ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ಹಾಗೂ ಮುಂಬಡ್ತಿ ಇಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ರಾಜ್ಯದಲ್ಲಿ 2 ಲಕ್ಷ 50 ಸಾವಿರ ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇಕಡ 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ […]

ಶಿಕಾರಿಪುರ ಆಧಾರ್ ಕಾರ್ಡ್ ನೋಂದಣಿ ತಿದ್ದುಪಡಿಗೆ ಜನರ ಪರದಾಟ: ಕಾಂಗ್ರೆಸ್ ಮನವಿ

ಶಿಕಾರಿಪುರ ತಾಲೂಕಿನಲ್ಲಿ ಆಧಾರ್ ನೋಂದಣಿ ಕೇಂದ್ರಗಳ ಕೊರತೆಯಿಂದ ಪೋಸ್ಟ್ ಆಫೀಸ್ ಹಾಗೂ ಇನ್ನಿತರ ಕೇಂದ್ರಗಳಲ್ಲಿ ಜನರು ಮುಂಜಾನೆ 4 ಗಂಟೆಗೆ ಕಛೇರಿ ಬಾಗಿಲು ಕಾಯುವಂತಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ತಾಲೂಕ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿತಾಲೂಕಿನಲ್ಲಿ ಹೊಸ ಆಧಾರ್ ಕಾರ್ಡ್ ಮಾಡುವ ಮತ್ತು ತಿದ್ದುಪಡಿ ಮಾಡುವ ಕೇಂದ್ರಗಳು ಸರಿಯಾಗಿ ಕೆಲಸ ಮಾಡದೆ ಇರುವ ಪರಿಣಾಮ ವಿದ್ಯಾರ್ಥಿಗಳು ನಾಗರಿಕರು ಬೆಳಗ್ಗೆ 4 ಗಂಟೆಗೆ ಬಂದು ಕ್ಯೂನಲ್ಲಿ ನಿಂತು […]

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 3/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. News By: Raghu Shikari-7411515737

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿತ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದ್ದು, ಅಭಿವೃದ್ಧಿ ಕೆಲಸಕಾರ್ಯಗಳು ಕುಂಠಿತವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕಡೆಗಣಿಸಲಾಗಿದೆ. ರೈತರ ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದ್ದಾರೆ. ಆಡಳಿತ ಪಕ್ಷಗಳ ಶಾಸಕರೇ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣ, ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಹೈಕೋರ್ಟ್, ಸಿಬಿಐಗೆ […]

ಐದು ವರ್ಷ ನಾನೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ: ಸಿಎಂ ಸಿದ್ದರಾಮಯ್ಯ..!

ಬೆಂಗಳೂರು: ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಬಿಜೆಪಿ ಹಗಲುಗನಸು ಕಾಣುತ್ತಿದೆ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ ಎಂದು ವಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು […]

ಶಿಕಾರಿಪುರ: ಹವಾಮಾನಾಧರಿತ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಮರುವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ. ವಿಮಾ ಕಂತಿನ ವಿವರ: ಅಡಿಕೆ ಒಂದು ಎಕರೆಗೆ -ರೂ. 2560/-, ಮಾವು – ಒಂದು ಎಕರೆಗೆ -ರೂ. 3200/-, ಕಾಳುಮೆಣಸು- ಒಂದು ಎಕರೆಗೆ -ರೂ. 1692/- ಮತ್ತು ಶುಂಠಿ ಒಂದು ಎಕರೆಗೆ -ರೂ. 2600/-.ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ […]

ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ,ಪಾರ್ಕಿಂಗ್: ಸಾರ್ವಜನಿಕರ ಸಮಸ್ಯೆಗಳ ಕಡೆ ಗಮನ ನೀಡಿ: ರಮೇಶ್‌

ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗುಂಡ ಅಧ್ಯಕ್ಷತೆ ಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಚೆರ್ಚೆಸಿ ಸಮಸ್ಯೆಗಳ ಕುರಿತು ಕ್ರಮ ವಹಿಸುವಂತೆ ಅಧಿಕಾರಿಗೆ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು ಬೀದಿ ಬದಿಯ ವ್ಯಾಪರಗಳಿಗೆ ಸ್ಥಳ ಗುರುತಿಸಿ ಮುಖ್ಯ ರಸ್ತೆಗಳಲ್ಲಿ ತಲುವ ಗಾಡಿ ಜನ ದಟ್ಟತೆ ಇರುವ ಸ್ಥಳಲ್ಲಿ ತೆರವುಗೊಳಿಸಿ ಅನಾಹುತ ಸಂಭವಿಸುವ ಮುಂಚಿತವಾಗಿ ಕ್ರಮತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದಲ್ಲಿ ಪಾನಿ,ಹಣ್ಣಿನ […]

ವೈದ್ಯಕೀಯ ಮತ್ತು ಅರೆ ವೈದ್ಯಕೀಯ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಎನ್‌ಪಿಪಿಸಿಡಿ ವಿಭಾಗದಲ್ಲಿ ಇಎನ್‌ಟಿ ಸರ್ಜನ್‌ನ 1 ಹುದ್ದೆ ಖಾಲಿ ಇದ್ದು, ಎಂಎಸ್ ಇಎನ್‌ಟಿ/ಡಿಪ್ಲೊಮಾ ಎನ್ ಇಎನ್‌ಟಿ ವಿದ್ಯಾರ್ಹತೆ ಹೊಂದಿರಬೇಕು. ಎಂಹೆಚ್ ಐಸಿಯು-ಹೆಚ್‌ಡಿಯು ವಿಭಾಗದಲ್ಲಿ ಅರವಳಿಕೆ ತಜ್ಞರ 1 ಹುದ್ದೆ ಖಾಲೆ ಇದ್ದು, ಡಿಎ/ಡಿಎನ್‌ಬಿ/ಹೆಚ್‌ಡಿಯು […]

ಆಡಳಿತದಲ್ಲಿ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಕನ್ನಡ ಬಳಸುವಂತೆ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಕನ್ನಡದಲ್ಲಿ ಬರುವ ಅರ್ಜಿ ಪತ್ರಗಳಿಗೆ ಕನ್ನಡದಲ್ಲಿ ಉತ್ತರಿಸಿ ನಾಮ ಫಲಕ ಕನ್ನಡದಲ್ಲೇ ಪ್ರದರ್ಶಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ. ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ […]

ಅನ್ನ ಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆ ಇಂದಿರಾ ಆಹಾರ ಕಿಟ್ ವಿತರಣೆ..!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲಾ ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ ‘ಇಂದಿರಾ ಆಹಾರ ಕಿಟ್’ಗಳನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್‌ಗಳನ್ನು ನೀಡಲು ನಿರ್ಧರಿಸಲಾಗಿದೆ. ಪಡಿತರ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಲು ಈ ಪೌಷ್ಟಿಕ ವಸ್ತುಗಳನ್ನು ಒಳಗೊಂಡ ಕಿಟ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಏನಿದು ಇಂದಿರಾ ಆಹಾರ್ ಕಿಟ್ಪಡಿತರ ಅಕ್ಕಿ ಜೊತೆ […]