ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ನಿವಾಸ ಶೋಧ..!

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಮನೆ ಸೇರಿದಂತೆ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ಮಾಡಿದ್ದಾರೆ. ಗದಗ ನಗರದ ಹುಡ್ಕೋ ಕಾಲೊನಿಯ ಗಂಗಾಧರ ಶಿರೋರ ಅವರ ಮನೆ ಹಾಗೂ ನಗರದ ಸಂಬಂಧಿಕರ ಮತ್ತು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಅವರ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಪೋಲಿಸರು […]

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು‌ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಶಿಷ್ಟ ರಕ್ಷಣೆ-ದುಷ್ಟರ […]

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ :ಜನರು ಆತಂಕ ಪಡುವ ಅಗತ್ಯವಿಲ್ಲ :ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ […]

ರಾಜಕಾಲುವೆ ಒತ್ತುವರಿ ತೆರವು ಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ

ರಾಜಧಾನಿ ಬೆಂಗಳೂರಿನ ಮಳೆ ಹಾನಿ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ನಗರ ಪ್ರದಕ್ಷಿಣೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ವೇಳೆ ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದ್ದಾರೆ. ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಬಳಿಕ ಊಃಖ ಲೇಔಟ್, […]

ಬೆಂಗಳೂರು ಜಲಾವೃತ:ರಾಜ್ಯ ಸರ್ಕಾರ ಮೋಜು: ಬಿ ವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಹೊಸಪೇಟೆಯಲ್ಲಿ ಮೋಜು ಮಾಡುತ್ತಿದೆ. ಎರಡು ವರ್ಷ ಪೂರ್ಣಗೊಳಿಸಿದ್ದನ್ನು ತಿಳಿಸಿ ಮೋಜು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ನಿಯೋಗವು ಇಂದು ಸಿಲ್ಕ್ ಬೋರ್ಡಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿತ್ತು. ಮಳೆ ಹಾನಿಗೆ ಕಾರಣಗಳು, ಆಗಿರುವ ಹಾನಿ ಕುರಿತು ನಿಯೋಗವು ಪರಿಶೀಲಿಸಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.ಬೆಂಗಳೂರಿನ […]

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ- ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಂಡು, ಅರಣ್ಯ ಭೂಮಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಶಿರಾ ತಾಲೂಕಿನ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಬೆಂಗಳೂರು -ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ. ಹೀಗಾಗಿ ಅರಣ್ಯ […]

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ – ಗೃಹ ಸಚಿವ ಡಾ. ಜಿ. ಪರಮೇಶ್ವರ್

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹಸಚಿವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದ್ದಾರೆ. ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ […]

ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಧ್ಯಾಹ್ನದ ಬಳಿಕ ವೆಬ್‌ಸೈಟ್‌ನಲ್ಲಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30 ರ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. https://www.sc.gov.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಎಸ್‌ಎಮ್‌ಎಸ್‌ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದ್ದು, ಏಂಖ 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿದರೆ, ಫಲಿತಾಂಶವನ್ನು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಈ ಬಾರಿ […]

ಜಾತಿಗಣತಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ. ನಿರ್ಧಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಮೇಲೆ ಜಾತಿಗಣತಿ ನಡೆಸುವಂತೆ ಒತ್ತಡ ಹೇರಿದ್ದ ರಾಹುಲ್ ಗಾಂಧಿಯವರನ್ನು ಅವರು ಅಭಿನಂದಿಸಿದ್ದಾರೆ. ಜನಗಣತಿ ಜತೆಗೆ ಜಾತಿಗಣತಿ […]