಳಕ್ಕೆ ಅಗ್ನಿ ಶಾಮಕದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದರು ಬೆಂಕಿ ಸಂಪೂರ್ಣ ನಂದಿಸಲು ಸಾಧ್ಯವಾಗಿಲ್ಲ. ಬೆಂಕಿಯಿಂದಾಗಿ ಈ ಪರ್ವತದಲ್ಲಿರುವ ಅಪರೂಪದ ಔಷಧಿಗುಣಗಳ ಸಸ್ಯ ಸಂಪತ್ತು,ಇತರೆ ಮರ ಗಿಡಗಳು ನಾಶವಾಗಿವೆ. ಇನ್ನು ಕಳೆದ […]

ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊಲೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅಳಿಯನಿಂದ ಅತ್ತೆಯ ಕೊಲೆ ನಡೆದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಘಟನೆ ವಿವರ:65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್‌ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಕೊಲೆ ಮಾಡಿದ ಬಳಿಕ ಶಶಿಧರ್ ಪರಾರಿಯಾಗಿದ್ದಾನೆ. ಪೊಲೀಸರ ಪರಿಶೀಲನೆ:ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪರಾರಿಯಾಗಿರುವ ಶಶಿಧರ್‌ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕೊಲೆಯ ಹಿಂದಿನ ಕಾರಣ:ಕೊಲೆಯ ಹಿಂದಿನ […]

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ದರಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು:ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿ‌ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ […]

ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸೂಚನೆ ನೀಡಿದರು. ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. […]

ಕೆಪಿಸಿಸಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ಧ : ಸಹಕಾರ ಸಚಿವ ಕೆ‌.ಎನ್ ರಾಜಣ್ಣ

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ದ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ’ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸಿದ್ಧಾಂತಕ್ಕೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯಗಳು ಬೆಂಬಲ ನೀಡಿದ್ದು, ಶೋಷಿತ ವರ್ಗಗಳ ಸಮಾವೇಶ ಏರ್ಪಡಿಸುವ […]

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಹೆಚ್ಡಿಕೆ ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಈ ಪ್ರದೇಶ ಬೆಂಗಳೂರಿನ ಭಾಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ […]

ದರ ಏರಿಕೆ ಮಾಡಿದ ಬಿಎಂಆರ್​ಸಿಎಲ್​ಗೆ ಶಾಕ್ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ..!

ಬೆಂಗಳೂರು: ಬಿಎಂಆರ್​ಸಿಎಲ್​​ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಮ್ಮ ಮೆಟ್ರೋಗೆ ಶಾಕ್ ನೀಡಿದ್ದಾರೆ‌‌ ಟಿಕೆಟ್ ದರವನ್ನು ಏರಿಕೆ ಮಾಡಿದ್ದರಿಂದ ಆಕ್ರೋಶಗೊಂಡಿರುವ ಪ್ರಯಾಣಿಕರು ಓಡಾಡುವ ಸಂಖ್ಯೆಯಲ್ಲಿ ಇಳಿಕೆ‌ ಕಂಡಿದೆ. ಮೆಟ್ರೋಗೆ ನೀಡುವ ಹಣಕ್ಕಿಂತ ಆಟೋ, ಬೈಕ್ ಬೆಸ್ಟ್​ ಎನ್ನುತ್ತಿದ್ದಾರೆ.ಹೀಗಾಗಿ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋನಲ್ಲಿ ಪ್ರಯಾಣಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ, ಇದೀಗ ದರ ಏರಿಕೆಯಾದ ಮೇಲೆ ಪ್ರಯಾಣಿಕರ ಸಂಖ್ಯೆ 35% […]

ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

ಬೆಂಗಳೂರು, ಫೆ.13: ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ […]

ಸೊರಬ ತಾಲೂಕಿನಲ್ಲಿ ನೀರಾವರಿ ಬ್ಯಾರೇಜ್‌ಗಳ ನಿರ್ಮಾಣ ಕಾಮಗಾರಿಗೆ ಚಾಲನೆ: ಮಧು ಬಂಗಾರಪ್ಪ

ಶಿವಮೊಗ್ಗ: ವರದಾನದಿಯ ಅಭಿವೃದ್ಧಿಗಾಗಿ ಕೈಗೆತ್ತಿ ಕೊಂಡಿರುವ ಈ ಯೋಜನೆಗಳಿಂದಾಗಿ ತಾಲೂಕಿನ 39 ಗ್ರಾಮಗಳ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಕೆರೆ-ಕಟ್ಟೆ-ಕಾಲುವೆಗಳ ಭರ್ತಿ ಮಾಡಲು ಸಹಕಾರಿಯಾಗಲಿದೆ. ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. 3013 ಎಕರೆ ಭೂ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. 53 ಕಿ.ಮೀ. ಯೋಜನಾ ವ್ಯಾಪ್ತಿಯ ಉದ್ದವಿದ್ದು, ಅಂದಾಜು 218.62 ಎಂ.ಸಿ.ಎಫ್ .ಟಿ. ಸಾಮರ್ಥ್ಯದ ನೀರಿನ ಶೇಖರಣೆ ಆಗಲಿದೆ ಎಂದರು. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಸೊರಬ ತಾಲೂಕಿನ ಕಡಸೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ […]

ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ – ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110ಕೆ.ವಿ. ವಿದ್ಯುತ್ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ ನಡೆಸಿ, ರೈತರಿಗೆ ಅನುಕೂಲವಾಗುವ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಇಂದು ನಗರದ ಲೋಕೋಪಯೋಗಿ ಭವನದಲ್ಲಿ ವಿವಿಧ ಇಲಾಖೆಗಳ ಹಲವು ಯೋಜನೆಗಳ ಪ್ರಗತಿ ಪರಿಶೀಲನೆ ಸರಣಿ ಸಭೆಗಳ ಅಧ್ಯಕ್ಷತೆ […]