ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಏಕೈಕ ಗುರಿ: ಬಿ.ಎಸ್. ಯಡಿಯೂರಪ್ಪ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ 84ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ರಾಜಕೀಯ ಕರ್ಮಭೂಮಿ ಶಿಕಾರಿಪುರದಲ್ಲಿ ಅಭಿಮಾನದ ಹೊನಲು ಮೂಡಿತು ಸಾವಿರಾರು ಅಭಿಮಾನಿಗಳು, ಮಠಾಧೀಶರು ಹಾಗೂ ಗಣ್ಯರ ಸಮ್ಮುಖದಲ್ಲಿ ಹುಟ್ಟುಹಬ್ಬದ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ಇಲ್ಲಿನ ಏಕಲವ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗೌರವ ಸಮರ್ಪಣಾ’ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ರಾಜಕೀಯ ಜೀವನದ ಏಕೈಕ ಗುರಿ ಎಂದರೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು. ಇದಕ್ಕಾಗಿ ನಾನು ವಿಶ್ರಾಂತಿ ಪಡೆಯದೆ ರಾಜ್ಯದ ಮೂಲೆ ಮೂಲೆಗೂ […]
ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಸಂಪುಟದ ‘ಬಂಪರ್’ ಕೊಡುಗೆ: ಒಂದು ತಿಂಗಳೊಳಗೆ ಬೃಹತ್ ನೇಮಕಾತಿ ಚಾಲನೆ

ಬೆಂಗಳೂರು: ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಮೀಸಲಾತಿ ವಿವಾದದಿಂದಾಗಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ 56,436 ನೇರ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ 30 ದಿನಗಳೊಳಗೆ ಆರಂಭಿಸಲು ರಾಜ್ಯ ಸಚಿವ ಸಂಪುಟ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇತ್ತೀಚೆಗೆ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆ ಹಾಗೂ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ, […]
ಬಿ.ಎಸ್.ವೈ ಜನ್ಮದಿನೋತ್ಸವ: ಶಿಕಾರಿಪುರದಲ್ಲಿ ಅರ್ಜುನ್ ಜನ್ಯ ತಂಡದಿಂದ ಸಂಗೀತ ಸುಧೆ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಜನ್ಮದಿನದ ಅಂಗವಾಗಿ ಫೆಬ್ರವರಿ 27 ರಂದು ಪಟ್ಟಣದ ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಈ ಸಂಭ್ರಮಕ್ಕೆ ಮೆರುಗು ನೀಡಲು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ‘ಸಂಗೀತ ಸುಧೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ಅಭಿಮಾನಿಗಳ ಬಳಗದ ಸಂಚಾಲಕ ಕೆ.ಎಸ್. ಗುರುಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ‘ಸಮಾಜ ಗೌರವ ಸಮರ್ಪಣೆ’ ಕಾರ್ಯಕ್ರಮ […]
ಟಿಪ್ಪು-ಔರಂಗಜೇಬ್ ಮನಸ್ಥಿತಿಯವರಿಗೆ ತಕ್ಕ ಪಾಠ ಕಲಿಸಿ’: ಬಿ.ವೈ. ವಿಜಯೇಂದ್ರ ಆಕ್ರೋಶ

ಶಿಕಾರಿಪುರ:ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, “ದೇಶದೊಳಗೆ ದೇಶದ್ರೋಹಿ ಕೃತ್ಯ ಎಸಗುವವರಿಗೆ ಹಾಗೂ ಟಿಪ್ಪು-ಔರಂಗಜೇಬ್ ಮನಸ್ಥಿತಿ ಇರುವವರಿಗೆ ಸರ್ಕಾರ ತಕ್ಕ ಪಾಠ ಕಲಿಸಬೇಕು” ಎಂದು ಆಗ್ರಹಿಸಿದ್ದಾರೆ. ಶುಕ್ರವಾರ ಶಿಕಾರಿಪುರ ಪಟ್ಟಣದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಘಟನೆಯು ವ್ಯವಸ್ಥಿತ ಸಂಚು ಎಂದು ಆರೋಪಿಸಿದರು. “ಶಾಂತಿಯುತವಾಗಿ ನಡೆಯುತ್ತಿದ್ದ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ಇಂತಹ ಕಿಡಿಗೇಡಿಗಳನ್ನು ಈಗಾಗಲೇ […]
ವಿಧಾನಸೌಧಕ್ಕೆ ಮಾಧ್ಯಮ ನಿರ್ಬಂಧ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ವಿಧಾನಸೌಧದ ಒಳಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ‘ಪ್ರಜಾಪ್ರಭುತ್ವ ವಿರೋಧಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮವು ಪಾರದರ್ಶಕ ಆಡಳಿತಕ್ಕೆ ಮಾರಕವಾಗಿದೆ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ’ಇದು ಅಸಂವಿಧಾನಿಕ ನಡೆ’”ಮಾಧ್ಯಮಗಳನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದು ಗೌರವಿಸಲಾಗುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರವು ಮಾಧ್ಯಮಗಳ ಹಕ್ಕುಗಳನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ […]
ದಶಕದ ದಾಖಲೆ ಬರೆದ ಸಿದ್ದರಾಮಯ್ಯ: ಮಾರ್ಚ್ 6ಕ್ಕೆ ಬಜೆಟ್ ಮಂಡನೆ

ಬೆಂಗಳೂರು: ರಾಜಕೀಯ ಮೇಲಾಟ ಹಾಗೂ ಅಧಿಕಾರ ಹಂಚಿಕೆಯ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಭವಿಷ್ಯ ನಿರ್ಧರಿಸುವ 2026-27ನೇ ಸಾಲಿನ ಆಯವ್ಯಯ ಮಂಡನೆಗೆ ಮುಹೂರ್ತ ನಿಗದಿಪಡಿಸಿದ್ದಾರೆ. ವಿಧಾನಸಭೆ ಸಚಿವಾಲಯದ ಪ್ರಕಟಣೆಯಂತೆ, ಮಾರ್ಚ್ 6ರಂದು ಬೆಳಿಗ್ಗೆ 10:15ಕ್ಕೆ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ಮತ್ತೊಂದು ಐತಿಹಾಸಿಕ ಬಜೆಟ್ ಮಂಡಿಸಲಿದ್ದಾರೆ. ಅರಸು ದಾಖಲೆ ಪತನಈ ಬಜೆಟ್ ಮಂಡನೆಯು ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಮಹತ್ವದ ಮೈಲಿಗಲ್ಲಾಗಲಿದೆ. ಕರ್ನಾಟಕದ ದೈತ್ಯ ನಾಯಕ ಡಿ. ದೇವರಾಜ ಅರಸು ಅವರು 2,789 […]
ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ: ಡಿ.ಕೆ.ಶಿವಕುಮಾರ್

ದಾವಣಗೆರೆ: ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ಬಹಳ ಸಂತೋಷ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು, ರಾಜು ಅವರು ಡಿಕೆ ಕಮ್ ಬ್ಯಾಕ್ ಎಂದು ಕರೆದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನೂರು ಜನ ಕಿರುಚಾಡಬಹುದು. ಈ ನೂರು ಜನರಿಗೆ ಜಗ್ಗುವ ಮಗ ಡಿ.ಕೆ. ಶಿವಕುಮಾರ್ ಅಲ್ಲ. ಇಲ್ಲಿರುವ ಸಾವಿರಾರು ಜನ, ನನ್ನ ತತ್ವ, ನಿಷ್ಠೆ, ಸಿದ್ಧಾಂತ ತಿಳಿದಿದ್ದಾರೆ. ಇತಿಹಾಸ ಮರೆತವ, ಇತಿಹಾಸ ಸೃಷ್ಟಿಸಲು […]
ಬಿಜೆಪಿ ಮುಖಂಡನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ..!

ಶಿಕಾರಿಪುರ: ವಿರೋಧಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಬಿ.ಡಿ ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಚಿವ ಸಂಪುಟ ಸ್ಥಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರ ಎಲ್ಲಾ ನಿಗಮ ಮಂಡಳಿಯ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಆದೇಶವನ್ನು ನೀಡಿತ್ತು. ಬಿ.ಡಿ.ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದ್ದು ಬಿ.ಡಿ.ಭೂಕಾಂತ್ ಅವರು ಬಿಜೆಪಿ ಮುಖಂಡರಾಗಿದ್ದು ಆಗಿದ್ದು ಅವರ ಪತ್ನಿ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದು ಇನ್ನೂ […]
ದಾವಣಗೆರೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು.
ಉದ್ಯಮಿ ಬಿಜೆಪಿ ಮುಖಂಡ ಎನ್.ವಿ ಈರೇಶ್ ಕಾಂಗ್ರೇಸ್ ಸೇರ್ಪಡೆಗೆ ವೇದಿಕೆ ಸಿದ್ದತೆ.?

ಶಿಕಾರಿಪುರ ತಾಲ್ಲೂಕಿನ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು […]