ಕೆಪಿಸಿಸಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ಧ : ಸಹಕಾರ ಸಚಿವ ಕೆ‌.ಎನ್ ರಾಜಣ್ಣ

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ದ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ’ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸಿದ್ಧಾಂತಕ್ಕೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯಗಳು ಬೆಂಬಲ ನೀಡಿದ್ದು, ಶೋಷಿತ ವರ್ಗಗಳ ಸಮಾವೇಶ ಏರ್ಪಡಿಸುವ […]

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಹೆಚ್ಡಿಕೆ ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಈ ಪ್ರದೇಶ ಬೆಂಗಳೂರಿನ ಭಾಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ […]

ದರ ಏರಿಕೆ ಮಾಡಿದ ಬಿಎಂಆರ್​ಸಿಎಲ್​ಗೆ ಶಾಕ್ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ..!

ಬೆಂಗಳೂರು: ಬಿಎಂಆರ್​ಸಿಎಲ್​​ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಮ್ಮ ಮೆಟ್ರೋಗೆ ಶಾಕ್ ನೀಡಿದ್ದಾರೆ‌‌ ಟಿಕೆಟ್ ದರವನ್ನು ಏರಿಕೆ ಮಾಡಿದ್ದರಿಂದ ಆಕ್ರೋಶಗೊಂಡಿರುವ ಪ್ರಯಾಣಿಕರು ಓಡಾಡುವ ಸಂಖ್ಯೆಯಲ್ಲಿ ಇಳಿಕೆ‌ ಕಂಡಿದೆ. ಮೆಟ್ರೋಗೆ ನೀಡುವ ಹಣಕ್ಕಿಂತ ಆಟೋ, ಬೈಕ್ ಬೆಸ್ಟ್​ ಎನ್ನುತ್ತಿದ್ದಾರೆ.ಹೀಗಾಗಿ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋನಲ್ಲಿ ಪ್ರಯಾಣಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ, ಇದೀಗ ದರ ಏರಿಕೆಯಾದ ಮೇಲೆ ಪ್ರಯಾಣಿಕರ ಸಂಖ್ಯೆ 35% […]

ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

ಬೆಂಗಳೂರು, ಫೆ.13: ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ […]

ಸೊರಬ ತಾಲೂಕಿನಲ್ಲಿ ನೀರಾವರಿ ಬ್ಯಾರೇಜ್‌ಗಳ ನಿರ್ಮಾಣ ಕಾಮಗಾರಿಗೆ ಚಾಲನೆ: ಮಧು ಬಂಗಾರಪ್ಪ

ಶಿವಮೊಗ್ಗ: ವರದಾನದಿಯ ಅಭಿವೃದ್ಧಿಗಾಗಿ ಕೈಗೆತ್ತಿ ಕೊಂಡಿರುವ ಈ ಯೋಜನೆಗಳಿಂದಾಗಿ ತಾಲೂಕಿನ 39 ಗ್ರಾಮಗಳ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಕೆರೆ-ಕಟ್ಟೆ-ಕಾಲುವೆಗಳ ಭರ್ತಿ ಮಾಡಲು ಸಹಕಾರಿಯಾಗಲಿದೆ. ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. 3013 ಎಕರೆ ಭೂ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. 53 ಕಿ.ಮೀ. ಯೋಜನಾ ವ್ಯಾಪ್ತಿಯ ಉದ್ದವಿದ್ದು, ಅಂದಾಜು 218.62 ಎಂ.ಸಿ.ಎಫ್ .ಟಿ. ಸಾಮರ್ಥ್ಯದ ನೀರಿನ ಶೇಖರಣೆ ಆಗಲಿದೆ ಎಂದರು. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಸೊರಬ ತಾಲೂಕಿನ ಕಡಸೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ […]

ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ – ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110ಕೆ.ವಿ. ವಿದ್ಯುತ್ಪ್ರಸರಣಾ ಮಾರ್ಗದಲ್ಲಿ ಬರುವ ರೈತರೊಂದಿಗೆ ಸಂಬಂಧಿಸಿದ ಮೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಶೀಘ್ರ ಸಮಾಲೋಚನೆ ನಡೆಸಿ, ರೈತರಿಗೆ ಅನುಕೂಲವಾಗುವ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಇಂದು ನಗರದ ಲೋಕೋಪಯೋಗಿ ಭವನದಲ್ಲಿ ವಿವಿಧ ಇಲಾಖೆಗಳ ಹಲವು ಯೋಜನೆಗಳ ಪ್ರಗತಿ ಪರಿಶೀಲನೆ ಸರಣಿ ಸಭೆಗಳ ಅಧ್ಯಕ್ಷತೆ […]

ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಿರಿ – ಹಿಂದೂ ಜನಜಾಗೃತಿ ಸಮಿತಿ

ಶಿಕಾರಿಪುರ: ಫೆ14 ರ ವ್ಯಾಲೆಂಟೈನ್ ಡೇ ಯಂದು ನಡೆಯುವ ಅನಾಚಾರಗಳನ್ನು ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳವಾರ ಶಿಕಾರಿಪುರದ ತಾಲೂಕು ಕಚೇರಿ, ಡಿವೈಎಸ್ಪಿ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ 14 ಫೆಬ್ರವರಿಯನ್ನು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ದುಷ್ಟ ಪ್ರವೃತ್ತಿಯು ಭಾರತದಲ್ಲಿಯೂ ವ್ಯಾಪಕವಾಗಿ ಪಸರಿಸಿದೆ ಪಾಶ್ಚಾತ್ಯರ ವ್ಯಾಪಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವ ಪೀಳಿಗೆ ಭೋಗವಾದ ಮತ್ತು ಅನೈತಿಕತೆಯಲ್ಲಿ […]

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್‌ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ […]

ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಮದುವೆ: ಅಭಿಮಾನಿಗಳಿಗೆ ಮುಕ್ತ ಅವಕಾಶ

ಮೈಸೂರು : ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಅವರ ವಿವಾಹ ಫೆಬ್ರವರಿ 15ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ನೆರವೇರಲಿದ್ದು ಅಭಿಮಾನಿಗಳು ಪಾಲ್ಗೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ. ಈ ಕುರಿತು ಸ್ವತಃ ನಟ ಡಾಲಿ ಧನಂಜಯ್ ಅವರು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು ಎಲ್ಲವು ಮೈಸೂರಿನಿಂದಲೇ. ತಾಯಿ ಚಾಮುಂಡೇಶ್ವರಿ […]

ಮೂಲಭೂತ ಸೌಕರ್ಯ ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಹಿಸಿ ಗ್ರಾಮ ಅಧಿಕಾರಿಗಳ‌ ಪ್ರತಿಭಟನೆ..!

ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಆಚರಣದಲ್ಲಿ ಸೋಮವಾರ ಗ್ರಾಮ ಆಡಳಿತ‌ ಅಧಿಕಾರಿಗಳು ( ಗ್ರಾಮ ಲೇಕ್ಕಿಗರು) ಪ್ರತಿಭಟನೆ ಧರಣಿ ನಡೆಸಿದ್ದಾರೆ. ಕಂದಾಯ ಇಲಾಖೆಯ ಮೂಲ‌ ಆಧಾರ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಉತ್ತಮ ಕಛೇರಿ ಪೀಠೋಪಕರಣಗಳನ್ನು ಒದಗಿಸಬೇಕು ಹಾಗೂ ಇನ್ನು ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಫೆ.10 ರಂದು ಇಡೀ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು ತಾಲೂಕಿನ ಎಲ್ಲಾ ವಿಎ ಸಿಬ್ಬಂದಿಗಳು ಇಂದು ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆ ನಡೆಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಈ […]