ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದರು.
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ […]
ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ
ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿದ್ದರಾಮಯ್ಯ
ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ […]
ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್: ಸುರ್ಜೇವಾಲ ಸ್ಪಷ್ಟನೆ
ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ ಅವರು ನನಗೆ ಗೊತ್ತಿಲ್ಲ ಯಾರೂ ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂದು, ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಅಲ್ಲದೆ ಬಿಜೆಪಿ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದು ಹೇಳಿದ್ದಾರೆ. ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ […]
ಮಾಲಾಶ್ರೀ ಅಭಿನಯದ ‘ಮಾರಕಾಸ್ತ್ರ’ ಸಿನಿಮಾ ಈಗ ಒಟಿಟಿ ಪ್ಲೇಯರ್ನಲ್ಲಿ ಲಭ್ಯ
ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಸಾಧ್ಯವಾಗದಿದ್ದರೆ ಒಟಿಟಿಯಲ್ಲಿ ವೀಕ್ಷಿಸಲು ಪ್ರೇಕ್ಷಕರು ಬಯಸುತ್ತಾರೆ. ಆದರೆ ಎಲ್ಲ ಸಿನಿಮಾಗಳಿಗೂ ಒಟಿಟಿಯಲ್ಲಿ ಜಾಗ ಸಿಗುವುದಿಲ್ಲ. ಸಣ್ಣ ಸಿನಿಮಾಗಳು ಎಂಬ ಕಾರಣಕ್ಕೆ ದೊಡ್ಡ ಒಟಿಟಿ ಸಂಸ್ಥೆಗಳು ಕೆಲವು ಚಿತ್ರಗಳನ್ನು ಖರೀದಿಸುವುದೇ ಇಲ್ಲ. ಮುಖ್ಯವಾಗಿ ಕನ್ನಡ ಸಿನಿಮಾಗಳಿಗೆ ಒಟಿಟಿಯಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಕೊರಗು ಮೊದಲಿನಿಂದಲೂ ಇದೆ. ಅದಕ್ಕಾಗಿ ಸಿನಿಮಾ ತಂಡಗಳು ಬೇರೆ ಬೇರೆ ಮಾರ್ಗಗಳನ್ನು ಕಂಡುಕೊಳ್ಳುತ್ತಿವೆ. ಕನ್ನಡದ ‘ಮಾರಕಾಸ್ತ್ರ’ ಸಿನಿಮಾ ಕೂಡ ಈಗ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಹಾಗಂತ ಇದು ನೆಟ್ಫ್ಲಿಕ್ಸ್, ಅಮೇಜಾನ್ […]