ಸಿಎಂ‌ ಸಿದ್ದರಾಮಯ್ಯನವರ ಎಲ್ಲಾ ಕಾರ್ಯಕ್ರಮ ರದ್ದು ದಿಢೀರ್ ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಧ್ಯಮ ತಿಳಿಸಿದೆ. […]

ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ಹಣಕಾಸು ಸಂಸ್ಥೆಗಳ ಹಾವಳಿ ತಡೆಗೆ ನೂತನ ವಿಧೇಯಕ ತರಲು ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಂಕಿತ ಪಡೆಯಲಿದೆ. ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಿಶೆಯಲ್ಲಿ ಪರಮಾಧಿಕಾರ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ರಾಜ್ಯದಲ್ಲಿ ಸಣ್ಣ ಹಣಕಾಸು […]

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ ಅವರು ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿಗಳನ್ನು ಹೆಚ್ಚು ಹೆಚ್ಚು ನೆಟ್ಟು, ಅವುಗಳಿಗೆ ನೀರುಣಿಸಿ, ಜಿಯೋ […]

ಮಹಾಕುಂಭ ಮೇಳೆ ಮಹತ್ವ ಆಚರಣೆ ಹಿನ್ನಲೇ ಏನು..? ಇಲ್ಲಿದೆ ಮಾಹಿತಿ..!

ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ 2025 ಆರಂಭವಾಗಿದ್ದು. ಜ. 13ರಿಂದ ಫೆಬ್ರುವರಿ 26 ರವರೆಗೆ ನಡೆಯಲಿರುವ ಈ ಮಹಾಕುಂಭಮೇಳ ಸುಮಾರು ಕೋಟಿಗೂ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.ಮಹಾ ಕುಂಭಮೇಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು ಅಪಾರವಾದ ನಂಬಿಕೆ, ಶ್ರದ್ಧೆಯು ಮಹಾ ಕುಂಭಮೇಳದಲ್ಲಿ ಅಡಗಿದೆ. ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭಮೇಳಕ್ಕಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ‌. ಕುಂಭಮೇಳ ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾ ಕುಂಭಮೇಳ ನಡೆಯುತ್ತದೆ. ಈಗ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿರುವ ಮಹಾ […]

Hello world!

Welcome to WordPress. This is your first post. Edit or delete it, then start writing!