ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಭುವನೇಶ್ವರಿಯ ಪುತ್ಥಳಿ ವಿಧಾನಸೌಧದಲ್ಲಿ ಸ್ಥಾಪಿಸಿದ್ದು ಸಮಸ್ತ ಕನ್ನಡಿಗರ ಹೆಮ್ಮೆಯ ದಿನ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು […]
FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್‌ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]
8ನೇ ವೇತನ ಆಯೋಗ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು; ಸರ್ಕಾರಿ ನೌಕರರಿಗೆ ಸಖತ್ ಖುಷಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ವೇತನ ಆಯೋಗ ವ್ಯವಸ್ಥೆಗೆ ತಿಲಾಂಜಲಿ ಹಾಡಲಿದೆ. ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ ರೂಪಿಸಲಿದೆ ಎಂದು ದಟ್ಟವಾಗಿ ಹಬ್ಬಿದ್ದ ಸುದ್ದಿಗೆ ತೆರೆ ಬಿದ್ದಿದೆ. 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಇಂದು ಗುರುವಾರ ಅಸ್ತು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಡಾ. ಎ ವೈಷ್ಣವ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾಡುತ್ತಾ ಬಂದಿದ್ದ ಒತ್ತಾಯಗಳಿಗೆ ಸರ್ಕಾರ ಬಗ್ಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ 7ನೇ ವೇತನ ಆಯೋಗದ ಶಿಫಾರಸುಗಳು […]
ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. 9 ಎಕರೆ ವಿಸ್ತೀರ್ಣದ ಮತ್ತು ವೇದ ಶಿಕ್ಷಣ ಕೇಂದ್ರ, ಸಭಾಂಗಣವನ್ನು ಒಳಗೊಂಡಿರುವ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಖಾರ್ಘರ್‌ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ್ ದೇವಾಲಯವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ದೇವಾಲಯವು ಯುವ ಪೀಳಿಗೆಯನ್ನು ಆಕರ್ಷಿಸಲು, ಈ ಸಂಕೀರ್ಣವು ಮಹಾಭಾರತ ಮತ್ತು ರಾಮಾಯಣ ಮಹಾಕಾವ್ಯಗಳನ್ನು ಆಧರಿಸಿದ ವಸ್ತುಸಂಗ್ರಹಾಲಯವನ್ನು ಒಳಗೊಂಡಿದೆ. ಇಲ್ಲಿ […]