ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ […]

ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್: ಸುರ್ಜೇವಾಲ ಸ್ಪಷ್ಟನೆ

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ ಅವರು ನನಗೆ ಗೊತ್ತಿಲ್ಲ ಯಾರೂ ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂದು, ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಅಲ್ಲದೆ ಬಿಜೆಪಿ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದು ಹೇಳಿದ್ದಾರೆ. ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ […]