ತಟಸ್ಥರು ಮೊದಲು ಬಿಎಸ್ ವೈ ವಿರುದ್ಧ ಟೀಕೆ‌ ಮಾಡುವವರ ಬಾಯಿ ಮುಚ್ಚಿಸಲಿ: ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಟಸ್ಥ ಎಂದು ಹೇಳಿಕೊಳ್ಳುವ ನಾಯಕರು ಮೊದಲಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದು . ಪಕ್ಷಕ್ಕೆ ಯಡಿಯೂರಪ್ಪರವರ ಕೊಡುಗೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವ ಕ್ಷಣದಲ್ಲಾದರೂ ಆಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಅನುಭವದ ಕೊರತೆ ಇದೆ ಎಂಬ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿ ರಾಜ್ಯಾಧ್ಯಕ್ಷನಾಗಿ ಅನುಭವ […]

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಠಿಣ ಕಾನೂನು ಜಾರಿಗೆ ಸಿದ್ದತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಸಣ್ಣ ಹಣಕಾಸು ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಂಡದ ಪ್ರಮಾಣವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಷ್ಟಪಡಿಸಿದ್ದಾರೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಾಜ್ಯಪಾಲರಿಗೆ ಈಗಾಗಲೇ ಮಸೂದೆ ಕಳುಹಿಸಲಾಗಿದೆ. ಅವರು ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ […]

ನಾಳೆ ದೆಹಲಿ ವಿಧಾನಸಭಾ ಚುನಾವಣೆಗೆ ರಾಷ್ಟ್ರ ರಾಜಧಾನಿ ಸಕಲ ಸಿದ್ಧತೆ..!

ದೆಹಲಿ: 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಕೋಟಿ 56 ಲಕ್ಷಕ್ಕೂ ಹೆಚ್ಚು ಮತದಾರರು ಕಣದಲ್ಲಿರುವ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ. ಸುಗಮ ಚುನಾವಣೆಗಾಗಿ ಚುನಾವಣಾ ಆಯೋಗ 1.8 ಲಕ್ಷಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದೆ. ಇಲ್ಲಿಯವರೆಗೆ ಸುಮಾರು 220 ಕೋಟಿಗೂ ಅಧಿಕ […]

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ. […]

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಚಿಂಕೆ ಮರಿ ಸಾವು..!

ಶಿವಮೊಗ್ಗ: ಅರಣ್ಯ ಅಧಿಕಾರಿಗಳಿಂದ ಜಿಂಕೆ ಮರಿಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಗ್ರಾಮದ ಬಳಿ ಶನಿವಾರ ನಡೆದಿದೆ. ಉಳವಿ ಗ್ರಾಮದಿಂದ ಶಿರಾಳಕೊಪ್ಪ ಹೋಗುವ ಮಾರ್ಗದಲ್ಲಿ ಬರುವ ದಟ್ಟ ಕಾಡಿನ ನಡುವೆ ಚಿಂಕೆ ಮರಿ ಒಂದು ದಿಢೀರನೇ ರಸ್ತೆಗೆ ಬಂದಿದೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಪರಿಚಿತ ಕಾರು ಒಂದು ಚಿಂಕೆ ಮರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಮರಿಯ ಕಾಲಿಗೆ ತೀವ್ರವಾದ ಪೆಟ್ಟು ಬಿದ್ದು ರಸ್ತೆಗೆ ಬಿದ್ದಿತ್ತು. ತಕ್ಷಣ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರು ಹಾಗೂ […]

ಸಿಎಂ‌ ಸಿದ್ದರಾಮಯ್ಯನವರ ಎಲ್ಲಾ ಕಾರ್ಯಕ್ರಮ ರದ್ದು ದಿಢೀರ್ ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ತಿಳಿಸಿದೆ. […]

ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಹಾವಳಿ ತಡೆಗೆ ನೂತನ ವಿಧೇಯಕ ತರಲು ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಂಕಿತ ಪಡೆಯಲಿದೆ. ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಿಶೆಯಲ್ಲಿ ಪರಮಾಧಿಕಾರ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ ಸಣ್ಣ ಹಣಕಾಸು […]

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ ಅವರು ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿಗಳನ್ನು ಹೆಚ್ಚು ಹೆಚ್ಚು ನೆಟ್ಟು, ಅವುಗಳಿಗೆ ನೀರುಣಿಸಿ, ಜಿಯೋ […]

ಮಹಾಕುಂಭ ಮೇಳೆ ಮಹತ್ವ ಆಚರಣೆ ಹಿನ್ನಲೇ ಏನು..? ಇಲ್ಲಿದೆ ಮಾಹಿತಿ..!

ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ 2025 ಆರಂಭವಾಗಿದ್ದು. ಜ. 13ರಿಂದ ಫೆಬ್ರುವರಿ 26 ರವರೆಗೆ ನಡೆಯಲಿರುವ ಈ ಮಹಾಕುಂಭಮೇಳ ಸುಮಾರು ಕೋಟಿಗೂ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.ಮಹಾ ಕುಂಭಮೇಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು ಅಪಾರವಾದ ನಂಬಿಕೆ, ಶ್ರದ್ಧೆಯು ಮಹಾ ಕುಂಭಮೇಳದಲ್ಲಿ ಅಡಗಿದೆ. ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭಮೇಳಕ್ಕಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ‌. ಕುಂಭಮೇಳ ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾ ಕುಂಭಮೇಳ ನಡೆಯುತ್ತದೆ. ಈಗ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿರುವ ಮಹಾ […]

Hello world!

Welcome to WordPress. This is your first post. Edit or delete it, then start writing!