ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ :ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]
ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮ ರಥೋತ್ಸವ

ಶಿಕಾರಿಪುರ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ ಶನುವಾರ ಅದ್ದೂರಿಯಾಗಿ ನೆರವೇರಿತು. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು. ರಥೋತ್ಸವದ ವೇಳೆ ಗರುಡ ದರ್ಶನ..! ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ ನಂತರ ರಥವನ್ನು ಎಳೆಯಲಾಗುತ್ತದೆ. ಮಾಜಿ ಸಿಎಂ ಬಿಎಸ್ ವೈ ಭಾಗಿ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹುಚ್ಚರಾಯಸ್ವಾಮಿಯ ಪರಮಭಕ್ತರಾಗಿದ್ದು ರಥೋತ್ಸವಕ್ಕೆ ತಪ್ಪದೆ ಆಗಮಿಸುತ್ತಾರೆ. ಮಕ್ಕಳಾದ ಸಂಸದ ಬಿವೈ […]
ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದ್ದಿ ಜಾಹೀರಾತಿಗಾಗಿ- 7411515737
ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಯತ್ನಾಳ್ ಉಚ್ಚಾಟನೆ..!

ಬಿಜೆಪಿಯ ಹಿರಿಯ ನಾಯಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ದ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು […]
ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು:ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ […]
ಪೋಲಿಸರು ಸ್ವತ ವಾಹನದ ಮೇಲೆ ಪೋಲಿಸ್ ಎಂದು ಬರೆಸುವಂತಿಲ್ಲ:ಡಾ.ಜಿ ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ ಪರಮೇಶ್ವರ್ ಉತ್ತರಿಸಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು […]
ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರ ಮಾಹಿತಿ ನೀಡಲು ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ.ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದುಬೈಗೆ ಬೇರೆ ಬೇರೆ ದೇಶಗಳಿಗೆ […]
3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ

ವಿಧಾನಪರಿಷತ್ತು: ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್ ನ 3025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ ಮೈಸೂರು ಮಹಾರಾಜರು 1900ರಲ್ಲಿ ಅಧಿಸೂಚನೆ ಹೊರಡಿಸಿರುತ್ತಾರೆ. ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ […]
ಅನಧಿಕೃತ ರೆವಿನ್ಯೂ ಬಡಾವಣೆಗಳಿಗೆ ’ಬಿ’ ಖಾತಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅನಧಿಕೃತ ಬಡಾವಣೆಗಳಿಗೆ ’ಬಿ’ ಖಾತಾ ನೀಡಿ ಆಧಾಯಗಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸದ ಅವರು, ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇದಕ್ಕೆ ಅಂತ್ಯ ಹಾಡಬೇಕಿದೆ. ಹೀಗಾಗಿ ಈ ರೀತಿಯ ನಿವೇಶನಗಳಿಗೆ ’ಬಿ’ ಖಾತಾಗಳನ್ನು ನೀಡಲು ಅಭಿಯಾನ ಆರಂಭಿಸುವಂತೆ ನಿರ್ದೇಶಿಸಿದರು. ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಅನಧಿಕೃತ ಬಡಾವಣೆಗಳು ಇವೆ. […]
ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸೂಚನೆ ನೀಡಿದರು. ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. […]