ಪತ್ರಕರ್ತರು ಸಂವಿಧಾನಕ್ಕೆ ನಿಷ್ಠರಾಗಿರಬೇಕು: ಎನ್ ರವಿಕುಮಾರ್

ಶಿಕಾರಿಪುರ: ಪತ್ರಕರ್ತರು ಸಂವಿಧಾನಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಾಗಿದೆ ಯಾವುದೇ ಧರ್ಮಕ್ಕೆ ,ಜಾತಿಗೆ ಸೀಮಿತವಾಗಿರದೇ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಪೂರಕವಾದ ಸುದ್ದಿಗಳು ಇಂದು ನಮ್ಮ ದೃಶ್ಯಮಾಧ್ಯಮಗಳಲ್ಲಿ ಕಳೆದುಹೊಗಿದೆ ಸಮಾಜಕ್ಕೆ ನಾವು ಪಶ್ನಾತೀತರಲ್ಲ ಸಮಾಜಿಕ ನ್ಯಾಯದ ಪರವಾಗಿ ಇರುವ ಪತ್ರಕರ್ತ ಮಾತ್ರ ನಿಜವಾದ ಪತ್ರಕರ್ತ ವಾಟ್ಸಪ್ ಯುನಿವರ್ಸಿಟಿ ಯನ್ನು ನಂಬಿ ಅದನ್ನ ನಿಜ […]

ಸಿಗಂದೂರು ಸೇತುವೆ ಲೋಕಾರ್ಪಣೆ:ಚೌಡೇಶ್ವರಿ ದೇವಿ ಹೆಸರು ನಾಮಕರಣ..!

ಶಿವಮೊಗ್ಗ: ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 6 ದಶಕಗಳ ಕನಸಾಗಿದ್ದ ಶಿವಮೊಗ್ಗದ ಸಿಗಂದೂರು ಭಾಗದ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಅಂಬಲಗೋಡು- ಕಳಸವಳ್ಳಿ- ಸಿಗಂಧೂರು ಸೇತುವೆಯನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಸೇತುವೆಯಾಗಿದ್ದು, ಇದರ ಹೆಸರನ್ನು ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ ಎಂದು ಪ್ರಕಟಿಸಿದರು. ನಂತರ […]

ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಎನ್ ಎಸ್’ಯುಐ ಮನವಿ

ಪಟ್ಟಣದ ಬಿಇಓ ಕಚೇರಿಯದರು ತಾಲೂಕು ಎನ್ ಎಸ್ ಯು ಐ ಹಾಗೂ ದಲಿತ ಸಂಘರ್ಷ ಸಮಿತಿ ವಿವಿಧ ಸಂಘ ಸಂಸ್ಥೆಗಳ ಸಹಾಯಕದೊಂದಿಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು ಎಂದು ಆದೇಶವಿದ್ದರೂ ಕೆಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿಸುತ್ತಿಲ್ಲ ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಕೂಡಲೇ ಅಧಿಕಾರಿಗಳು ಈ […]

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ – ಬಿ.ವೈ. ವಿಜಯೇಂದ್ರ

ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇಕಡ 50:50 ರ ಅನುದಾನದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಶಿಕಾರಿಪುರ ತಾಲ್ಲೂಕು ಅಂಜನಾಪುರ ಡ್ಯಾಮ್ ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ವಿಳಂಬ ಮಾಡದೇ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರುಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ […]

ವಸತಿ ಶಾಲೆ ವಿದ್ಯಾರ್ಥಿಗಳಿಗೆ ಇನ್ಸ್‌ಪೈಯರ್ ವಿಡಿಯೋ ಸಂವಾದ ಕಾರ್ಯಕ್ರಮ

ಶಿವಮೊಗ್ಗ: ಇನ್ಸ್‌ಪೈಯರ್ ಎಂಬ ಕಾರ್ಯಕ್ರಮದಲ್ಲಿ ಇನ್ಪ್ಸರ್ ಇಗ್ನಿಟ್ ಮೈಂಡ್ಸ್ ಇಗ್ನಿಟ್ ಪಾಸಿಟಿವಿಟಿ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ಮತ್ತು ನಾಲ್ಕು ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ಶಿವಮೊಗ್ಗ ಜಿಲ್ಲೆಯ 32 ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು 259 ವಿದ್ಯಾರ್ಥಿ ನಿಲಯಗಳ 6ನೇ ತರಗತಿಯಿಂದ ಇಂಜಿನಿಯರಿಂಗ್ ಓದುತ್ತಿರುವ ಸುಮಾರು 12-13 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಶೇಷವಾದ ಇನ್ಸ್‌ಪೈಯರ್ (Inspire) ಎಂಬ ವೀಡಿಯೋ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ವಿಧಾನ ಪರಿಷತ್ […]

ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ಹಾಗೂ ಮುಂಬಡ್ತಿ ಇಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ರಾಜ್ಯದಲ್ಲಿ 2 ಲಕ್ಷ 50 ಸಾವಿರ ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇಕಡ 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ […]

ಶಿಕಾರಿಪುರ ಆಧಾರ್ ಕಾರ್ಡ್ ನೋಂದಣಿ ತಿದ್ದುಪಡಿಗೆ ಜನರ ಪರದಾಟ: ಕಾಂಗ್ರೆಸ್ ಮನವಿ

ಶಿಕಾರಿಪುರ ತಾಲೂಕಿನಲ್ಲಿ ಆಧಾರ್ ನೋಂದಣಿ ಕೇಂದ್ರಗಳ ಕೊರತೆಯಿಂದ ಪೋಸ್ಟ್ ಆಫೀಸ್ ಹಾಗೂ ಇನ್ನಿತರ ಕೇಂದ್ರಗಳಲ್ಲಿ ಜನರು ಮುಂಜಾನೆ 4 ಗಂಟೆಗೆ ಕಛೇರಿ ಬಾಗಿಲು ಕಾಯುವಂತಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ತಾಲೂಕ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿತಾಲೂಕಿನಲ್ಲಿ ಹೊಸ ಆಧಾರ್ ಕಾರ್ಡ್ ಮಾಡುವ ಮತ್ತು ತಿದ್ದುಪಡಿ ಮಾಡುವ ಕೇಂದ್ರಗಳು ಸರಿಯಾಗಿ ಕೆಲಸ ಮಾಡದೆ ಇರುವ ಪರಿಣಾಮ ವಿದ್ಯಾರ್ಥಿಗಳು ನಾಗರಿಕರು ಬೆಳಗ್ಗೆ 4 ಗಂಟೆಗೆ ಬಂದು ಕ್ಯೂನಲ್ಲಿ ನಿಂತು […]

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 3/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. News By: Raghu Shikari-7411515737

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿತ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದ್ದು, ಅಭಿವೃದ್ಧಿ ಕೆಲಸಕಾರ್ಯಗಳು ಕುಂಠಿತವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಖುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕಡೆಗಣಿಸಲಾಗಿದೆ. ರೈತರ ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದ್ದಾರೆ. ಆಡಳಿತ ಪಕ್ಷಗಳ ಶಾಸಕರೇ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣ, ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಹೈಕೋರ್ಟ್, ಸಿಬಿಐಗೆ […]

ಐದು ವರ್ಷ ನಾನೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ: ಸಿಎಂ ಸಿದ್ದರಾಮಯ್ಯ..!

ಬೆಂಗಳೂರು: ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಬಿಜೆಪಿ ಹಗಲುಗನಸು ಕಾಣುತ್ತಿದೆ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ ಎಂದು ವಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು […]