ರಾಜ್ಯ ಮಟ್ಟದ ಡೊಳ್ಳು ಕುಣಿತದಲ್ಲಿಕುಸ್ಕೂರು ಸರ್ಕಾರಿ ಪ್ರೌಢ ಶಾಲೆ ಪ್ರಥಮ

ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ಗ್ರಾಮ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಡೊಳ್ಳು ಕುಣಿತ ಜನಪದ ನೃತ್ಯ ಸ್ಪರ್ಧೆಯಲ್ಲಿ, ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥನ ಪಡೆದಿದ್ದಾರೆ . ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ, ಎಸ್ ಡಿಎಂಸಿ ಕಮಿಟಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ‌. ಸುದ್ದಿ ಮತ್ತು ಜಾಹೀರಾತಿಗಾಗಿ-7411515737

ಚಿಕ್ಕಮಗಳೂರು : ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ..!

ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ಯಾಗಿದ್ದು ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ಮೂಡಿದೆ.

ಕೊವಿಡ್ ಲಸಿಕೆ ಅಡ್ಡಪರಿಣಾಮ ಸಮರ್ಪಕ ಸಂಶೋಧನೆಗೆ ಸಿಎಂ ಸೂಚನೆ..!

ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರಈ ಸಮಸ್ಯೆಯ ಮೂಲ ಪತ್ತೆಮಾಡಿ, […]

ದೆಹಲಿ ವಿಧಾನಸಭೆ ಚುನಾವಣೆ : ಬಿಜೆಪಿಗೆ ಭರ್ಜರಿ ಧಮಾಕ..!

ದೆಹಲಿ: ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಯಂತೆ ಎಲ್ಲಾ 70 ವಿಧಾನಸಭಾ ಸ್ಥಾನಗಳ ಅಂಕಿಅಂಶಗಳು ಲಭ್ಯವಿದ್ದು, 19 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ದೆಹಲಿ ಎನ್‌ಸಿಟಿಯಲ್ಲಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ನವದೆಹಲಿ ಕ್ಷೇತ್ರದಲ್ಲಿ ತಮ್ಮ ಹತ್ತಿರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್‌ ಗಿಂತ ಹಿಂದುಳಿದಿದ್ದಾರೆ. ಇತರೆ ಪ್ರಮುಖ ಆಮ್ […]

15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈಗಾಗಲೇ ಹದಿಮೂರು ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಮುರುಘಮಠದ ಅನುಭವ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ’ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-2025’ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲೆ, ಸಂಗೀತ ಮತ್ತು ಇತರೆ ಸಾಂಸ್ಕೃತಿಕ ಕಲೆಗಳನ್ನು ಕಲಿಸುವ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿ […]

ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ […]

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ‌ ಮತ್ತು ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್..!

ಬೆಂಗಳೂರು: ಮುಡಾ ಹಗರಣ ಕೇಸ್ ಸಿಬಿಐ ವಹಿಸಬೇಕು ಎಂದು ಸ್ನೇಹಮಹಿ‌ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ. ರಾಜ್ಯ ರಾಜಕಾರಣದಲ್ಲಿ ಬಾರಿ ಚರ್ಚೆಗೆ ಗ್ರಸವಾಗಿದ್ದ ಮುಡಾ ಹಗರಣ ಪ್ರಕರಣ ತನಿಖೆ ಲೋಕಯುಕ್ತ ನಡೆಸುತ್ತಿದ್ದು ಈಗಾಗಲೇ ತನ್ನ ವರದಿಯನ್ನು ಸಲ್ಲಿಸಿದೆ. ಈ ನಡುವೆ ಮುಡಾ ಹಗರಣ ಹೋರಾಟಗಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೋಳಿಸಿದ್ದ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಇನ್ನೊಂದೆಡೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಎದುರಾಗಿದ […]

ತಟಸ್ಥರು ಮೊದಲು ಬಿಎಸ್ ವೈ ವಿರುದ್ಧ ಟೀಕೆ‌ ಮಾಡುವವರ ಬಾಯಿ ಮುಚ್ಚಿಸಲಿ: ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಟಸ್ಥ ಎಂದು ಹೇಳಿಕೊಳ್ಳುವ ನಾಯಕರು ಮೊದಲಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದು . ಪಕ್ಷಕ್ಕೆ ಯಡಿಯೂರಪ್ಪರವರ ಕೊಡುಗೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವ ಕ್ಷಣದಲ್ಲಾದರೂ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಅನುಭವದ ಕೊರತೆ ಇದೆ ಎಂಬ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿ ರಾಜ್ಯಾಧ್ಯಕ್ಷನಾಗಿ ಅನುಭವ […]

ಸಚಿವರ ಭರವಸೆಗೆ ಪ್ರತಿಭಟನಾ ಧರಣಿ ಹಿಂಪಡೆದ ರೈತ ಸಂಘ..!

ಶಿಕಾರಿಪುರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ “ಬೃಹತ್ ಪ್ರತಿಭಟನಾ” ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿದರು. ಈಸೂರು ಭಾಗದಲ್ಲಿ ಕೆ.ಪಿ.ಟಿ.ಸಿ.ಎಲ್ 4.5 ಕಿ.ಮೀ. ದೂರವಿರುವ ಗ್ರೀಡ್ ಗೆ 20 ಕಿ.ಮೀ. ನಿಂದ ಹೈಟೆನ್ಷನ್ ವಿದ್ಯುತ್ ಮಾರ್ಗ ಯೋಜನೆ ರೂಪಿಸುತ್ತಿದೆ. ಇದು ಅವೈಜ್ಞಾನಿಕವಾಗಿದ್ದು “ಹೈಟೆನ್ಷನ್ ವಿದ್ಯುತ್ ಮಾರ್ಗ ನಿರ್ಮಾಣ” ಕಾಮಗಾರಿ ಮಾಡದಂತೆ ರೈತರು ಮನವಿ ಸಲ್ಲಿಸಿದರು. ಈ ಪ್ರದೇಶದಲ್ಲಿ ರೈತರು […]

ಶಿಕಾರಿಪುರಕ್ಕೆ ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ‌ ಸಾರ್ವಜನಿಕ ಅಹವಾಲು ಸ್ವೀಕಾರ..!

ಶಿಕಾರಿಪುರ ತಾಲೂಕಿಗೆ ನಾಳೆ (ಬುಧವಾರ) ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವರಾದ ಮುಧು ಬಂಗಾರಪ್ಪ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನೆಲವಾಗಿಲು ಗ್ರಾಮದಲ್ಲಿ ಕೃಷಿ ಅಧ್ಯಯನ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಲಿದ್ದು ನಂತರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಶಿವಪುರ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಬಳಿಕ ಜಾವಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಿದ್ದು ಸ್ವಕ್ಷೇತ್ರ ಸೊರಬದಲ್ಲಿ ವಿವಿಧ ಕಾರ್ಯಕ್ರಮದಲ್ಲಿ […]