ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಆರ್‌ಎಲ್‌ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಶರಾವತಿ ಸಂತ್ರಸ್ತರು ಸೇರಿದಂತೆ ಚಕ್ರಾ, ವರಾಹಿ ಸಂತ್ರಸ್ತರ ಪರವಾಗಿಯೂ […]

ಫ್ರೀಡಂ ಪಾರ್ಕ್ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು‌ ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ ಉತ್ಪನ್ನಗಳನ್ನು ಖರೀದಿಸಿ, ಕುಶಲಕರ್ಮಿಗಳನ್ನು ಉತ್ತೇಜಿಸಿದರು. ಹಾಗೂ ತಿಂಡಿ ತಿನಿಸು ಮಳಿಗೆಯಲ್ಲಿ ತಿನಿಸುಗಳನ್ನು ಸವಿದರು. ಈ ವೇಳೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ಕುಶಲಕರ್ಮಿಗಳು ಇದ್ದು, ಅಚ್ಚುಕಟ್ಟಾಗಿ […]

ಚಾರ್ಮಾಡಿ ಘಾಟಿಯ ಬಳಿ ಅರಣ್ಯಕ್ಕೆ ಭಾರಿ ಪ್ರಮಾಣದ ಕಾಡ್ಗಿಚ್ಚು..!

ಕೊಟ್ಟಿಗೆಹಾರ: ಚಾರ್ಮಾಡಿಘಟ್ ಬಳಿ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದೆ.  ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆಪರದಾಡಿದ್ದಾರೆ ಎನ್ನಲಾಗಿದೆ.ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್(ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ […]

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!

ಶಿವಮೊಗ್ಗ: ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿಗಿದ್ದು ಅನೇಕ ಕಡೆಗಳಲ್ಲಿ ಕಾಡು ಆನೆಗಳ ದಾಳಿಯಿಂದ ರೈತರ ಬೆಳೆಗಳು ನಾಶವಾಗಿದೆ ಪ್ರಾಣಿಹಾನಿಯಂತ ಘಟನೆಗಳು ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಾಜಿ‌ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು‌. ಶಿವಮೊಗ್ಗ ನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ಬಿಜೆಪಿ ರೈತಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಿ ಕಾಡುಪ್ರಾಣಿಗಳಿಂದ ದಾಳಿಗೆ ಒಳಾದ ಕುಟುಂಬಕ್ಕೆ ಪರಿಹಾರ ಹಾಗೂ ಬೆಳೆಹಾನಿಯಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು‌‌. ಈ […]

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ […]

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ ಸೂಚಿಸಿದ್ದಾರೆ. ಚಾರ್ಮಾಡಿಘಾಟ್ ಕಾಡ್ಗಿಚ್ಚಿನ ವಿವರ ಕೇಳಿಸ ಸಚಿವರು :ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ […]

ಬಿ.ಎಸ್ ಯಡಿಯೂರಪ್ಪನವರ ವಿರುದ್ಧದ ಅಪಮಾನ ಕಾರ್ಯಕರ್ತರು ನೊಂದಿದ್ದಾರೆ : ಬಿ ವೈ ವಿಜಯೇಂದ್ರ

ಶಿವಮೊಗ್ಗದ ಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದಲ್ಲಿನ ಆಂತರಿಕ ಗೊಂದಲಗಳು ತನಗೆ ಖುಷಿ ತಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುವ ಮೊದಲೇ ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳು ಬಗೆಹರಿಯಬೇಕು. ನಾನೂ ಸಹ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಈ ಅಹಿತ ಬೆಳವಣಿಗೆಗಳು ನನಗೂ ಸಂತೋಷ ತಂದಿಲ್ಲ. ಕಾರ್ಯಕರ್ತರಲ್ಲೂ ಸಹ ಬೇಸರದಿಂದಿದ್ದಾರೆ. ಕೇಂದ್ರ ನಾಯಕರ ಮೇಲೆ ನನಗೆ ವಿಶ್ವಾಸವಿದೆ. ವಿಶೇಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ […]

FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ

ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್‌ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]

ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]

ಜ.22 ರಂದು ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ ಸುಗ್ಗಿ ಸಂಭ್ರಮ

ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಜ.22 ರ ಮಧ್ಯಾಹ್ನ 2 ಗಂಟೆಗೆ ಇರುವಕ್ಕಿಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 9 ನೇ ವಾರ್ಷಿಕ ಘಟಿಕೋತ್ಸವ ಸುಗ್ಗಿ ಸಂಭ್ರಮವನ್ನು ಏರ್ಪಡಿಸಲಾಗಿದೆ.ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದ್ದು, ರಾಷ್ಟಿçÃಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್ ಶಶಿಧರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೆಳದಿ […]