ಬಳ್ಳೆಯಲ್ಲಿ 23ರಂದು ಅರ್ಜುನ ಆನೆ ಸ್ಮಾರಕ ಉದ್ಘಾಟನೆ: ಈಶ್ವರ ಖಂಡ್ರೆ

ಬೆಂಗಳೂರು, ಜೂ.21: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರೆ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಹುತಾತ್ಮನಾದ ಕ್ಯಾಪ್ಟನ್ ಎಂದೇ ಖ್ಯಾತವಾಗಿದ್ದ ದಸರಾ ಆನೆ ಅರ್ಜುನನ್ನು ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಗಿತ್ತು. ಅರ್ಜುನನ ಸಮಾಧಿಗೆ […]

ದೇಶದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ 1 ಲಕ್ಷದ 18 ಸಾವಿರಕ್ಕೆ ಹೆಚ್ಚಳ – ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ಬಡತನದೊಂದಿಗೆ ಆರೋಗ್ಯದ ವೆಚ್ಚವೂ ದೇಶದ ಜನರನ್ನು ಕಾಡುತ್ತಿದ್ದು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಅಯುಷ್ಮಾನ್ ಭಾರತ್ ಜನೌಷಧಿ ಕೇಂದ್ರಗಳ ಮೂಲಕ ಜನರ ಕಷ್ಟ ಪರಿಹಾರಕ್ಕೆ ಸ್ಪಂದಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ಅಸ್ಪತ್ರೆ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ 387ರಷ್ಟಿದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆ 780ಕ್ಕೆ ಏರಿದ್ದು, 51ಸಾವಿರ ಇದ್ದ ವೈದ್ಯಕೀಯ ಸೀಟುಗಳು 1 ಲಕ್ಷ 18 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು […]

ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. […]

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,‌ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿ ಪರಿಸರ, ಹವಾಮಾನ ವೈಪರಿತ್ಯ ಜಾಗತಿಕ ಕ್ಲಬ್‌ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂಬ ಆದೇಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನ ೨೦೨೫ರ ಅಂಗವಾಗಿ ಆಯೋಜಿಸಿದ್ದ ಪರಿಸರ ನಡಿಗೆ ಕಾರ್ಯಕ್ರಮಕ್ಕೆ, ವಿಧಾನ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದ ಅವರು, ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಜಾಗೃತಿ ಕ್ಲಬ್‌ಗಳನ್ನು ರಚನೆ ಮಾಡಬೇಕೆಂದು ಹೇಳಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಸಸಿಯನ್ನು ದತ್ತು ಪಡೆಯಬೇಕೆಂದು ಸಲಹೆ […]

ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಪ್ರಚಾರದ ಗೀಳಿಗೆ ಬಿದ್ದ ಕಾಂಗ್ರೆಸ್ ನಾಯಕರು 11 ಜೀವಗಳನ್ನು ಬಲಿತೆಗೆದುಕೊಂಡಿದ್ದಾರೆ ಎಂದು ದೂರಿದರು. ನೈತಿಕ ಹೊಣೆ ಹೊತ್ತು ಈ ಎಲ್ಲಾ ನಾಯಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು. News […]

ರಾಜ್ಯದಲ್ಲಿಯೇ ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿಸಲು ಶಕ್ತಿ ಮೀರಿ ಶ್ರಮಿಸಿ: ಬಿವೈ ವಿಜಯೇಂದ್ರ

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶಿಕಾರಿಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಎಲ್.ಇ.ಡಿ ಟಿವಿ ವಿತರಣೆ ಅಂಗನವಾಡಿ ಕೇಂದ್ರಗಳಿಗೆ ಎಲ್.ಇ.ಡಿ ಟಿವಿ ಕೇಂದ್ರ ಪುರಸ್ಕೃತ ಸಕ್ಷಮ ಅಂಗನವಾಡಿ ಯೋಜನೆ ಅಡಿಯಲ್ಲಿ ಎಲ್.ಇ.ಡಿ ಟಿವಿ, ವಿತರಿಸಿ ಬಿಜೆಪಿ ರಾಜ್ಯಾಧ್ಯಕ್ಷರು ಶಾಸಕರಾದ ಬಿ.ವೈ ವಿಜಯೇಂದ್ರ ಮಾತನಾಡಿದರು. ಶಿಕಾರಿಪುರ ಎಲ್ಲಾ ಅಂಗನವಾಡಿ ಕೇಂದ್ರಗಳು ರಾಜ್ಯದಲ್ಲಿಯೇ ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಎಲ್ಲರೂ ಶಕ್ತಿ ಮೀರಿ ಶ್ರಮಿಸಬೇಕು ‘ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ’ಯ 4564 ಫಲಾನುಭವಿಗಳಿಗೆ ಮಂಜೂರಾತಿ ನೀಡಿದ್ದು ಇದರಲ್ಲಿ 3987 ಫಲಾನುಭವಿಗಳಿಗೆ ಪಾಸ್ ಪುಸ್ತಕ ವಿತರಿಸಲಾಗಿದ್ದು […]

ಶಿಕಾರಿಪುರ ಗಾಂಜಾ ಮಾರಟ ಆರೋಪಿಗಳಿಗೆ ಕಠಿಣ ಕಾರಗೃಹ ಶಿಕ್ಷೆ..!

ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರ ಗುಂಡಿ ಏರಿಯಾದಲ್ಲಿ,ದಿನಾಂಕಃ 05-12-2021 ರಂದು ಮಾದಕ ದ್ರವ್ಯ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿಪಿಐ ಗುರುರಾಜ್ ಮತ್ತು ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಆರೋಪಿತರಾದ ಯಾಸಿರ್ ಪಾಷಾ ಹಾಗೂ ಶಹಜಾನ್ @ ಸಾನಿಯಾ ಬೇಗಂ* ರವರುಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0113/2021 ಕಲಂ 8(c), 20 (b) (II)(B), NDPS Act ರೀತ್ಯಾ ಪ್ರಕರಣ […]

ಕೋಮು ಸಂಘರ್ಷ ತಡೆಗೆ ವಿಶೇಷ ಕಾರ್ಯಪಡೆ ರಚನೆ:ಗೃಹ ಸಚಿವ ಚಾಲನೆ

ಮಂಗಳೂರು: ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ಮಂಗಳೂರಿನಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದ್ದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು,284 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ದಕ್ಷಿಣ ಕನ್ನಡ, […]

ಶಿಕಾರಿಪುರ ಮಹಿಳೆಯ ಕೊಲೆ..!

ಶಿಕಾ‌ರಿಪುರ ಪಟ್ಟಣದ ಸೋಸೈಟಿ ಕೇರಿಯಲ್ಲಿ ಇಂದು ಮುಂಜಾನೆ ಮಹಿಳೆಯೊಬ್ಬರ ಕೊಲೆಯಾಗಿದೆ. ಪಟ್ಟಣದ ಸೋಸೈಟಿ ಕೇರಿ ವಾಸಿ ಮಂಜುಳ( 33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು ಆಕೆಯ ಪತಿಯೆ ಕೊಲೆ ಮಾಡಿರಿವುದಾಗಿ ಅನುಮಾನ ವ್ಯಕ್ಯವಾಗಿದೆ.ಮೃತ ಮಹಿಳೆಗೆ ಮೂರು ಜನ ಮಕ್ಕಳು ಇದ್ದರು ಎನ್ನಲಾಗಿದ್ದು ಶಾಹಿ ಗಾರ್ಮೇಂಟ್ಸ್ ಉದ್ಯೋಗಿಯಾಗಿದ್ದರ ಎಂದು ತಿಳಿದುಬಂದಿದೆ. ಈ‌ ಕುರಿತು ಪಟ್ಟಣದ ಪೋಲಿಸ್ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದು ನಿಖರ ಮಾಹಿತಿ ದೊರೆಯಬೇಕಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಮತ್ತು ಡಿಎನ್‌ಎ ಕಾರ್ಯಕ್ರಮ ನಿರ್ವಹಣಾ ಕಂಪನಿ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಈವೆಂಟ್ ಮ್ಯಾನೇಜ್‌ಮೆಂಟ್‌ನ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ […]