​ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶೀಘ್ರವೇ ನೈಟ್ ಲ್ಯಾಂಡಿಂಗ್ ವ್ಯವಸ್ಥೆ; ಅಧ್ಯಕ್ಷ ನಂಜಯ್ಯನಮಠ್‌

​ಶಿವಮೊಗ್ಗ: ಮಲೆನಾಡಿಗರಿಗೆ ಸಾರಿಗೆ ಕ್ಷೇತ್ರದಲ್ಲಿ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮುಂದಿನ ಆರೇಳು ತಿಂಗಳ ಒಳಗಾಗಿ ರಾತ್ರಿ ವೇಳೆಯೂ ವಿಮಾನ ಸಂಚಾರಕ್ಕೆ ಅನುಕೂಲವಾಗುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂಜಯ್ಯನಮಠ್‌ ತಿಳಿಸಿದ್ದಾರೆ. ​ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಅಂತ್ಯದ ವೇಳೆಗೆ ಸುಮಾರು 6 ಕೋಟಿ ರೂ. ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ. ದಿಕ್ಸೂಚಿ ಯಾಂತ್ರಿಕ ವ್ಯವಸ್ಥೆ (DBOR) ಅಳವಡಿಕೆಗೆ ಟೆಂಡರ್ […]

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಬಲಿ

​ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ತೋಟದ ಹಾದಿಯಲ್ಲಿ ನಡೆದು ಹೋಗುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಸಂಭವಿಸಿದೆ. ​ಘಟನೆಯ ವಿವರ:ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಮೂಲದ ಯಲ್ಲಪ್ಪ (45) ಮೃತಪಟ್ಟ ದುರ್ದೈವಿ. ಇವರು ಕಳೆದ ಕೆಲವು ಕಾಲದಿಂದ ಚಿಕ್ಕಮಗಳೂರು ಭಾಗದಲ್ಲಿ ಕೂಲಿ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು. ​ಸೋಮವಾರ ಸಂಜೆ ಕೆಲಸ ಮುಗಿಸಿ ನಾಗೇಶ್ ಗೌಡ ಎಂಬುವರ ತೋಟದ ಹಾದಿಯ […]

ಅಮ್ಮ ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

​ಚಿಕ್ಕಮಗಳೂರು: ಕಾಫಿನಾಡಿನಲ್ಲಿ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ​ಘಟನೆಯ ವಿವರ:ಮೃತ ಬಾಲಕಿಯನ್ನು ಜಯಪುರ ಗ್ರಾಮದ ಸುಪ್ರೀತಾ (13) ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ​ಆತ್ಮಹತ್ಯೆಗೆ ಕಾರಣ:ವರದಿಗಳ ಪ್ರಕಾರ, ಬಾಲಕಿ ಊಟ ಮಾಡುತ್ತಿದ್ದಾಗ ಆಕಸ್ಮಿಕವಾಗಿ ತಟ್ಟೆ ಬಿದ್ದು ಅನ್ನ ಚೆಲ್ಲಿತ್ತು. ಈ ವೇಳೆ ತಾಯಿ, “ಬರೀ ಟಿವಿ ನೋಡುತ್ತಿರುತ್ತೀಯಾ, ಓದ ಕಡೆ ಗಮನವಿಲ್ಲ. ಮೊದಲು ಚೆಲ್ಲಿರುವ ಅನ್ನವನ್ನು […]

ಸಮಾಜ ಸೇವೆ ಮತ್ತು ಆಧ್ಯಾತ್ಮಿಕತೆಯಿಂದ ಮಾನವ ಜನ್ಮ ಸಾರ್ಥಕ: ಸಂಸದ ಬಿ.ವೈ. ರಾಘವೇಂದ್ರ

​ಶಿಕಾರಿಪುರ: “ದೇವರು ಕೊಟ್ಟಿರುವ ಪವಿತ್ರವಾದ ಮಾನವ ಜನ್ಮವನ್ನು ವ್ಯರ್ಥ ಮಾಡದೆ, ಸಮಾಜಕ್ಕೆ ಒಳಿತು ಮಾಡುವ ಮೂಲಕ ಸಾರ್ಥಕಪಡಿಸಿಕೊಳ್ಳಬೇಕು,” ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕರೆ ನೀಡಿದರು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಹಾಶಿವರಾತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಶ್ವರಿಯ ವಿಶ್ವವಿದ್ಯಾಲಯದ ಸದಸ್ಯರ ಆಧ್ಯಾತ್ಮಿಕ ಜೀವನಶೈಲಿ ಮತ್ತು ಶಿಸ್ತು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಉತ್ತಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ. ಆರೋಗ್ಯವಂತ ದೇಹವಿದ್ದರೆ ಮಾತ್ರ ನಾವು ಸಮಾಜಕ್ಕೆ ಉತ್ತಮ ಸೇವೆ […]

ಅಭಿವೃದ್ಧಿಯೇ ಮುಖ್ಯ, ರಾಜಕಾರಣವಲ್ಲ: ಸಚಿವ ಸತೀಶ್ ಜಾರಕಿಹೊಳೆ

​ಶಿಕಾರಿಪುರ: “ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸದೆ, ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳೆ ತಿಳಿಸಿದರು. ​ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶಿಲಾಮೂರ್ತಿಗಳ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ​ಶಿಕ್ಷಣಕ್ಕೆ ಹೊಸ ಆಯಾಮ: 100 ಶಾಲೆಗಳ ನಿರ್ಮಾಣ​ಶಿಕ್ಷಣ ಕ್ಷೇತ್ರದ ಕುರಿತು ತಮ್ಮ […]

ಶಿಕಾರಿಪುರ: ಮನೆಯಲ್ಲೇ ಅಂಗನವಾಡಿ ಸಹಾಯಕಿ ಭೀಕರ ಕೊಲೆ

​ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದಲ್ಲಿ ನಡುಕ ಹುಟ್ಟಿಸುವ ಘಟನೆಯೊಂದು ನಡೆದಿದೆ. ಗ್ರಾಮದ ಅಂಗನವಾಡಿ ಸಹಾಯಕಿಯೊಬ್ಬರು ತಮ್ಮ ಸ್ವಗೃಹದಲ್ಲೇ ನಿಗೂಢವಾಗಿ ಕೊಲೆಯಾಗಿದ್ದಾರೆ. ​ಘಟನೆಯ ವಿವರ:ಕೊಲೆಯಾದ ದುರ್ದೈವಿಯನ್ನು ಬಿಳಕಿ ಗ್ರಾಮದ ನಿವಾಸಿ ಪ್ರೇಮಕ್ಕ (52) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ರಾತ್ರಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಇಂದು ಬೆಳಿಗ್ಗೆ ಪ್ರೇಮಕ್ಕ ಅವರ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ […]

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ, ಗ್ರಾಮ ಸಹಾಯಕ..!

​ಶಿವಮೊಗ್ಗ: ಬಾಡಿಗೆ ಕಾರಿನ ಹಣ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಅವರ ಪರವಾಗಿ ಹಣ ಸ್ವೀಕರಿಸುತ್ತಿದ್ದ ಗ್ರಾಮ ಸಹಾಯಕ ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ​ಘಟನೆಯ ಹಿನ್ನೆಲೆ:​ಓಟಿಘಟ್ಟ ಗ್ರಾಮದ ನಿವಾಸಿ ಶ್ರೀ ಕೇಶವಮೂರ್ತಿ ಎ.ಬಿ. ಎಂಬುವವರು ತಮ್ಮ ಮಾಲೀಕತ್ವದ ‘ಮಾರುತಿ ಎರ್ಟಿಗಾ’ ಕಾರನ್ನು ಶಿವಮೊಗ್ಗದ ಎನ್.ಹೆಚ್-206 ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಗೆ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ನೀಡಿದ್ದರು. ಪ್ರತಿ ತಿಂಗಳು ಕಾರಿನ ಬಾಡಿಗೆ ಮೊತ್ತವನ್ನು ಚೆಕ್ ಮೂಲಕ ನೀಡಲಾಗುತ್ತಿತ್ತು. ​ಆದರೆ, […]

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ: ಡಿ.ಕೆ.ಶಿವಕುಮಾರ್

ದಾವಣಗೆರೆ: ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ಬಹಳ ಸಂತೋಷ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು, ರಾಜು ಅವರು ಡಿಕೆ ಕಮ್ ಬ್ಯಾಕ್ ಎಂದು ಕರೆದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನೂರು ಜನ ಕಿರುಚಾಡಬಹುದು. ಈ ನೂರು ಜನರಿಗೆ ಜಗ್ಗುವ ಮಗ ಡಿ.ಕೆ. ಶಿವಕುಮಾರ್ ಅಲ್ಲ. ಇಲ್ಲಿರುವ ಸಾವಿರಾರು ಜನ, ನನ್ನ ತತ್ವ, ನಿಷ್ಠೆ, ಸಿದ್ಧಾಂತ ತಿಳಿದಿದ್ದಾರೆ. ಇತಿಹಾಸ ಮರೆತವ, ಇತಿಹಾಸ ಸೃಷ್ಟಿಸಲು […]

ಬಿಜೆಪಿ ಮುಖಂಡನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ..!

ಶಿಕಾರಿಪುರ: ವಿರೋಧಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಬಿ.ಡಿ ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಚಿವ ಸಂಪುಟ ಸ್ಥಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರ ಎಲ್ಲಾ ನಿಗಮ ಮಂಡಳಿಯ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಆದೇಶವನ್ನು ನೀಡಿತ್ತು. ಬಿ.ಡಿ.ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದ್ದು ಬಿ.ಡಿ.ಭೂಕಾಂತ್ ಅವರು ಬಿಜೆಪಿ ಮುಖಂಡರಾಗಿದ್ದು ಆಗಿದ್ದು ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದು ಇನ್ನೂ […]

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ‌ಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ […]