ಹೆಚ್ ಟಿ ಬಳೆಗಾರ್ ಫೌಂಡೇಶನ್ ವತಿಯಿಂದ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಗೆ ಕೊಡುಗೆ

ಶಿಕಾರಿಪುರ :ಪಟ್ಟಣದ ದೊಡ್ಡಪೇಟೆ ಯಲ್ಲಿರುವ ವಿದ್ಯಾ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲಾಯಲ್ಲಿ ಶುಕ್ರವಾರ ದಿ. ಹೆಚ್ ಟಿ. ಬಳೆಗಾರ್ ರವರ ಜನ್ಮ ದಿನಾಚರಣೆಯನ್ನು ಹೆಚ್ ಟಿ. ಬಳೆಗಾರ್ ಫೌಂಡೇಶನ್ ವತಿಯಿಂದ ಆಚರಿಸಲಾಯಿತು. ಈ ಸಂದರ್ಭ ಫೌಂಡೇಶನ್ ಅಧ್ಯಕ್ಷರಾದ ವೈಭವ ಬಸವರಾಜ್ ಮಾತನಾಡಿ. ಬಳೆಗಾರರವರು ಶೋಷಿತರ, ನೊಂದವರ, ಅಸಹಾಯಕರ ಪರವಾಗಿ ಇದ್ದಂತ ವ್ಯಕ್ತಿತ್ವದವರು ಆದ್ದರಿಂದ ಅವರ ಜನ್ಮದಿನ ಆಚರಣೆಯನ್ನು ಬಡ ಬುದ್ದಿ ಮಾಂದ್ಯ ಮಕ್ಕಳ ಶಾಲೆಯಲ್ಲಿ ಆಚರಿಸಿಲಾಗಿ ಈ ಶಾಲೆಗೆ ಫೌಂಡೇಶನ್ ವತಿಯಿಂದ ನಿತ್ಯಪಯೋಗಿ ಸಾಮಗ್ರಿಗಳನ್ನು ನೀಡುತ್ತಿದ್ದು […]

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ […]

ಶಿವಮೊಗ್ಗ ಪೋಲಿಸರ ಲಾಠಿ ಚಾರ್ಜ್ ಕ್ರಮಕ್ಕೆ ಜನರ ಮೆಚ್ಚುಗೆ..!

ಶಿವಮೊಗ್ಗ: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನೂಕು ನುಗ್ಗಲು ಕಾಲ್ತುಳಿತಕ್ಕೆ ಅಮಾಯಕರ ಸಾವು ಸಂಭವಿಸಿದ್ದು ನಿನ್ನೆ ದಿನ ರಾತ್ರಿ ಶಿವಮೊಗ್ಗ ದಲ್ಲಿ ಲಘು ಲಾಠಿ ಪ್ರಹಾರ ಮಾಡಿ ಬಿಗಿಯಾದ ಕ್ರಮ ಜರುಗಿಸಿರುವುದು ಸೂಕ್ತ ನಿರ್ಧಾರ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌. ಶಿವಮೊಗ್ಗ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು ಒಂದು ಸಣ್ಣ ಘಟನೆ ಶಿವಮೊಗ್ಗದ ಶಾಂತಿ ನೆಮ್ಮದಿಯನ್ನೇ ಬುಡ ಮೇಲು ಮಾಡಿಬಿಡುತ್ತದೆ ಈ ಹಿಂದಿನ ಹಲವಾರು ಘಟನೆಗಳು ನಮಗೆ ಪಾಠವಾಗಿದ್ದು ನಿನ್ನೆ ರಾತ್ರಿ […]

ಜನರ ಭಾವನೆಗಳನ್ನು ನೋಯಿಸಲು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಬೇಡಿ- ನಟ ಕಮಲ ಹಾಸನ್ ವಿರುದ್ಧ ಹೈಕೋರ್ಟ್ ತರಾಟೆ..!

ಬೆಂಗಳೂರು: ಕನ್ನಡ ಭಾಷೆಯ ಮೂಲದ ಬಗ್ಗೆ ನಟ ಕಮಲ್‌ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆಗೆ ಉಚ್ಚನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ತಮ್ಮ ತಪ್ಪಿಗೆ ಪೊಲೀಸರು ಯಾಕೆ ಭದ್ರತೆ ನೀಡಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ. ಭಾವನೆಗಳನ್ನು ನೋಯಿಸಲು ಮಾತಿನ ಹಕ್ಕನ್ನು ಬಳಸಬೇಡಿ ಎಂದು ಹೇಳಿದೆ. ಕರ್ನಾಟಕದಲ್ಲಿನ ಚಿತ್ರಮಂದಿರಗಳೂ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ತಮ್ಮ ಥಗ್‌ಲೈಫ್ ಚಿತ್ರದ ಪ್ರದರ್ಶನಕ್ಕೆ ಭದ್ರತೆ ಕೋರಿ ಕಮಲಹಾಸನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಜನರಿಂದ ಲಾಭಗಳಿಸಲು ಬಯಸುವ […]

ಶಿಕಾರಿಪುರ: ತೋಟಗಾರಿಕೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ: ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ್ದು, ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾಂಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (Weed Mat) ಟ್ರ‍್ಯಾಕ್ಟರ್ (20 ಪಿಟಿಓ), ಕೃಷಿಹೊಂಡ, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳಿಗೆ […]

ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ನಿವಾಸ ಶೋಧ..!

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಮನೆ ಸೇರಿದಂತೆ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ಮಾಡಿದ್ದಾರೆ. ಗದಗ ನಗರದ ಹುಡ್ಕೋ ಕಾಲೊನಿಯ ಗಂಗಾಧರ ಶಿರೋರ ಅವರ ಮನೆ ಹಾಗೂ ನಗರದ ಸಂಬಂಧಿಕರ ಮತ್ತು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಅವರ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಪೋಲಿಸರು […]

ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ ..!

ಶಿಕಾರಿಪುರ: ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದಾರೆ. ಈ ವೇಳೆ ತಾಲೂಕ್ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರಸಾದ್ ಮಾತನಾಡಿ ಪೌರ ಕಾರ್ಮಿಕರು ಹಾಗೂ ಪೌರ ನೌಕರರು ಪುರಸಭೆ ಮುಂಭಾಗದ ಹೊರ ಗುತ್ತಿಗೆ ಪದ್ಧತಿ ಸ್ಥಗಿತಗೊಳಿಸಿ, ಪೌರ ಕಾರ್ಮಿಕರನ್ನು, ನೌಕರರನ್ನು ಕಾಯಂಗೊಳಿಸಬೇಕು. ಜೀವನ ಭದ್ರತೆ ಇಲ್ಲದೆ, ಅನೇಕ ವರ್ಷಗಳಿಂದಲೂ ಪೌರ ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲರನ್ನೂ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಇಲ್ಲದಿದ್ದರೆ, ಮುಷ್ಕರ […]

ಶಿಕಾರಿಪುರ ಪುರಸಭೆಯಲ್ಲಿ ಭೂ ಪರಿವರ್ತನೆ ಬ್ರಹ್ಮಾಂಡ ಭ್ರಷ್ಟಾಚಾರ:ಗೋಣಿ ಪ್ರಕಾಶ್ ಆರೋಪ

ಶಿಕಾರಿಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಜಮೀನು ಭೂ ಪರಿವರ್ತನೆ ಎನ್ ಓ ಸಿ ನೀಡಲು ಪುರಸಭಾ ಮುಖ್ಯಾಧಿಕಾರಿಗಳ ಹಾಗೂ ನಿಕಟಪೂರ್ವ ಅಧ್ಯಕ್ಷರ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಪುರಸಭಾ ಸದಸ್ಯ ಗೋಣಿ ಪ್ರಕಾಶ್ ಗಂಭೀರವಾಗಿ ಆರೋಪಿಸಿದ್ದಾರೆ. ಪುರಸಭಾ ಸಭಾಂಗಣದಲ್ಲಿ ಗುರುವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣದ ಪುರಸಭೆಗೆ ಒಳಪಡುವ ರೈತರು ನಿವೇಶನೆ ಭೂ ಪರಿವರ್ತನೆ ಏನ್ ಓ ಸಿ‌ ನೀಡಲು ತಮ್ಮ ಜಮೀನುಗಳ ದಾಖಲೆ ಸಹಿತ ಪುರಸಭೆಗೆ ಅರ್ಜಿ […]

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಗೇಟ್ ಪಾಸ್ : ರಮೇಶ್ ಗುಂಡ ಆರೋಪ..!

ಶಿಕಾರಿಪುರ ಪಟ್ಟಣದ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗುಂಡಾರವರು ಮಾತನಾಡಿ ಪಟ್ಟಣದ ಹಾಗೂ ತಾಲೂಕಿನ ಅನೇಕ ಖಾಸಗಿ ವಿದ್ಯಾ ಸಂಸ್ಥೆಗಳು ಎಲ್ ಕೆ ಜಿ ಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿ ನಂತರಅಂಕಗಳು ಕಡಿಮೆ ಬಂದಿದೆ ಎಂದು 9ನೇ ತರಗತಿಯ ನಂತರ ಎಸ್ ಎಸ್ ಎಲ್ ಸಿ ಗೆ ಹೋಗಬೇಕಿದ್ದ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಖಾಸಗಿ ಶಾಲೆಗೆ ಅಥವಾ ಸರ್ಕಾರಿ ಶಾಲೆಗೆ ಹೋಗುವಂತೆ ಶಾಲೆಯಿಂದ ವರ್ಗಾವಣೆ ಪತ್ರ ನೀಡಿ ಕಳಿಸಿದ್ದಾರೆ ಎಂದು […]