ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು:ಸಿಎಂ‌ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು […]

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ :ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]

ದಲಿತ ಸಮುದಾಯದ ಒಳ ಮೀಸಲಾತಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಸಿಎಂಗೆ ವರದಿ ಸಲ್ಲಿಕೆ..!

ಬೆಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದ್ದಿ ಜಾಹೀರಾತಿಗಾಗಿ- 7411515737

ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಯತ್ನಾಳ್ ಉಚ್ಚಾಟನೆ..!

ಬಿಜೆಪಿಯ ಹಿರಿಯ ನಾಯಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ದ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್‌ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್‌ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು […]

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು:ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ […]

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಹೆಚ್ಡಿಕೆ ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಈ ಪ್ರದೇಶ ಬೆಂಗಳೂರಿನ ಭಾಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ […]

ದೆಹಲಿ ವಿಧಾನಸಭೆ ಚುನಾವಣೆ : ಬಿಜೆಪಿಗೆ ಭರ್ಜರಿ ಧಮಾಕ..!

ದೆಹಲಿ: ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಯಂತೆ ಎಲ್ಲಾ 70 ವಿಧಾನಸಭಾ ಸ್ಥಾನಗಳ ಅಂಕಿಅಂಶಗಳು ಲಭ್ಯವಿದ್ದು, 19 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ದೆಹಲಿ ಎನ್‌ಸಿಟಿಯಲ್ಲಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ನವದೆಹಲಿ ಕ್ಷೇತ್ರದಲ್ಲಿ ತಮ್ಮ ಹತ್ತಿರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್‌ ಗಿಂತ ಹಿಂದುಳಿದಿದ್ದಾರೆ. ಇತರೆ ಪ್ರಮುಖ ಆಮ್ […]

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ‌ ಮತ್ತು ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್..!

ಬೆಂಗಳೂರು: ಮುಡಾ ಹಗರಣ ಕೇಸ್ ಸಿಬಿಐ ವಹಿಸಬೇಕು ಎಂದು ಸ್ನೇಹಮಹಿ‌ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ. ರಾಜ್ಯ ರಾಜಕಾರಣದಲ್ಲಿ ಬಾರಿ ಚರ್ಚೆಗೆ ಗ್ರಸವಾಗಿದ್ದ ಮುಡಾ ಹಗರಣ ಪ್ರಕರಣ ತನಿಖೆ ಲೋಕಯುಕ್ತ ನಡೆಸುತ್ತಿದ್ದು ಈಗಾಗಲೇ ತನ್ನ ವರದಿಯನ್ನು ಸಲ್ಲಿಸಿದೆ. ಈ ನಡುವೆ ಮುಡಾ ಹಗರಣ ಹೋರಾಟಗಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೋಳಿಸಿದ್ದ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಇನ್ನೊಂದೆಡೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಎದುರಾಗಿದ […]

ಶಿಕಾರಿಪುರಕ್ಕೆ ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ‌ ಸಾರ್ವಜನಿಕ ಅಹವಾಲು ಸ್ವೀಕಾರ..!

ಶಿಕಾರಿಪುರ ತಾಲೂಕಿಗೆ ನಾಳೆ (ಬುಧವಾರ) ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವರಾದ ಮುಧು ಬಂಗಾರಪ್ಪ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನೆಲವಾಗಿಲು ಗ್ರಾಮದಲ್ಲಿ ಕೃಷಿ ಅಧ್ಯಯನ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಲಿದ್ದು ನಂತರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಶಿವಪುರ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಬಳಿಕ ಜಾವಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಿದ್ದು ಸ್ವಕ್ಷೇತ್ರ ಸೊರಬದಲ್ಲಿ ವಿವಿಧ ಕಾರ್ಯಕ್ರಮದಲ್ಲಿ […]

ಭದ್ರಾವತಿ ಕಾರ್ಖಾನೆ ಮರುಜೀವ :ಹೆಚ್ ಡಿ ಕುಮಾರಸ್ವಾಮಿ..!

ಹಾಸನ: ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ ಎಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಇತಿಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ ₹20,000 […]