ಉದ್ಯಮಿ ಬಿಜೆಪಿ ಮುಖಂಡ ಎನ್‌.ವಿ ಈರೇಶ್ ಕಾಂಗ್ರೇಸ್ ಸೇರ್ಪಡೆಗೆ ವೇದಿಕೆ ಸಿದ್ದತೆ.?

ಶಿಕಾರಿಪುರ ತಾಲ್ಲೂಕಿನ‌ ಉದ್ಯಮಿ ಅಖಿಲ ಕರ್ನಾಟಕ ವೀರಶೈವ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ ಎನ್.ವಿ ಈರೇಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನುವ ಪೋಟೋ ಸಖತ್ ವೈರಲ್ ಆಗಿತ್ತು. ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿಲ್ಲ. ಈ ಕುರಿತು ಎನ್ ವಿ ಈರೇಶ್ ಅವರು ಶಿಕಾರಿ ನ್ಯೂಸ್‌ ನೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಾನು ಕಾಂಗ್ರೆಸ್ ಪಕ್ಷದ ಮೂಲಕ ಮುಂದಿನ ರಾಜಕೀಯ ಭವಿಷ್ಯವನ್ನು […]

ತೀರ್ಥಹಳ್ಳಿ: ಕಾಡುಕೋಣ ದಾಳಿ ಭತ್ತದ ಸಸಿಗಳು ನಾಶ..!

ಶಿವಮೊಗ್ಗ: ಮಲೆನಾಡಿನಲ್ಲಿ ಮುಂದುವರಿದ ಕಾಡು ಪ್ರಾಣಿಗಳ ಹಾವಳಿಯಿಂದ ಸಾರ್ವಜನಿಕರು ಬೆಸತ್ತು ಹೊಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಮ್ಮರಡಿ ಬಳಿ ಕೆಸಲೂರ ಹಡ್ಸೆ ಗ್ರಾಮದ ಕೃಷ್ಣಪ್ಪ ಹೆಚ್ ಸಿ ಮತ್ತು ಸುಂದೇಶ್ ಹೆಚ್ ಡಿ ಎಂಬುವರರು ಗದ್ದೆಯಲ್ಲಿ ಭತ್ತದ ಸಸಿಗಳನ್ನು ಕಾಡುಕೋಣಗಳು ನಾಶ ಪಡಿಸಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಮಲೆನಾಡಿನ ಅನೇಕ ಭಾಗಗಳಲ್ಲಿ ಈಗಾಗಲೇ ಜನಾಕ್ರೋಶ ಹೆಚ್ಚಿಗೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಹೋರಾಟ ನಡೆಸುತ್ತಿದೆ ಈ ಕುರಿತು ಅರಣ್ಯ ಅಧಕಾರಿಗಳು ಗಮನ ನೀಡಬೇಕಾಗಿದೆ. News by: Raghu Shikari-7411515737

ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 25/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಮಲ್ಲೇಶ್ ಬೀರಪ್ಪ ಪೂಜಾರ್ ಅವರು ಘೋಷಿಸಿದ್ದಾರೆ. News by: Raghu Shikari-7411515737

ಪತ್ರಕರ್ತರು ಸಂವಿಧಾನಕ್ಕೆ ನಿಷ್ಠರಾಗಿರಬೇಕು: ಎನ್ ರವಿಕುಮಾರ್

ಶಿಕಾರಿಪುರ: ಪತ್ರಕರ್ತರು ಸಂವಿಧಾನಕ್ಕೆ ಪೂರಕವಾಗಿ ನಡೆದುಕೊಳ್ಳಬೇಕಾಗಿದೆ ಯಾವುದೇ ಧರ್ಮಕ್ಕೆ ,ಜಾತಿಗೆ ಸೀಮಿತವಾಗಿರದೇ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಪೂರಕವಾದ ಸುದ್ದಿಗಳು ಇಂದು ನಮ್ಮ ದೃಶ್ಯಮಾಧ್ಯಮಗಳಲ್ಲಿ ಕಳೆದುಹೊಗಿದೆ ಸಮಾಜಕ್ಕೆ ನಾವು ಪಶ್ನಾತೀತರಲ್ಲ ಸಮಾಜಿಕ ನ್ಯಾಯದ ಪರವಾಗಿ ಇರುವ ಪತ್ರಕರ್ತ ಮಾತ್ರ ನಿಜವಾದ ಪತ್ರಕರ್ತ ವಾಟ್ಸಪ್ ಯುನಿವರ್ಸಿಟಿ ಯನ್ನು ನಂಬಿ ಅದನ್ನ ನಿಜ […]

ಸಿಗಂದೂರು ಸೇತುವೆ ಲೋಕಾರ್ಪಣೆ:ಚೌಡೇಶ್ವರಿ ದೇವಿ ಹೆಸರು ನಾಮಕರಣ..!

ಶಿವಮೊಗ್ಗ: ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 6 ದಶಕಗಳ ಕನಸಾಗಿದ್ದ ಶಿವಮೊಗ್ಗದ ಸಿಗಂದೂರು ಭಾಗದ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಅಂಬಲಗೋಡು- ಕಳಸವಳ್ಳಿ- ಸಿಗಂಧೂರು ಸೇತುವೆಯನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಸೇತುವೆಯಾಗಿದ್ದು, ಇದರ ಹೆಸರನ್ನು ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ ಎಂದು ಪ್ರಕಟಿಸಿದರು. ನಂತರ […]

ಶಿಕಾರಿಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 3/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. News By: Raghu Shikari-7411515737

ವೈದ್ಯಕೀಯ ಮತ್ತು ಅರೆ ವೈದ್ಯಕೀಯ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಎನ್‌ಪಿಪಿಸಿಡಿ ವಿಭಾಗದಲ್ಲಿ ಇಎನ್‌ಟಿ ಸರ್ಜನ್‌ನ 1 ಹುದ್ದೆ ಖಾಲಿ ಇದ್ದು, ಎಂಎಸ್ ಇಎನ್‌ಟಿ/ಡಿಪ್ಲೊಮಾ ಎನ್ ಇಎನ್‌ಟಿ ವಿದ್ಯಾರ್ಹತೆ ಹೊಂದಿರಬೇಕು. ಎಂಹೆಚ್ ಐಸಿಯು-ಹೆಚ್‌ಡಿಯು ವಿಭಾಗದಲ್ಲಿ ಅರವಳಿಕೆ ತಜ್ಞರ 1 ಹುದ್ದೆ ಖಾಲೆ ಇದ್ದು, ಡಿಎ/ಡಿಎನ್‌ಬಿ/ಹೆಚ್‌ಡಿಯು […]

ಬಳ್ಳೆಯಲ್ಲಿ 23ರಂದು ಅರ್ಜುನ ಆನೆ ಸ್ಮಾರಕ ಉದ್ಘಾಟನೆ: ಈಶ್ವರ ಖಂಡ್ರೆ

ಬೆಂಗಳೂರು, ಜೂ.21: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರೆ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಹುತಾತ್ಮನಾದ ಕ್ಯಾಪ್ಟನ್ ಎಂದೇ ಖ್ಯಾತವಾಗಿದ್ದ ದಸರಾ ಆನೆ ಅರ್ಜುನನ್ನು ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಗಿತ್ತು. ಅರ್ಜುನನ ಸಮಾಧಿಗೆ […]

ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]