ಯುವಜನತೆ ಹತಾಶೆ ಬಿಟ್ಟು ಅವಕಾಶ ಸದುಪಯೋಗಪಡಿಸಿಕೊಳ್ಳಿ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ: “ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ ಪಡೆದು ಹೊರಬರುತ್ತಿದ್ದಾರೆ. ಉದ್ಯೋಗವಿಲ್ಲದೆ ಹತಾಶರಾಗಿರುವ ಯುವಶಕ್ತಿಗೆ ಆಸರೆ ನೀಡಿ, ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ,” ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಕುಮದ್ವತಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ‘ಭವ್ಯ ಉದ್ಯೋಗ ಮೇಳ’ವನ್ನು […]
ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಫೆಬ್ರವರಿ 20 ಮತ್ತು 21ರಂದು ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೂಡಬಿದಿರೆಯ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ಈ ವಿಶೇಷ ಮೇಳ ಆಯೋಜಿಸಲಾಗಿದೆ. ಇದು ಯುವಜನತೆಗೆ ಉದ್ಯೋಗದ […]
ವೀರಶೈವ ಲಿಂಗಾಯತರಿಗೆ ‘ಆಹಾರ ವಾಹಿನಿ’ ಭಾಗ್ಯ: 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಆಹಾರ ವಾಹಿನಿ’ ಯೋಜನೆಯಡಿ ಸಂಚಾರಿ ತಿಂಡಿ ಮಳಿಗೆಗಳನ್ನು ನಡೆಸಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ನಾಲ್ಕು ಚಕ್ರಗಳ ಇವಿ-ಗೂಡ್ಸ್ (ವಿದ್ಯುತ್ ಚಾಲಿತ) ವಾಹನಗಳನ್ನು ಆಹಾರ ಮಳಿಗೆಗಳಾಗಿ ನವೀಕರಿಸಿ ವಿತರಿಸಲಾಗುವುದು. ಅಭ್ಯರ್ಥಿಗಳು ವಾಹನ ಖರೀದಿಸಲು ನಿಗಮದಿಂದ ಗರಿಷ್ಠ 3 ಲಕ್ಷ ರೂಪಾಯಿಗಳ ಸಹಾಯಧನ ಪಡೆಯಲು ಅವಕಾಶವಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಅರ್ಹತೆ ಮತ್ತು ಷರತ್ತುಗಳು: ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. […]
ನಿರುದ್ಯೋಗಿ ಯುವಕ-ಯುವತಿಯರೇ ಗಮನಿಸಿ: ಶಿವಮೊಗ್ಗದಲ್ಲಿ ಫೆ. 21 ರಂದು ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಫೆಬ್ರವರಿ 21 ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ನೇರ ಸಂದರ್ಶನ ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಹಾಗೂ ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ […]
ಈಸೂರು ದಂಗೆಯ ಕೊನೆಯ ಕೊಂಡಿ ಕಳಚಿತು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ. ದೇವೇಂದ್ರಪ್ಪ ಇನ್ನಿಲ್ಲ

ಶಿಕಾರಿಪುರ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ‘ಸ್ವತಂತ್ರ ಹಳ್ಳಿ’ ಎಂದು ಘೋಷಿಸಿಕೊಂಡು ಇತಿಹಾಸ ಸೃಷ್ಟಿಸಿದ್ದ ಶಿವಮೊಗ್ಗ ಜಿಲ್ಲೆಯ ಈಸೂರು ದಂಗೆಯ ಸಾಕ್ಷಿಯಾಗಿದ್ದ ಕೊನೆಯ ಕೊಂಡಿ ಕಳಚಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಕೆ. ದೇವೇಂದ್ರಪ್ಪ (99) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿಯಾಗಿದ್ದ ದೇವೇಂದ್ರಪ್ಪ ಅವರು, 1942ರ ‘ಕ್ವಿಟ್ ಇಂಡಿಯಾ’ ಚಳುವಳಿಯ ಸಂದರ್ಭದಲ್ಲಿ ನಡೆದ ಐತಿಹಾಸಿಕ ಈಸೂರು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ’ಏಸೂರು ಕೊಟ್ಟರೂ ಈಸೂರು […]
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶೀಘ್ರವೇ ನೈಟ್ ಲ್ಯಾಂಡಿಂಗ್ ವ್ಯವಸ್ಥೆ; ಅಧ್ಯಕ್ಷ ನಂಜಯ್ಯನಮಠ್

ಶಿವಮೊಗ್ಗ: ಮಲೆನಾಡಿಗರಿಗೆ ಸಾರಿಗೆ ಕ್ಷೇತ್ರದಲ್ಲಿ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮುಂದಿನ ಆರೇಳು ತಿಂಗಳ ಒಳಗಾಗಿ ರಾತ್ರಿ ವೇಳೆಯೂ ವಿಮಾನ ಸಂಚಾರಕ್ಕೆ ಅನುಕೂಲವಾಗುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂಜಯ್ಯನಮಠ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಅಂತ್ಯದ ವೇಳೆಗೆ ಸುಮಾರು 6 ಕೋಟಿ ರೂ. ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ. ದಿಕ್ಸೂಚಿ ಯಾಂತ್ರಿಕ ವ್ಯವಸ್ಥೆ (DBOR) ಅಳವಡಿಕೆಗೆ ಟೆಂಡರ್ […]
ಅಭಿವೃದ್ಧಿಯೇ ಮುಖ್ಯ, ರಾಜಕಾರಣವಲ್ಲ: ಸಚಿವ ಸತೀಶ್ ಜಾರಕಿಹೊಳೆ

ಶಿಕಾರಿಪುರ: “ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸದೆ, ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳೆ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶಿಲಾಮೂರ್ತಿಗಳ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಣಕ್ಕೆ ಹೊಸ ಆಯಾಮ: 100 ಶಾಲೆಗಳ ನಿರ್ಮಾಣಶಿಕ್ಷಣ ಕ್ಷೇತ್ರದ ಕುರಿತು ತಮ್ಮ […]
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ, ಗ್ರಾಮ ಸಹಾಯಕ..!

ಶಿವಮೊಗ್ಗ: ಬಾಡಿಗೆ ಕಾರಿನ ಹಣ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಅವರ ಪರವಾಗಿ ಹಣ ಸ್ವೀಕರಿಸುತ್ತಿದ್ದ ಗ್ರಾಮ ಸಹಾಯಕ ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟನೆಯ ಹಿನ್ನೆಲೆ:ಓಟಿಘಟ್ಟ ಗ್ರಾಮದ ನಿವಾಸಿ ಶ್ರೀ ಕೇಶವಮೂರ್ತಿ ಎ.ಬಿ. ಎಂಬುವವರು ತಮ್ಮ ಮಾಲೀಕತ್ವದ ‘ಮಾರುತಿ ಎರ್ಟಿಗಾ’ ಕಾರನ್ನು ಶಿವಮೊಗ್ಗದ ಎನ್.ಹೆಚ್-206 ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಗೆ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ನೀಡಿದ್ದರು. ಪ್ರತಿ ತಿಂಗಳು ಕಾರಿನ ಬಾಡಿಗೆ ಮೊತ್ತವನ್ನು ಚೆಕ್ ಮೂಲಕ ನೀಡಲಾಗುತ್ತಿತ್ತು. ಆದರೆ, […]
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ […]
ಶಿಕಾರಿಪುರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಷೋಷಣೆ..!

ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 26/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಡಿಪ್ಲೋಮ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅತಿಯಾದ ಮಳೆಯಿಂದ ಶೀತ ವಾತಾವರಣ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ. ಇನ್ನೂ ಶಿವಮೊಗ್ಗ ತಾಲೂಕು, ಸಾಗರ, ಸೊರಬ, ಹೊಸನಗರ, ಭದ್ರಾವತಿ ತೀರ್ಥಹಳ್ಳಿ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ತಹಶಿಲ್ದಾರ್ ಅವರು ರಜೆ […]