ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ […]
ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ ಸೂಚಿಸಿದ್ದಾರೆ. ಚಾರ್ಮಾಡಿಘಾಟ್ ಕಾಡ್ಗಿಚ್ಚಿನ ವಿವರ ಕೇಳಿಸ ಸಚಿವರು :ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ […]
ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ
ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]
FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ
ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]
ಜ.22 ರಂದು ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ ಸುಗ್ಗಿ ಸಂಭ್ರಮ
ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಜ.22 ರ ಮಧ್ಯಾಹ್ನ 2 ಗಂಟೆಗೆ ಇರುವಕ್ಕಿಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 9 ನೇ ವಾರ್ಷಿಕ ಘಟಿಕೋತ್ಸವ ಸುಗ್ಗಿ ಸಂಭ್ರಮವನ್ನು ಏರ್ಪಡಿಸಲಾಗಿದೆ.ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದ್ದು, ರಾಷ್ಟಿçÃಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್ ಶಶಿಧರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೆಳದಿ […]