ಏ ಕರಿ ಟೋಪಿ ಎಂಎಲ್ ಎ ಇಲ್ಲಿಬಾ ಎಂದ ಡಿಕೆಶಿ ವೇದಿಕೆ ಮೇಲೆ ಹೈಡ್ರಾಮ..!

ಬೆಂಗಳೂರು: ಮತ್ತಿಕರೆಯ ಜೆಪಿ ಪಾರ್ಕ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಡಿಕೆಶಿವಕುಮಾರ್ ಅವರು ಇಂದು ವಾಕ್ ಮಾಡುತ್ತಾ ಜೆಪಿ ಪಾರ್ಕ್‌ಗೆ ಆಗಮಿಸಿದರು. ಆರ್‌ಎಸ್‌ಎಸ್ ಪಥಸಂಚಲನ ಮುಗಿಸಿದ್ದ ಶಾಸಕ ಮುನಿರತ್ನ ಸಮವಸ್ತ್ರದಲ್ಲೇ ಜನರ ಮಧ್ಯೆ ಕುಳಿತಿದ್ದರು. ಮುನಿರತ್ನ ಅವರು ಕಾರ್ಯಕ್ರಮದಲ್ಲಿ ಕುಳಿತಿರುವುದನ್ನು ನೋಡಿದ ಡಿಕೆಶಿ ಅವರು ಕರಿ ಟೋಪಿ […]
ಶಿಕಾರಿಪುರ ಕುಟ್ರಹಳ್ಳಿ ಟೋಲ್ ತೆರುವುಗೊಳಿಸುವಂತೆ ಸದನದಲ್ಲಿ ಬಿ ವೈ ವಿಜಯೇಂದ್ರ ಆಗ್ರಹ

ಶಿಕಾರಿಪುರದ ರಾಜ್ಯ ಹೆದ್ದಾರಿಸಂಖ್ಯೆ 57 ರಲ್ಲಿ ಒಂದು ಟೋಲ್ ಇನ್ನೊಂದು ಟೋಲ್ ಕುಟ್ರಳ್ಳಿ ಹತ್ತಿರ ನಿರ್ಮಾಣವಾಗಿದ್ದು ಇದರಿಂದ ಸ್ಥಳೀಯಾರಿಗೆ ತೀವ್ರ ತೊಂದರೆ ಆಗಿದೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಒಂದು ಟೋಲ್ ಗು ಇನ್ನೊಂದು ಟೋಲ್ ಗು 65 ಕಿಲೋಮೀಟರ್ ದೂರ ಇರಬೇಕು ಅನ್ನೋ ನಿಯಮವಿದ್ರು ಕೇವಲ 35 ಕಿಲೋಮೀಟರ್ ಗೆ ಕುಟ್ರಳ್ಖಿ ಸಮೀಪ ಟೋಲ್ ನಿರ್ಮಾಣ ಮಾಡಿದ್ದು ಇಲ್ಲಿ ಪ್ರತಿನಿತ್ಯ 75 ರುಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ […]
ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದ್ದು, 2-3 ತಿಂಗಳಲ್ಲಿ ನೋಟಿಫಿಕೇಶನ್ ಆಗಲಿದೆ ಎಂದ ಅವರು ಹೇಳಿದರು. ಮೀಸಲಾತಿ ಕುರಿತು ಹೈಕೋರ್ಟ್ನಲ್ಲಿ ಒಪ್ಪಿಕೊಂಡಿದ್ದು, ಅದರ ಆಂತರಿಕ ಕೆಲಸ ನಡೆಯುತ್ತಿದೆ. ಈ ವರ್ಷದಲ್ಲಿಯೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. News By: Raghu Shikari-7411515737
ರೋಜಾ ಚೇತನ್ ಇವರಿಗೆ ಪಿ.ಹೆಚ್.ಡಿ ಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ. ಹಿರೇಜಂಬೂರ ನಿವಾಸಿ ನಂದಿಹಳ್ಳಿ ಆನಂದಪ್ಪರವರ ಪುತ್ರಿ ಹಾಗೂ ಡಾ.ಚೇತನ್ ಹೆಚ್ ಪಿ ಅವರ ಪತ್ನಿ ಡಾ.ಎ ರೋಜಾ ಚೇತನ್ ಇವರು “ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಮಹಿಳಾ ಪ್ರಶ್ನೆಗಳು” (21ನೇ ಶತಮಾನವನ್ನು ಅನುಲಕ್ಷಿಸಿ ) ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕನ್ನಡ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ಇವರಿಗೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಎ ಬಿ ಉಮೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ. […]
ಬಹು ನಿರೀಕ್ಷಿತ ಒಳ ಮೀಸಲಾತಿ ಡಾ.ನಾಗಮೋಹನದಾಸ್ ಆಯೋಗ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಶಿಫಾರಸು ಮಾಡಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಶಿಫಾರಸುಗಳನ್ನು ಒಳಗೊಂಡ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಿದೆ. ಒಳಮೀಸಲಾತಿ ಬೇಕೆಂದು ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ 30 ವರ್ಷಗಳ ಹೋರಾಟ ಅಂತಿಮವಾಗಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 01-08-2024 ರಂದು ದವಿಂದರ್‌ಸಿಂಗ್ ಪ್ರಕರಣದ ತೀರ್ಪಿನಲ್ಲಿ ಈ ರೀತಿ ಸ್ಪಷ್ಟಪಡಿಸಿತು ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನದ ಅನುಚ್ಛೇದ 14 ರಲ್ಲಿ […]
ಅತ್ಯಾಚಾರ ಕೇಸ್’ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು..!

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ. ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟವಾಗಲಿದೆ.
ಚಿಕ್ಕಮಗಳೂರು ಇಬ್ಬರ ಮೇಲೆ ಚಿರತೆ ದಾಳಿ…!

ಚಿಕ್ಕಮಗಳೂರು: ಇಬ್ಬರು ದಾರಿಹೊಕ್ಕರ ಮೇಲೆ ಚಿರತೆ ದಾಳಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಎಮ್ಮೆದೊಡ್ಡಿ ಗ್ರಾಮದ ಮೂರ್ತಣ್ಣ ಹಾಗೂ ಮಂಜಣ್ಣ ಎಂಬುವರು ಬೆಳಗ್ಗೆ ಸಖರಾಯಪಟ್ಟಣಕ್ಕೆ ಬರುವಾಗ ರಸ್ತೆ ಮಧ್ಯೆ ಚಿರತೆ ದಾಳಿ ಮಾಡಿದೆ. ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳನ್ನ ಚಿರತೆ ತಿಂದಿದ್ದು ಮಂಜಣ್ಣ ಎಂಬುವರ ಎಡಗೈಗೂ ಗಂಭೀರ ಗಾಯವಾಗಿದೆ. ಚಿರತೆ ಮತ್ತೊಬ್ಬರ ಮೇಲೆ ದಾಳಿಗೆ ಯತ್ನಿಸುತ್ತಿದ್ದಂತೆ ಸ್ಥಳೀಯರು ಕೂಗುತ್ತಿದ್ದಂತೆ ಚಿರತೆ ಓಡಿಹೋಗಿದೆ. ಸ್ಥಳೀಯರು ಚಿರತೆಯನ್ನ ಕಲ್ಲಿನಿಂದ […]
ಶಿಕಾರಿಪುರ ತಾಲೂಕಿನ ಬಂದಳಿಕೆ ಹಿರೇಜಂಬೂರು ಜಕ್ಕೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಸಿಎಂ ಸ್ಪಂದನೆ..!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಂದಳಿಕೆ ಸಮೀಪದ ಜೈನ ಬಸದಿಯು ದಯಾನೀಯ ಸ್ಥಿತಿಯಲ್ಲಿದೆ. ಜೊತೆಗೆ ತಾಲ್ಲೂಕಿನ ಹಿರೇಜಂಬೂರು ಗ್ರಾಮದಲ್ಲಿರುವ ಶಂಭು ಜಕ್ಕೇಶ್ವರ ದೇವಾಲಯದ ಜೀರ್ಣೋದ್ಧಾರ ಆಗಬೇಕಾಗಿದೆ ಎಂಬ ವಿಚಾರವನ್ನು ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ಗಮನಕ್ಕೆ ತಂದಿದ್ದು, ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಪರಿಶೀಲಿಸಿದಾಗ ಸದರಿ ಪ್ರವಾಸಿ ತಾಣವು ಭಾರತೀಯ ಪುರಾತತ್ವ ಇಲಾಖೆಗೆ ಒಳಪಡುವುದರಿಂದ ಸಂರಕ್ಷಣಾ ಕಾರ್ಯಗಳನ್ನು ಪುರಾತತ್ವ ಇಲಾಖೆಯಿಂದ ಕೈಗೊಳ್ಳಲಾಗುವುದು. ಜೊತೆಗೆ […]
ಕೆಎಸ್ಆರ್ ಟಿಸಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ…!

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸುವಲ್ಲಿ ಕಾರ್ಯನಿರತರಾಗಿದ್ದಾರೆ.ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ […]
ಧರ್ಮಸ್ಥಳ ಪ್ರಕರಣ:ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ತನಿಖೆಗಾಗಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ ಎಂದು ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕರಾದ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಿಕ ಎಂ.ಎಂ.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ […]