ರಾಜ್ಯದಲ್ಲಿಯೇ ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿಸಲು ಶಕ್ತಿ ಮೀರಿ ಶ್ರಮಿಸಿ: ಬಿವೈ ವಿಜಯೇಂದ್ರ

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶಿಕಾರಿಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಎಲ್.ಇ.ಡಿ ಟಿವಿ ವಿತರಣೆ ಅಂಗನವಾಡಿ ಕೇಂದ್ರಗಳಿಗೆ ಎಲ್.ಇ.ಡಿ ಟಿವಿ ಕೇಂದ್ರ ಪುರಸ್ಕೃತ ಸಕ್ಷಮ ಅಂಗನವಾಡಿ ಯೋಜನೆ ಅಡಿಯಲ್ಲಿ ಎಲ್.ಇ.ಡಿ ಟಿವಿ, ವಿತರಿಸಿ ಬಿಜೆಪಿ ರಾಜ್ಯಾಧ್ಯಕ್ಷರು ಶಾಸಕರಾದ ಬಿ.ವೈ ವಿಜಯೇಂದ್ರ ಮಾತನಾಡಿದರು. ಶಿಕಾರಿಪುರ ಎಲ್ಲಾ ಅಂಗನವಾಡಿ ಕೇಂದ್ರಗಳು ರಾಜ್ಯದಲ್ಲಿಯೇ ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಎಲ್ಲರೂ ಶಕ್ತಿ ಮೀರಿ ಶ್ರಮಿಸಬೇಕು ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ’ಯ 4564 ಫಲಾನುಭವಿಗಳಿಗೆ ಮಂಜೂರಾತಿ ನೀಡಿದ್ದು ಇದರಲ್ಲಿ 3987 ಫಲಾನುಭವಿಗಳಿಗೆ ಪಾಸ್ ಪುಸ್ತಕ ವಿತರಿಸಲಾಗಿದ್ದು […]

ಶಿಕಾರಿಪುರ ಗಾಂಜಾ ಮಾರಟ ಆರೋಪಿಗಳಿಗೆ ಕಠಿಣ ಕಾರಗೃಹ ಶಿಕ್ಷೆ..!

ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರ ಗುಂಡಿ ಏರಿಯಾದಲ್ಲಿ,ದಿನಾಂಕಃ 05-12-2021 ರಂದು ಮಾದಕ ದ್ರವ್ಯ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿಪಿಐ ಗುರುರಾಜ್ ಮತ್ತು ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಆರೋಪಿತರಾದ ಯಾಸಿರ್ ಪಾಷಾ ಹಾಗೂ ಶಹಜಾನ್ @ ಸಾನಿಯಾ ಬೇಗಂ* ರವರುಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0113/2021 ಕಲಂ 8(c), 20 (b) (II)(B), NDPS Act ರೀತ್ಯಾ ಪ್ರಕರಣ […]

ಕೋಮು ಸಂಘರ್ಷ ತಡೆಗೆ ವಿಶೇಷ ಕಾರ್ಯಪಡೆ ರಚನೆ:ಗೃಹ ಸಚಿವ ಚಾಲನೆ

ಮಂಗಳೂರು: ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ಮಂಗಳೂರಿನಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದ್ದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು,284 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ದಕ್ಷಿಣ ಕನ್ನಡ, […]

ಶಿಕಾರಿಪುರ ಮಹಿಳೆಯ ಕೊಲೆ..!

ಶಿಕಾ‌ರಿಪುರ ಪಟ್ಟಣದ ಸೋಸೈಟಿ ಕೇರಿಯಲ್ಲಿ ಇಂದು ಮುಂಜಾನೆ ಮಹಿಳೆಯೊಬ್ಬರ ಕೊಲೆಯಾಗಿದೆ. ಪಟ್ಟಣದ ಸೋಸೈಟಿ ಕೇರಿ ವಾಸಿ ಮಂಜುಳ( 33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು ಆಕೆಯ ಪತಿಯೆ ಕೊಲೆ ಮಾಡಿರಿವುದಾಗಿ ಅನುಮಾನ ವ್ಯಕ್ಯವಾಗಿದೆ.ಮೃತ ಮಹಿಳೆಗೆ ಮೂರು ಜನ ಮಕ್ಕಳು ಇದ್ದರು ಎನ್ನಲಾಗಿದ್ದು ಶಾಹಿ ಗಾರ್ಮೇಂಟ್ಸ್ ಉದ್ಯೋಗಿಯಾಗಿದ್ದರ ಎಂದು ತಿಳಿದುಬಂದಿದೆ. ಈ‌ ಕುರಿತು ಪಟ್ಟಣದ ಪೋಲಿಸ್ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದು ನಿಖರ ಮಾಹಿತಿ ದೊರೆಯಬೇಕಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಮತ್ತು ಡಿಎನ್‌ಎ ಕಾರ್ಯಕ್ರಮ ನಿರ್ವಹಣಾ ಕಂಪನಿ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಈವೆಂಟ್ ಮ್ಯಾನೇಜ್‌ಮೆಂಟ್‌ನ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ […]

ಹೆಚ್ ಟಿ ಬಳೆಗಾರ್ ಫೌಂಡೇಶನ್ ವತಿಯಿಂದ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಗೆ ಕೊಡುಗೆ

ಶಿಕಾರಿಪುರ :ಪಟ್ಟಣದ ದೊಡ್ಡಪೇಟೆ ಯಲ್ಲಿರುವ ವಿದ್ಯಾ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲಾಯಲ್ಲಿ ಶುಕ್ರವಾರ ದಿ. ಹೆಚ್ ಟಿ. ಬಳೆಗಾರ್ ರವರ ಜನ್ಮ ದಿನಾಚರಣೆಯನ್ನು ಹೆಚ್ ಟಿ. ಬಳೆಗಾರ್ ಫೌಂಡೇಶನ್ ವತಿಯಿಂದ ಆಚರಿಸಲಾಯಿತು. ಈ ಸಂದರ್ಭ ಫೌಂಡೇಶನ್ ಅಧ್ಯಕ್ಷರಾದ ವೈಭವ ಬಸವರಾಜ್ ಮಾತನಾಡಿ. ಬಳೆಗಾರರವರು ಶೋಷಿತರ, ನೊಂದವರ, ಅಸಹಾಯಕರ ಪರವಾಗಿ ಇದ್ದಂತ ವ್ಯಕ್ತಿತ್ವದವರು ಆದ್ದರಿಂದ ಅವರ ಜನ್ಮದಿನ ಆಚರಣೆಯನ್ನು ಬಡ ಬುದ್ದಿ ಮಾಂದ್ಯ ಮಕ್ಕಳ ಶಾಲೆಯಲ್ಲಿ ಆಚರಿಸಿಲಾಗಿ ಈ ಶಾಲೆಗೆ ಫೌಂಡೇಶನ್ ವತಿಯಿಂದ ನಿತ್ಯಪಯೋಗಿ ಸಾಮಗ್ರಿಗಳನ್ನು ನೀಡುತ್ತಿದ್ದು […]

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ […]

ಶಿವಮೊಗ್ಗ ಪೋಲಿಸರ ಲಾಠಿ ಚಾರ್ಜ್ ಕ್ರಮಕ್ಕೆ ಜನರ ಮೆಚ್ಚುಗೆ..!

ಶಿವಮೊಗ್ಗ: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನೂಕು ನುಗ್ಗಲು ಕಾಲ್ತುಳಿತಕ್ಕೆ ಅಮಾಯಕರ ಸಾವು ಸಂಭವಿಸಿದ್ದು ನಿನ್ನೆ ದಿನ ರಾತ್ರಿ ಶಿವಮೊಗ್ಗ ದಲ್ಲಿ ಲಘು ಲಾಠಿ ಪ್ರಹಾರ ಮಾಡಿ ಬಿಗಿಯಾದ ಕ್ರಮ ಜರುಗಿಸಿರುವುದು ಸೂಕ್ತ ನಿರ್ಧಾರ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌. ಶಿವಮೊಗ್ಗ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು ಒಂದು ಸಣ್ಣ ಘಟನೆ ಶಿವಮೊಗ್ಗದ ಶಾಂತಿ ನೆಮ್ಮದಿಯನ್ನೇ ಬುಡ ಮೇಲು ಮಾಡಿಬಿಡುತ್ತದೆ ಈ ಹಿಂದಿನ ಹಲವಾರು ಘಟನೆಗಳು ನಮಗೆ ಪಾಠವಾಗಿದ್ದು ನಿನ್ನೆ ರಾತ್ರಿ […]

ಜನರ ಭಾವನೆಗಳನ್ನು ನೋಯಿಸಲು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಬೇಡಿ- ನಟ ಕಮಲ ಹಾಸನ್ ವಿರುದ್ಧ ಹೈಕೋರ್ಟ್ ತರಾಟೆ..!

ಬೆಂಗಳೂರು: ಕನ್ನಡ ಭಾಷೆಯ ಮೂಲದ ಬಗ್ಗೆ ನಟ ಕಮಲ್‌ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆಗೆ ಉಚ್ಚನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ತಮ್ಮ ತಪ್ಪಿಗೆ ಪೊಲೀಸರು ಯಾಕೆ ಭದ್ರತೆ ನೀಡಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ. ಭಾವನೆಗಳನ್ನು ನೋಯಿಸಲು ಮಾತಿನ ಹಕ್ಕನ್ನು ಬಳಸಬೇಡಿ ಎಂದು ಹೇಳಿದೆ. ಕರ್ನಾಟಕದಲ್ಲಿನ ಚಿತ್ರಮಂದಿರಗಳೂ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ತಮ್ಮ ಥಗ್‌ಲೈಫ್ ಚಿತ್ರದ ಪ್ರದರ್ಶನಕ್ಕೆ ಭದ್ರತೆ ಕೋರಿ ಕಮಲಹಾಸನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಜನರಿಂದ ಲಾಭಗಳಿಸಲು ಬಯಸುವ […]

ಶಿಕಾರಿಪುರ: ತೋಟಗಾರಿಕೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ: ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ್ದು, ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾಂಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (Weed Mat) ಟ್ರ‍್ಯಾಕ್ಟರ್ (20 ಪಿಟಿಓ), ಕೃಷಿಹೊಂಡ, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳಿಗೆ […]