ಭದ್ರಾವತಿ ಕಾರ್ಖಾನೆ ಮರುಜೀವ :ಹೆಚ್ ಡಿ ಕುಮಾರಸ್ವಾಮಿ..!

ಹಾಸನ: ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ ಎಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಇತಿಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ ₹20,000 […]

ಕೇಂದ್ರ ಬಜೆಟ್‌ ಮಂಡನೆ ಯಾವ ಕ್ಷೇತ್ರಕ್ಕೆ ಎಷ್ಟು? ಯಾರಿಗೆ ಲಾಭನಷ್ಟ ..?

ನವದೆಹಲಿ :ಲೋಕಸಭೆಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು. ಈ ಬಾರಿಯ ಬಜೆಟ್ ಕೃಷಿ ವಲಯ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಹೂಡಿಕೆ ವಲಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವಿಶೇಷತೆಗಳನ್ನು ಹೊಂದಿದೆ. ಬಜೆಟ್ ಮಂಡನೆಯ ಆರಂಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್ ಬೆಳವಣಿಗೆಗೆ ಹೊಸ ಶಕ್ತಿ ನೀಡುವ ಒಳಗೊಳ್ಳುವ ಅಭಿವೃದ್ಧಿ ಖಾತ್ರಿಪಡಿಸುವ, ಖಾಸಗಿ ಹೂಡಿಕಯನ್ನು ಉತ್ತೇಜಿಸುವ ಮತ್ತು ಮಧ್ಯಮವರ್ಗದವರ […]

ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವಿ ಶರಣಾಗತಿ :ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆ..!

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ […]

ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಣೆ : ಈಶ್ವರ ಖಂಡ್ರೆ

ಬೆಂಗಳೂರು: ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ಅತ್ಯಾವಶ್ಯಕವಾಗಿರುವ ಹೆಸರಘಟ್ಟ ಕೆರೆ ಮತ್ತು ಸುತ್ತಲಿನ ಪ್ರದೇಶವನ್ನು ‘ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 133 ಪ್ರಭೇದದ ಪಕ್ಷಿಗಳು, 40 ಸ್ಥಳೀಯ ಹಾಗೂ ನೈಸರ್ಗಿಕ ಸಸ್ಯಗಳು ಮತ್ತು ಚಿರತೆ, ತೋಳ, ಕಾಡುಪಾಪ ಮೊದಲಾದ ವನ್ಯಜೀವಿಗಳಿಗೆ ಆಶ್ರಯತಾಣವಾದ ಈ ಕಾನನ ಮತ್ತು ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ ತಮ್ಮ […]

ಕೇಂದ್ರ ಬಜೆಟ್ ಅಧಿವೇಶನ ನಾಳೆಯಿಂದ ಆರಂಭ:ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸರ್ವಪಕ್ಷಗಳ ಸಭೆ ನಡೆಯಿತು. ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರೊಂದಿಗೆ ಮಾತನಾಡಿ, ಸುಗಮ ಕಲಾಪಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಕೋರಲಾಗಿದೆ. ನಾಳೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ತದ ನಂತರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು, ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಶನಿವಾರ ಕೇಂದ್ರ ಬಜೆಟ್ ಮಂಡನೆಯಾಗಲಿದೆ. 16 ಮಸೂದೆಗಳು ಸದನದಲ್ಲಿ […]

ಪ್ರಯಾಗ್ ರಾಜ್ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ 4 ಮಂದಿ ಸಾವು..!

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಭಕ್ತರ ಜನದಟ್ಟಣೆಯಿಂದ ಕಾಲ್ತುಳಿತ ಉಂಟಾಗಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ. ಮಹಾಕುಂಭ ಮೇಳದ ಕಾಲ್ತುಳಿತಕ್ಕೆ ಸಿಲುಕಿದ್ದ ಇವರನ್ನು ಪ್ರಯಾಗರಾಜ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇದೇ 26 ರಂದು ಖಾಸಗಿ ಸಾರಿಗೆ ಸಂಸ್ಥೆಯ ಮೂಲಕ 13 ಜನರ ತಂಡ ಕುಂಭಮೇಳಕ್ಕೆ ತೆರಳಿತ್ತು ಎಂದು ಅವರು ವಿವರ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ […]

ಸರ್ವೋದಯ ಮಂಡಲದಿಂದ ಈಸೂರಿನಲ್ಲಿ 2ದಿನಗಳ ರಾಷ್ಟ್ರೀಯ ಸಮಾವೇಶ ಹುತಾತ್ಮರ ದಿನ ಆಚರಣೆ..!

ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಈಸೂರು ಹುತಾತ್ಮರ ಸ್ಮಾರಕದಲ್ಲಿ ರಾಷ್ಟ್ರೀಯ ಸಮಾವೇಶ ಮತ್ತು ಹುತಾತ್ಮರ ದಿನ ಆಚರಿಸುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಈಸೂರು ಗ್ರಾಮದ ವೀರ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು.1942 ರ ಸೆಪ್ಟೆಂಬರ್ 25 ರಂದು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಮೇಲೆ ತ್ರಿವರ್ಣಧ್ವಜ ಹಾರಿಸಿ ತಮ್ಮ ಗ್ರಾಮ ಸ್ವತಂತ್ರ್ಯ ಗಳಿಸಿತು. ಎಂಬುದನ್ನು ತೋರಿಸಿಕೊಟ್ಟರು. ಈ ಮೂಲಕ ಈಸೂರಿನ ಕೀರ್ತಿ ದೇಶಾದ್ಯಂತ ಪಸರಿಸಿತ್ತು. […]

ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ಭುವನೇಶ್ವರಿಯ ಪುತ್ಥಳಿ ವಿಧಾನಸೌಧದಲ್ಲಿ ಸ್ಥಾಪಿಸಿದ್ದು ಸಮಸ್ತ ಕನ್ನಡಿಗರ ಹೆಮ್ಮೆಯ ದಿನ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು […]

FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್‌ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]