ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ

ಶಿವಮೊಗ್ಗ, ಜ.17 ( ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್‌ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ […]

ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]

ಜ.22 ರಂದು ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ ಸುಗ್ಗಿ ಸಂಭ್ರಮ

ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಜ.22 ರ ಮಧ್ಯಾಹ್ನ 2 ಗಂಟೆಗೆ ಇರುವಕ್ಕಿಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 9 ನೇ ವಾರ್ಷಿಕ ಘಟಿಕೋತ್ಸವ ಸುಗ್ಗಿ ಸಂಭ್ರಮವನ್ನು ಏರ್ಪಡಿಸಲಾಗಿದೆ.ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದ್ದು, ರಾಷ್ಟಿçÃಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್ ಶಶಿಧರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೆಳದಿ […]

ಯುವನಿಧಿ ನೋಂದಣಿ ಅಭಿಯಾನ

ಶಿಕಾರಿಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜ.20ವರೆಗೆ ಕಾಲೇಜಿನಲ್ಲಿ ಸಹಾಯಕೇಂದ್ರ ಸ್ಥಾಪಿಸಲಾಗಿದೆ.  ಯುವನಿಧಿ ಅರ್ಜಿ ಸಲ್ಲಿಸುವ ಯುವಕ/ಯುವತಿಯರು 2022, 2023 ಹಾಗೂ 2024ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿ‍ಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು ಎಂಬ ನಿಬಂಧನೆಗಳಿವೆ. ಅರ್ಹ ಯುವಕ/ಯುವತಿಯರು ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸ್ಥಳೀಯ ಸೈಬರ್ ಕೇಂದ್ರಗಳು, ಸೇವಾಸಿಂಧು ಪೋರ್ಟಲ್ […]

8ನೇ ವೇತನ ಆಯೋಗ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು; ಸರ್ಕಾರಿ ನೌಕರರಿಗೆ ಸಖತ್ ಖುಷಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ವೇತನ ಆಯೋಗ ವ್ಯವಸ್ಥೆಗೆ ತಿಲಾಂಜಲಿ ಹಾಡಲಿದೆ. ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ ರೂಪಿಸಲಿದೆ ಎಂದು ದಟ್ಟವಾಗಿ ಹಬ್ಬಿದ್ದ ಸುದ್ದಿಗೆ ತೆರೆ ಬಿದ್ದಿದೆ. 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಇಂದು ಗುರುವಾರ ಅಸ್ತು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಡಾ. ಎ ವೈಷ್ಣವ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾಡುತ್ತಾ ಬಂದಿದ್ದ ಒತ್ತಾಯಗಳಿಗೆ ಸರ್ಕಾರ ಬಗ್ಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ 7ನೇ ವೇತನ ಆಯೋಗದ ಶಿಫಾರಸುಗಳು […]

ಹೃದ್ರೋಗದ ಅಪಾಯ ಕಡಿಮೆ ಮಾಡಲು ಈ 6 ತರಕಾರಿಗಳನ್ನು ಸೇವನೆ ಮಾಡಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ಹೃದ್ರೋಗದ ಅಪಾಯ ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಸುಲಭದ ಮಾತಲ್ಲ. ಏಕೆಂದರೆ ನಾವು ಆರೋಗ್ಯವಾಗಿರಲು ನಮ್ಮ ಆಹಾರ ಪದ್ಧತಿ ಸರಿಯಾಗಿ ಇರಬೇಕು. ಅದಲ್ಲದೆ ಈಗ ಚಳಿಗಾಲವಾದ್ದರಿಂದ ಹಲವಾರು ರೀತಿಯ ಆರೋಗ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಅದಕ್ಕೆಲ್ಲಾ ಪರಿಹಾರವೆಂದರೆ ನಾವು ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡಬೇಕು ಅದರಲ್ಲಿಯೂ ಹಸಿರು ತರಕಾರಿಗಳ ಸೇವನೆ ನಮ್ಮ ಹೃದಯದ ಆರೋಗ್ಯವನ್ನು ಚೆನ್ನಾಗಿಡುವುದರ ಜೊತೆಗೆ ಹೃದ್ರೋಗದ ಅಪಾಯವೂ ಕಡಿಮೆ […]

2ನೇ ಹೆಂಡ್ತಿ ಮಾತು ಕೇಳಿ ಮೊದಲ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿರಾಯ

ಬೆಳಗಾವಿ: 2ನೇ ಹೆಂಡತಿಯನ್ನು ಬಿಟ್ಟು ತನ್ನ ಬಳಿಯೇ ಇರುವಂತೆ ಪೀಡಿಸುತ್ತಿದ್ದ ಮೊದಲ ಹೆಂಡ್ತಿಯನ್ನೇ ಪತಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಶಮಾ ರಿಯಾಜ್ ಪಠಾಣ್(25) ಕೊಲೆಯಾದ ಮೊದಲ ಹೆಂಡತಿ. ರಿಯಾಜ್ ಪಠಾಣ್(30) ಕೊಲೆ ಮಾಡಿದ ಪಾಪಿ ಗಂಡ. ಎರಡನೇ ಹೆಂಡತಿ ಫರ್ಜಾನಾ ಪಠಾಣ್ ಮಾತು ಕೇಳಿ ರಿಯಾಜ್, ಮೊದಲ ಪತ್ನಿ ಶಮಾ ಮಲಗಿದ್ದಾಗ ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಶಮಾ ಪಠಾಣ್ 27ವರ್ಷದ ಈಕೆ […]

ಬಿಡುಗಡೆ ಆಯಿತು ಬಣ್ಣ ಬದಲಾಯಿಸುವ ಸ್ಮಾರ್ಟ್​ಫೋನ್: ಇದರ ಬೆಲೆ ಕೇವಲ 24,999 ರೂ

ಪ್ರಸಿದ್ಧ ರಿಯಲ್ ಮಿ ಕಂಪನಿಯ ಬಹುನಿರೀಕ್ಷಿತ ರಿಯಲ್ ಮಿ 14 Pro ಸರಣಿಯು ಅಂತಿಮವಾಗಿ ಭಾರತದಲ್ಲಿ ಬಿಡುಗಡೆಯಾಗಿದೆ. ಇದು ಎರಡು ಮಾದರಿಗಳನ್ನು ಒಳಗೊಂಡಿದೆ: ರಿಯಲ್ ಮಿ 14 Pro ಮತ್ತು ರಿಯಲ್ ಮಿ 14 Pro+. ಈ ಫೋನ್‌ಗಳ ಪ್ರಮುಖ ಹೈಲೇಟ್ ಎಂದರೆ ಇದರಲ್ಲಿ ಬಣ್ಣ-ಬದಲಾಯಿಸುವ ತಂತ್ರಜ್ಞಾನ ನೀಡಲಾಗಿದೆ. ಅಂದರೆ ಈ ಫೋನಿನ ​​ಪರ್ಲ್ ವೈಟ್ ರೂಪಾಂತರದಲ್ಲಿ ಕೋಲ್ಡ್ ಸೆನ್ಸಿಟಿವ್ ಬಣ್ಣ-ಬದಲಾವಣೆ ತಂತ್ರಜ್ಞಾನವನ್ನು ಬಳಸಿದೆ. ತಾಪಮಾನವು 16 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾದಾಗ, ಫೋನ್‌ನ ಹಿಂಭಾಗದ ಕವರ್ ಪರ್ಲ್ […]

ಕೆಪಿಎಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ:ಕೆಎಎಸ್ ಪರೀಕ್ಷೆ ಕುರಿತು ಸರ್ಕಾರ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಭೆ..!

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ ಅವರು ಆದ ಸಮಸ್ಯೆಗಳು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆ ಬಳಿಕ ಮಹತ್ವ […]

ಸಿಗಂದೂರು ದೇವಿ ಸನ್ನಿಧಿಯಲ್ಲಿ ವಿಜೃಂಭಣೆ ಸಂಕ್ರಮಣ ಜಾತ್ರೆ

ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ತಾಯಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ ಹವನ ಪೂರ್ಣಾಹುತಿಯಲ್ಲಿ ಧರ್ಮದರ್ಶಿ ಡಾ.ಎಸ್‌.ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.