ಪಕ್ಷದಲ್ಲಿ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾವೂ ಆಗಿದೆ: ಬಿವೈ ವಿಜಯೇಂದ್ರ

ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷಕ್ಕೆ ಏನೆಲ್ಲಾ ಡ್ಯಾಮೇಜ್ ಆಗಬೇಕು ಎಲ್ಲಾ ಆಗಿದೆ ಇನ್ನೊಂದು ವಾರದಲ್ಲಿ ರಾಜ್ಯಾಧ್ಯಕ್ಷರು ಯಾರು ಆಗಲಿದ್ದಾರೆ ಎಲ್ಲಾ ತಿಳಿಯಲಿದೆ. ಬಿಜೆಪಿ ಯತ್ನಲ್ ಬಣದಿಂದ ದೆಹಲಿ ಪ್ರವಾಸ ಕೈಗೊಂಡಿದ್ದು ಇಂದು ಬಿಜೆಪಿ ಹೈ ಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವರ್ಷದಿಂದ ನಾನು ಯಾರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಪಕ್ಷಕ್ಕೆ ನಿಷ್ಠನಾಗಿ ದುಡಿಯುತ್ತಿದ್ದೇನೆ.ಇನ್ನೋಂದು ವಾರ […]
ಶಿವಮೊಗ್ಗಕ್ಕೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ

ಶಿವಮೊಗ್ಗ: ಇಂದು ಸಂಜೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಸಂಜೆ 5 ಗಂಟೆಗೆ ವಿಮಾನ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 6 ಗಂಟೆಗೆ ಆಗಮಿಸಲಿದ್ದು ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಗುರುವಾರ ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ದಿ.31 ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಪ್ರಯಾಣ ಬೆಳಸಲಿದ್ದಾರೆ. ಸುದ್ದಿ ಮತ್ತು ಜಾಹೀರಾತಿಗಾಗಿ-7411515737
ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಆರ್‌ಎಲ್‌ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಶರಾವತಿ ಸಂತ್ರಸ್ತರು ಸೇರಿದಂತೆ ಚಕ್ರಾ, ವರಾಹಿ ಸಂತ್ರಸ್ತರ ಪರವಾಗಿಯೂ […]
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು […]
ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದರು.
ಶಿಕಾರಿಪುರ ಪಿಎಲ್ ಡಿ ಬ್ಯಾಂಕ್ ಕಾಂಗ್ರೇಸ್ ತೆಕ್ಕೆಗೆ..!

ಶಿಕಾರಿಪುರ ತಾಲೂಕು ಪ್ರಾಥಮಿಕ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರ ಉಪಾಧ್ಯಕ್ಷರಾದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಲೋಹಿತ್ ಕಪ್ಪನಹಳ್ಳಿ ಉಪಾಧ್ಯಕ್ಷರಾಗಿ ಶಾಂತಮ್ಮ ಈಶ್ವರಪ್ಪ ಆಯ್ಕೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ನಾಗರಾಜ್ ಗೌಡ ಮಾತನಾಡಿ ಕಳೆದ 25 ವರ್ಷಗಳ ನಂತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರ ಪರಿಶ್ರಮದಿಂದ ನಮ್ಮ ಪಕ್ಷ ಬೆಂಬಲಿತರು ಅಧಿಕಾರ ಹಿಡಿದಿದ್ದು ಗ್ರಾಮೀಣ ರೈತರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಗರದ […]
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!

ಶಿವಮೊಗ್ಗ: ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿಗಿದ್ದು ಅನೇಕ ಕಡೆಗಳಲ್ಲಿ ಕಾಡು ಆನೆಗಳ ದಾಳಿಯಿಂದ ರೈತರ ಬೆಳೆಗಳು ನಾಶವಾಗಿದೆ ಪ್ರಾಣಿಹಾನಿಯಂತ ಘಟನೆಗಳು ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು. ಶಿವಮೊಗ್ಗ ನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ಬಿಜೆಪಿ ರೈತಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಿ ಕಾಡುಪ್ರಾಣಿಗಳಿಂದ ದಾಳಿಗೆ ಒಳಾದ ಕುಟುಂಬಕ್ಕೆ ಪರಿಹಾರ ಹಾಗೂ ಬೆಳೆಹಾನಿಯಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು. ಈ […]
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ […]
ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ

ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]
FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್‌ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]