ಕುವೆಂಪು ವಿವಿ ಅಂತರ್ ಕಾಲೇಜು ದೇಹಧಾರ್ಢ್ಯ ಸ್ಪರ್ಧೆಯಲ್ಲಿ ಪವನ್’ಗೆ ಚಿನ್ನದ ಪದಕ..!

ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜು ತರೀಕೆರೆಯಲ್ಲಿ ನೆಡೆದ 2024 – 25ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಪುರುಷರ ಅಂತರ ಕಾಲೇಜು ದೇಹಧಾರ್ಡ್ಯತೆ ಸ್ಪರ್ದೆಯಲ್ಲಿ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪವನ್ ಜೆ.ಎಂ ತೃತೀಯ ಬಿ.ಎ.ನಲ್ಲಿ ವಿದ್ಯಾರ್ಥಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಅಂತರ್ ಕಾಲೇಜು ಮಟ್ಟದ 85 ಕೆ ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಬಂಗಾರದ ಪದಕ ಪಡೆದು ಕಾಲೇಜುಗೆ ಕೀರ್ತಿಯನ್ನು ತಂದಿರುತ್ತಾನೆ‌. ಶಿಕಾರಿಪುರ ನಿವಾಸಿ ಬಸ್ ಏಜೆಂಟ್ ಮಂಜುನಾಥ ಅವರ ಪುತ್ರನಾಗಿದಾನೆ. ಈ […]

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು ಅಪಾರ ಪ್ರಮಾಣದ ಅರಣ್ಯ ನಾಶ..!

ಚಿಕ್ಕಮಗಳೂರು : ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮುಳ್ಳಯ್ಯನಗಿರಿ, ಸೀತಾಳ್ಳಯ್ಯನಗಿರಿ ಪರ್ವತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು 15 ಕಿಲೋ ಮೀಟರ್ ಗು ಹೆಚ್ಚು ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ ಸ್ಥಳಕ್ಕೆ ಅಗ್ನಿ ಶಾಮಕದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದರು ಬೆಂಕಿ ಸಂಪೂರ್ಣ ನಂದಿಸಲು ಸಾಧ್ಯವಾಗಿಲ್ಲ. ಬೆಂಕಿಯಿಂದಾಗಿ ಈ ಪರ್ವತದಲ್ಲಿರುವ ಅಪರೂಪದ ಔಷಧಿಗುಣಗಳ ಸಸ್ಯ ಸಂಪತ್ತು,ಇತರೆ ಮರ ಗಿಡಗಳು ನಾಶವಾಗಿವೆ. ಇನ್ನು ಕಳೆದ […]

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ದರಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು:ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿ‌ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ […]

ಕೆಪಿಸಿಸಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ಧ : ಸಹಕಾರ ಸಚಿವ ಕೆ‌.ಎನ್ ರಾಜಣ್ಣ

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಲು ಸಿದ್ದ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಹೈಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ’ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸಿದ್ಧಾಂತಕ್ಕೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯಗಳು ಬೆಂಬಲ ನೀಡಿದ್ದು, ಶೋಷಿತ ವರ್ಗಗಳ ಸಮಾವೇಶ ಏರ್ಪಡಿಸುವ […]

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್‌ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ […]

ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಮದುವೆ: ಅಭಿಮಾನಿಗಳಿಗೆ ಮುಕ್ತ ಅವಕಾಶ

ಮೈಸೂರು : ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಅವರ ವಿವಾಹ ಫೆಬ್ರವರಿ 15ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ನೆರವೇರಲಿದ್ದು ಅಭಿಮಾನಿಗಳು ಪಾಲ್ಗೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ. ಈ ಕುರಿತು ಸ್ವತಃ ನಟ ಡಾಲಿ ಧನಂಜಯ್ ಅವರು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು ಎಲ್ಲವು ಮೈಸೂರಿನಿಂದಲೇ. ತಾಯಿ ಚಾಮುಂಡೇಶ್ವರಿ […]

ರಾಜ್ಯ ಮಟ್ಟದ ಡೊಳ್ಳು ಕುಣಿತದಲ್ಲಿಕುಸ್ಕೂರು ಸರ್ಕಾರಿ ಪ್ರೌಢ ಶಾಲೆ ಪ್ರಥಮ

ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ಗ್ರಾಮ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಡೊಳ್ಳು ಕುಣಿತ ಜನಪದ ನೃತ್ಯ ಸ್ಪರ್ಧೆಯಲ್ಲಿ, ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥನ ಪಡೆದಿದ್ದಾರೆ . ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ, ಎಸ್ ಡಿಎಂಸಿ ಕಮಿಟಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ‌. ಸುದ್ದಿ ಮತ್ತು ಜಾಹೀರಾತಿಗಾಗಿ-7411515737

ಚಿಕ್ಕಮಗಳೂರು : ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ..!

ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ಯಾಗಿದ್ದು ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ಮೂಡಿದೆ.

ಕೊವಿಡ್ ಲಸಿಕೆ ಅಡ್ಡಪರಿಣಾಮ ಸಮರ್ಪಕ ಸಂಶೋಧನೆಗೆ ಸಿಎಂ ಸೂಚನೆ..!

ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರಈ ಸಮಸ್ಯೆಯ ಮೂಲ ಪತ್ತೆಮಾಡಿ, […]

15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈಗಾಗಲೇ ಹದಿಮೂರು ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಮುರುಘಮಠದ ಅನುಭವ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ’ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-2025’ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲೆ, ಸಂಗೀತ ಮತ್ತು ಇತರೆ ಸಾಂಸ್ಕೃತಿಕ ಕಲೆಗಳನ್ನು ಕಲಿಸುವ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿ […]