ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್: ಸುರ್ಜೇವಾಲ ಸ್ಪಷ್ಟನೆ

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ ಅವರು ನನಗೆ ಗೊತ್ತಿಲ್ಲ ಯಾರೂ ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂದು, ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಅಲ್ಲದೆ ಬಿಜೆಪಿ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದು ಹೇಳಿದ್ದಾರೆ. ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ […]

ತಂಗಿಗೆ ಇನ್​ಸ್ಟಾಗ್ರಾಂನಲ್ಲಿ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಅಣ್ಣನಿಂದ ಧರ್ಮದೇಟು

ನೆಲಮಂಗಲ: ಇನ್​ಸ್ಟಾಗ್ರಾಂನಲ್ಲಿ ಯುವತಿಗೆ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದನಿಗೆ ಯುವತಿ ಅಣ್ಣನಿಂದ ಧರ್ಮದೇಟು ನೀಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸತೀಶ್​ಗೆ ಯುವತಿ ಅಣ್ಣ ರಮೇಶ್​ನಿಂದ ಹಲ್ಲೆ ಮಾಡಲಾಗಿದೆ. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ಇನ್​ಸ್ಟಾಗ್ರಾಂನಲ್ಲಿ ಯುವತಿಗೆ ಅಶ್ಲೀಲ ಮೆಸೇಜ್​ ಕಳಿಸುತ್ತಿದ್ದ. ಯುವತಿ ಮೊಬೈಲ್​ನಿಂದ ಲೊಕೇಷನ್ ಹಾಕಿದ್ದ ಅಣ್ಣ ರಮೇಶ್, ಕೆಂಪಲಿಂಗನಹಳ್ಳಿ ಬಂದಾಗ ಏಕಾಏಕಿ ಮುಖಕ್ಕೆ ಗುದ್ದಿ ತೀವ್ರ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸತೀಶ್​ನನ್ನು ಖಾಸಗಿ ಆಸ್ಪತ್ರೆಗೆ […]

ಮಾಲಾಶ್ರೀ ಅಭಿನಯದ ‘ಮಾರಕಾಸ್ತ್ರ’ ಸಿನಿಮಾ ಈಗ ಒಟಿಟಿ ಪ್ಲೇಯರ್​ನಲ್ಲಿ ಲಭ್ಯ

ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಸಾಧ್ಯವಾಗದಿದ್ದರೆ ಒಟಿಟಿಯಲ್ಲಿ ವೀಕ್ಷಿಸಲು ಪ್ರೇಕ್ಷಕರು ಬಯಸುತ್ತಾರೆ. ಆದರೆ ಎಲ್ಲ ಸಿನಿಮಾಗಳಿಗೂ ಒಟಿಟಿಯಲ್ಲಿ ಜಾಗ ಸಿಗುವುದಿಲ್ಲ. ಸಣ್ಣ ಸಿನಿಮಾಗಳು ಎಂಬ ಕಾರಣಕ್ಕೆ ದೊಡ್ಡ ಒಟಿಟಿ ಸಂಸ್ಥೆಗಳು ಕೆಲವು ಚಿತ್ರಗಳನ್ನು ಖರೀದಿಸುವುದೇ ಇಲ್ಲ. ಮುಖ್ಯವಾಗಿ ಕನ್ನಡ ಸಿನಿಮಾಗಳಿಗೆ ಒಟಿಟಿಯಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಕೊರಗು ಮೊದಲಿನಿಂದಲೂ ಇದೆ. ಅದಕ್ಕಾಗಿ ಸಿನಿಮಾ ತಂಡಗಳು ಬೇರೆ ಬೇರೆ ಮಾರ್ಗಗಳನ್ನು ಕಂಡುಕೊಳ್ಳುತ್ತಿವೆ. ಕನ್ನಡದ ‘ಮಾರಕಾಸ್ತ್ರ’ ಸಿನಿಮಾ ಕೂಡ ಈಗ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಹಾಗಂತ ಇದು ನೆಟ್​ಫ್ಲಿಕ್ಸ್​, ಅಮೇಜಾನ್ […]

ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ಕಾಂಪ್ಲೆಕ್ಸ್​ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. 9 ಎಕರೆ ವಿಸ್ತೀರ್ಣದ ಮತ್ತು ವೇದ ಶಿಕ್ಷಣ ಕೇಂದ್ರ, ಸಭಾಂಗಣವನ್ನು ಒಳಗೊಂಡಿರುವ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಖಾರ್ಘರ್‌ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ್ ದೇವಾಲಯವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ದೇವಾಲಯವು ಯುವ ಪೀಳಿಗೆಯನ್ನು ಆಕರ್ಷಿಸಲು, ಈ ಸಂಕೀರ್ಣವು ಮಹಾಭಾರತ ಮತ್ತು ರಾಮಾಯಣ ಮಹಾಕಾವ್ಯಗಳನ್ನು ಆಧರಿಸಿದ ವಸ್ತುಸಂಗ್ರಹಾಲಯವನ್ನು ಒಳಗೊಂಡಿದೆ. ಇಲ್ಲಿ […]

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ…

ಚಿಕ್ಕಮಗಳೂರು: ಲಾರಿ ಸಮೇತ ಕೋಟ್ಯಂತರ ಮೌಲ್ಯದ ಅಡಿಕೆ (Areca Nut) ಕಳ್ಳತನ ಮಾಡಿದ್ದ ಐವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 10552500 ಮೌಲ್ಯದ 335 ಚೀಲ ಅಡಿಕೆ ಕಳ್ಳತನ ಮಾಡಿದ್ದರು. ಹಮ್ಜ, ಮೊಹಮ್ಮದ್ ಗೌಸ್ ಖಾನ್, ಮೊಹಮ್ಮದ್ ಸುಭಾನ್, ಮೊಹಮ್ಮದ್ ಫಯಾಜ್ ಮತ್ತು ಮೊಹಮ್ಮದ್ ಸಾದಿಕ್ ಬಂಧಿತರು. ಬಂಧಿತರಿಂದ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಅಡಕೆ, 12 ಚಕ್ರದ ಲಾರಿ ಮತ್ತು 2.30 ಲಕ್ಷ ರೂ ನಗದು ವಶಕ್ಕೆ ಪಡೆಯಲಾಗಿದೆ. ಬೀರೂರು ಪೊಲೀಸ್ […]

ಕಂಗನಾ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಈ ದೇಶದಲ್ಲಿ ಬ್ಯಾನ್ ಬಿಸಿ

ನಟಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜನವರಿ 17ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ 70ರ ದಶಕದ ಕಥೆ ಹೊಂದಿದೆ. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ ತುರ್ತುಪರಿಸ್ಥಿತಿ ಕುರಿತು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಚಿತ್ರಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಇದು ಚಿತ್ರಕ್ಕೆ ಕೊಂಚ ಹಿನ್ನಡೆ ತರಬಹುದು ಎನ್ನಲಾಗುತ್ತಿದೆ. ಎಮರ್ಜೆನ್ಸಿ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, […]

ಮಹಾಕುಂಭ ಮೇಳೆ ಮಹತ್ವ ಆಚರಣೆ ಹಿನ್ನಲೇ ಏನು..? ಇಲ್ಲಿದೆ ಮಾಹಿತಿ..!

ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ 2025 ಆರಂಭವಾಗಿದ್ದು. ಜ. 13ರಿಂದ ಫೆಬ್ರುವರಿ 26 ರವರೆಗೆ ನಡೆಯಲಿರುವ ಈ ಮಹಾಕುಂಭಮೇಳ ಸುಮಾರು ಕೋಟಿಗೂ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.ಮಹಾ ಕುಂಭಮೇಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು ಅಪಾರವಾದ ನಂಬಿಕೆ, ಶ್ರದ್ಧೆಯು ಮಹಾ ಕುಂಭಮೇಳದಲ್ಲಿ ಅಡಗಿದೆ. ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭಮೇಳಕ್ಕಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ‌. ಕುಂಭಮೇಳ ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾ ಕುಂಭಮೇಳ ನಡೆಯುತ್ತದೆ. ಈಗ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿರುವ ಮಹಾ […]