ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಯಿರಿ – ಹಿಂದೂ ಜನಜಾಗೃತಿ ಸಮಿತಿ

ಆಗಸ್ಟ್ 15ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ ಆದರೆ ಅದೇ ದಿನ ರಾಷ್ಟ್ರಧ್ವಜವು ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ ಹೀಗಾಗಿ ಪ್ಲಾಸ್ಟಿಕ್ ,ರಾಷ್ಟ್ರಧ್ವಜಗಳ ಮಾರಾಟವನ್ನು ಕೂಡಲೇ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಾನ್ಯತಹಶೀಲ್ದಾರ್, ಡಿ.ವೈ. ಎಸ್. ಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜದ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮುಂಬೈ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಯಿತು ಈ ಸಂಬಂಧ […]
ಚಿಕ್ಕಮಗಳೂರು ಇಬ್ಬರ ಮೇಲೆ ಚಿರತೆ ದಾಳಿ…!

ಚಿಕ್ಕಮಗಳೂರು: ಇಬ್ಬರು ದಾರಿಹೊಕ್ಕರ ಮೇಲೆ ಚಿರತೆ ದಾಳಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಎಮ್ಮೆದೊಡ್ಡಿ ಗ್ರಾಮದ ಮೂರ್ತಣ್ಣ ಹಾಗೂ ಮಂಜಣ್ಣ ಎಂಬುವರು ಬೆಳಗ್ಗೆ ಸಖರಾಯಪಟ್ಟಣಕ್ಕೆ ಬರುವಾಗ ರಸ್ತೆ ಮಧ್ಯೆ ಚಿರತೆ ದಾಳಿ ಮಾಡಿದೆ. ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳನ್ನ ಚಿರತೆ ತಿಂದಿದ್ದು ಮಂಜಣ್ಣ ಎಂಬುವರ ಎಡಗೈಗೂ ಗಂಭೀರ ಗಾಯವಾಗಿದೆ. ಚಿರತೆ ಮತ್ತೊಬ್ಬರ ಮೇಲೆ ದಾಳಿಗೆ ಯತ್ನಿಸುತ್ತಿದ್ದಂತೆ ಸ್ಥಳೀಯರು ಕೂಗುತ್ತಿದ್ದಂತೆ ಚಿರತೆ ಓಡಿಹೋಗಿದೆ. ಸ್ಥಳೀಯರು ಚಿರತೆಯನ್ನ ಕಲ್ಲಿನಿಂದ […]
ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ದಿಂದ ಈಸೂರಿನ ಹುತಾತ್ಮರ ಸ್ಮಾರಕ ಸ್ವಚ್ಚತೆ..!

ಶಿಕಾರಿಪುರ: ಬಿಜೆಪಿ ಯುವಮೋರ್ಚಾ ವತಿಯಿಂದ ಈಸೂರು ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ವನ್ನು ಸ್ವಚ್ಛತೆ ಮಾಡುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಆಚರಿಸಿದರು. ಈ ವೇಳೆ ಯುವ ಮೋರ್ಚಾ ಅಧ್ಯಕ್ಷ ವೀರಣ್ಣಗೌಡ ಮಾತನಾಡಿಅದಮ್ಯ ಸಾಹಸ ಅಪ್ರತಿಮ ಶೌರ್ಯ ದೇಶಭಕ್ತಿಯ ಸ್ಫೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಬೆಯ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ಧದ ವೀರ ಹುತಾತ್ಮರಿಗೆ ಕಾರ್ಗಿಲ್ ವಿಜಯ ದಿವಸ ಎಂದು ಆಚರಣೆ ಮಾಡಲಾಗುತ್ತಿದೆ. ಈ ದಿನ ನಮ್ಮ ವೀರ ಯೋಧರಿಗೆ ಗೌರವ ಸಲ್ಲಿಸಲು ಇತಿಹಾಸದಲ್ಲಿ ಮೊಟ್ಟಮೊದಲ […]
ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]
ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 25/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಮಲ್ಲೇಶ್ ಬೀರಪ್ಪ ಪೂಜಾರ್ ಅವರು ಘೋಷಿಸಿದ್ದಾರೆ. News by: Raghu Shikari-7411515737
ಶಿಕಾರಿಪುರ ತಾಲೂಕಿನ ಬಂದಳಿಕೆ ಹಿರೇಜಂಬೂರು ಜಕ್ಕೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಸಿಎಂ ಸ್ಪಂದನೆ..!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಂದಳಿಕೆ ಸಮೀಪದ ಜೈನ ಬಸದಿಯು ದಯಾನೀಯ ಸ್ಥಿತಿಯಲ್ಲಿದೆ. ಜೊತೆಗೆ ತಾಲ್ಲೂಕಿನ ಹಿರೇಜಂಬೂರು ಗ್ರಾಮದಲ್ಲಿರುವ ಶಂಭು ಜಕ್ಕೇಶ್ವರ ದೇವಾಲಯದ ಜೀರ್ಣೋದ್ಧಾರ ಆಗಬೇಕಾಗಿದೆ ಎಂಬ ವಿಚಾರವನ್ನು ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ಗಮನಕ್ಕೆ ತಂದಿದ್ದು, ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಪರಿಶೀಲಿಸಿದಾಗ ಸದರಿ ಪ್ರವಾಸಿ ತಾಣವು ಭಾರತೀಯ ಪುರಾತತ್ವ ಇಲಾಖೆಗೆ ಒಳಪಡುವುದರಿಂದ ಸಂರಕ್ಷಣಾ ಕಾರ್ಯಗಳನ್ನು ಪುರಾತತ್ವ ಇಲಾಖೆಯಿಂದ ಕೈಗೊಳ್ಳಲಾಗುವುದು. ಜೊತೆಗೆ […]
ಕೆಎಸ್ಆರ್ ಟಿಸಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ…!

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸುವಲ್ಲಿ ಕಾರ್ಯನಿರತರಾಗಿದ್ದಾರೆ.ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ […]
ಧರ್ಮಸ್ಥಳ ಪ್ರಕರಣ:ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ತನಿಖೆಗಾಗಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ ಎಂದು ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕರಾದ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಿಕ ಎಂ.ಎಂ.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ […]
ಚಿಕ್ಕಮಗಳೂರು ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಖಾಸಗಿ ಬಸ್ ಪಲ್ಟಿ..!

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ-ಮಂಜುವಿನ ಕಾರಣದಿಂದಾಗಿ […]
ವಿಜ್ಞಾನ-ವಿನೋದ ವಿಚಾರ ಮಂಥನಕ್ಕೆ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್!

ಬೆಂಗಳೂರು: ಸೈನ್ಸ್ ಅಥವಾ ವಿಜ್ಞಾನ ಅನ್ನೋದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಬಗೆದಷ್ಟೂ ತಿಳಿದುಕೊಳ್ಳುವ ಆಸಕ್ತಿ ನಿಮಗಿದ್ದರೆ, ನಿಮ್ಮ ಮಕ್ಕಳಿಗೆ ಕಲಿಸಬೇಕೆಂದಿದ್ದರೆ ಬೆಂಗಳೂರಿನ ಜಯನಗರದ ಹೃದಯ ಭಾಗದಲ್ಲಿರುವ “ದಿ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್‌ಗೆ” (ParSEC) ಬನ್ನಿ. ಈ ಕೇಂದ್ರದಲ್ಲಿ ಪ್ರಾಯೋಗಿಕ ಕಲಿಕೆಗೆ ಅವಕಾಶ ಇದ್ದು, ನಮ್ಮ ಜೀವನದಲ್ಲಿ ವಿಜ್ಞಾನ ಹೇಗೆ ಅಡಗಿದೆ ಎಂಬುದನ್ನು ಇಲ್ಲಿ ಅರಿಯಬಹುದಾಗಿದೆ. ಅಲ್ಲದೆ, ವಿಜ್ಞಾನದಲ್ಲಿ ತಂತ್ರಜ್ಞಾನದ ಬಳಕೆಯನ್ನೂ ಕಲಿಯಬಹುದಾಗಿದೆ. ವಿಜ್ಞಾನ ನಮ್ಮ ದೈನಂದಿನ ಜೀವನದ […]