ಅತ್ಯಾಚಾರ ಕೇಸ್’ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು..!

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ. ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟವಾಗಲಿದೆ.
ಚಿಕ್ಕಮಗಳೂರು ಇಬ್ಬರ ಮೇಲೆ ಚಿರತೆ ದಾಳಿ…!

ಚಿಕ್ಕಮಗಳೂರು: ಇಬ್ಬರು ದಾರಿಹೊಕ್ಕರ ಮೇಲೆ ಚಿರತೆ ದಾಳಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಎಮ್ಮೆದೊಡ್ಡಿ ಗ್ರಾಮದ ಮೂರ್ತಣ್ಣ ಹಾಗೂ ಮಂಜಣ್ಣ ಎಂಬುವರು ಬೆಳಗ್ಗೆ ಸಖರಾಯಪಟ್ಟಣಕ್ಕೆ ಬರುವಾಗ ರಸ್ತೆ ಮಧ್ಯೆ ಚಿರತೆ ದಾಳಿ ಮಾಡಿದೆ. ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳನ್ನ ಚಿರತೆ ತಿಂದಿದ್ದು ಮಂಜಣ್ಣ ಎಂಬುವರ ಎಡಗೈಗೂ ಗಂಭೀರ ಗಾಯವಾಗಿದೆ. ಚಿರತೆ ಮತ್ತೊಬ್ಬರ ಮೇಲೆ ದಾಳಿಗೆ ಯತ್ನಿಸುತ್ತಿದ್ದಂತೆ ಸ್ಥಳೀಯರು ಕೂಗುತ್ತಿದ್ದಂತೆ ಚಿರತೆ ಓಡಿಹೋಗಿದೆ. ಸ್ಥಳೀಯರು ಚಿರತೆಯನ್ನ ಕಲ್ಲಿನಿಂದ […]
ಶಿಕಾರಿಪುರ ತಾಲೂಕಿನ ಬಂದಳಿಕೆ ಹಿರೇಜಂಬೂರು ಜಕ್ಕೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಸಿಎಂ ಸ್ಪಂದನೆ..!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಂದಳಿಕೆ ಸಮೀಪದ ಜೈನ ಬಸದಿಯು ದಯಾನೀಯ ಸ್ಥಿತಿಯಲ್ಲಿದೆ. ಜೊತೆಗೆ ತಾಲ್ಲೂಕಿನ ಹಿರೇಜಂಬೂರು ಗ್ರಾಮದಲ್ಲಿರುವ ಶಂಭು ಜಕ್ಕೇಶ್ವರ ದೇವಾಲಯದ ಜೀರ್ಣೋದ್ಧಾರ ಆಗಬೇಕಾಗಿದೆ ಎಂಬ ವಿಚಾರವನ್ನು ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ಗಮನಕ್ಕೆ ತಂದಿದ್ದು, ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಪರಿಶೀಲಿಸಿದಾಗ ಸದರಿ ಪ್ರವಾಸಿ ತಾಣವು ಭಾರತೀಯ ಪುರಾತತ್ವ ಇಲಾಖೆಗೆ ಒಳಪಡುವುದರಿಂದ ಸಂರಕ್ಷಣಾ ಕಾರ್ಯಗಳನ್ನು ಪುರಾತತ್ವ ಇಲಾಖೆಯಿಂದ ಕೈಗೊಳ್ಳಲಾಗುವುದು. ಜೊತೆಗೆ […]
ಕೆಎಸ್ಆರ್ ಟಿಸಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ…!

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸುವಲ್ಲಿ ಕಾರ್ಯನಿರತರಾಗಿದ್ದಾರೆ.ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ […]
ಧರ್ಮಸ್ಥಳ ಪ್ರಕರಣ:ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ತನಿಖೆಗಾಗಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ ಎಂದು ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕರಾದ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಿಕ ಎಂ.ಎಂ.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ […]
ಚಿಕ್ಕಮಗಳೂರು ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಖಾಸಗಿ ಬಸ್ ಪಲ್ಟಿ..!

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ-ಮಂಜುವಿನ ಕಾರಣದಿಂದಾಗಿ […]
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ – ಬಿ.ವೈ. ವಿಜಯೇಂದ್ರ

ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇಕಡ 50:50 ರ ಅನುದಾನದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಶಿಕಾರಿಪುರ ತಾಲ್ಲೂಕು ಅಂಜನಾಪುರ ಡ್ಯಾಮ್ ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ವಿಳಂಬ ಮಾಡದೇ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರುಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ […]
ವಸತಿ ಶಾಲೆ ವಿದ್ಯಾರ್ಥಿಗಳಿಗೆ ಇನ್ಸ್‌ಪೈಯರ್ ವಿಡಿಯೋ ಸಂವಾದ ಕಾರ್ಯಕ್ರಮ

ಶಿವಮೊಗ್ಗ: ಇನ್ಸ್‌ಪೈಯರ್ ಎಂಬ ಕಾರ್ಯಕ್ರಮದಲ್ಲಿ ಇನ್ಪ್ಸರ್ ಇಗ್ನಿಟ್ ಮೈಂಡ್ಸ್ ಇಗ್ನಿಟ್ ಪಾಸಿಟಿವಿಟಿ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ಮತ್ತು ನಾಲ್ಕು ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ಶಿವಮೊಗ್ಗ ಜಿಲ್ಲೆಯ 32 ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು 259 ವಿದ್ಯಾರ್ಥಿ ನಿಲಯಗಳ 6ನೇ ತರಗತಿಯಿಂದ ಇಂಜಿನಿಯರಿಂಗ್ ಓದುತ್ತಿರುವ ಸುಮಾರು 12-13 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಶೇಷವಾದ ಇನ್ಸ್‌ಪೈಯರ್ (Inspire) ಎಂಬ ವೀಡಿಯೋ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ವಿಧಾನ ಪರಿಷತ್ […]
ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ಹಾಗೂ ಮುಂಬಡ್ತಿ ಇಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ರಾಜ್ಯದಲ್ಲಿ 2 ಲಕ್ಷ 50 ಸಾವಿರ ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇಕಡ 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ […]
ಶಿಕಾರಿಪುರ ಆಧಾರ್ ಕಾರ್ಡ್ ನೋಂದಣಿ ತಿದ್ದುಪಡಿಗೆ ಜನರ ಪರದಾಟ: ಕಾಂಗ್ರೆಸ್ ಮನವಿ

ಶಿಕಾರಿಪುರ ತಾಲೂಕಿನಲ್ಲಿ ಆಧಾರ್ ನೋಂದಣಿ ಕೇಂದ್ರಗಳ ಕೊರತೆಯಿಂದ ಪೋಸ್ಟ್ ಆಫೀಸ್ ಹಾಗೂ ಇನ್ನಿತರ ಕೇಂದ್ರಗಳಲ್ಲಿ ಜನರು ಮುಂಜಾನೆ 4 ಗಂಟೆಗೆ ಕಛೇರಿ ಬಾಗಿಲು ಕಾಯುವಂತಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ತಾಲೂಕ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ ಮಾತನಾಡಿತಾಲೂಕಿನಲ್ಲಿ ಹೊಸ ಆಧಾರ್ ಕಾರ್ಡ್ ಮಾಡುವ ಮತ್ತು ತಿದ್ದುಪಡಿ ಮಾಡುವ ಕೇಂದ್ರಗಳು ಸರಿಯಾಗಿ ಕೆಲಸ ಮಾಡದೆ ಇರುವ ಪರಿಣಾಮ ವಿದ್ಯಾರ್ಥಿಗಳು ನಾಗರಿಕರು ಬೆಳಗ್ಗೆ 4 ಗಂಟೆಗೆ ಬಂದು ಕ್ಯೂನಲ್ಲಿ ನಿಂತು […]