8ನೇ ವೇತನ ಆಯೋಗ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು; ಸರ್ಕಾರಿ ನೌಕರರಿಗೆ ಸಖತ್ ಖುಷಿ ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರ ವೇತನ ಆಯೋಗ ವ್ಯವಸ್ಥೆಗೆ ತಿಲಾಂಜಲಿ ಹಾಡಲಿದೆ. ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ ರೂಪಿಸಲಿದೆ ಎಂದು ದಟ್ಟವಾಗಿ ಹಬ್ಬಿದ್ದ ಸುದ್ದಿಗೆ ತೆರೆ ಬಿದ್ದಿದೆ. 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಇಂದು ಗುರುವಾರ ಅಸ್ತು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಡಾ. ಎ ವೈಷ್ಣವ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾಡುತ್ತಾ ಬಂದಿದ್ದ ಒತ್ತಾಯಗಳಿಗೆ ಸರ್ಕಾರ ಬಗ್ಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ 7ನೇ ವೇತನ ಆಯೋಗದ ಶಿಫಾರಸುಗಳು […]
ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. 9 ಎಕರೆ ವಿಸ್ತೀರ್ಣದ ಮತ್ತು ವೇದ ಶಿಕ್ಷಣ ಕೇಂದ್ರ, ಸಭಾಂಗಣವನ್ನು ಒಳಗೊಂಡಿರುವ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಖಾರ್ಘರ್‌ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ್ ದೇವಾಲಯವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ದೇವಾಲಯವು ಯುವ ಪೀಳಿಗೆಯನ್ನು ಆಕರ್ಷಿಸಲು, ಈ ಸಂಕೀರ್ಣವು ಮಹಾಭಾರತ ಮತ್ತು ರಾಮಾಯಣ ಮಹಾಕಾವ್ಯಗಳನ್ನು ಆಧರಿಸಿದ ವಸ್ತುಸಂಗ್ರಹಾಲಯವನ್ನು ಒಳಗೊಂಡಿದೆ. ಇಲ್ಲಿ […]