ಸಚಿವರ ಭರವಸೆಗೆ ಪ್ರತಿಭಟನಾ ಧರಣಿ ಹಿಂಪಡೆದ ರೈತ ಸಂಘ..!
ಶಿಕಾರಿಪುರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ “ಬೃಹತ್ ಪ್ರತಿಭಟನಾ” ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿದರು. ಈಸೂರು ಭಾಗದಲ್ಲಿ ಕೆ.ಪಿ.ಟಿ.ಸಿ.ಎಲ್ 4.5 ಕಿ.ಮೀ. ದೂರವಿರುವ ಗ್ರೀಡ್ ಗೆ 20 ಕಿ.ಮೀ. ನಿಂದ ಹೈಟೆನ್ಷನ್ ವಿದ್ಯುತ್ ಮಾರ್ಗ ಯೋಜನೆ ರೂಪಿಸುತ್ತಿದೆ. ಇದು ಅವೈಜ್ಞಾನಿಕವಾಗಿದ್ದು “ಹೈಟೆನ್ಷನ್ ವಿದ್ಯುತ್ ಮಾರ್ಗ ನಿರ್ಮಾಣ” ಕಾಮಗಾರಿ ಮಾಡದಂತೆ ರೈತರು ಮನವಿ ಸಲ್ಲಿಸಿದರು. ಈ ಪ್ರದೇಶದಲ್ಲಿ ರೈತರು […]
ಶಿಕಾರಿಪುರಕ್ಕೆ ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ಸಾರ್ವಜನಿಕ ಅಹವಾಲು ಸ್ವೀಕಾರ..!
ಶಿಕಾರಿಪುರ ತಾಲೂಕಿಗೆ ನಾಳೆ (ಬುಧವಾರ) ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವರಾದ ಮುಧು ಬಂಗಾರಪ್ಪ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನೆಲವಾಗಿಲು ಗ್ರಾಮದಲ್ಲಿ ಕೃಷಿ ಅಧ್ಯಯನ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಲಿದ್ದು ನಂತರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಶಿವಪುರ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಬಳಿಕ ಜಾವಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಿದ್ದು ಸ್ವಕ್ಷೇತ್ರ ಸೊರಬದಲ್ಲಿ ವಿವಿಧ ಕಾರ್ಯಕ್ರಮದಲ್ಲಿ […]
ಶಾಸಕ ಬಿವೈ ವಿಜಯೇಂದ್ರ ಸಂಧಾನಕ್ಕೂ ಜಗ್ಗದ ರೈತರು ಮುಂದುವರಿದ ಅಹೋರಾತ್ರಿ ಧರಣಿ..!
ಶಿಕಾರಿಪುರ: ತಾಲೂಕಿಮ ಈಸೂರಿನಿಂದ -ಅಂಜನಾಪುರ ವರೆಗೆ ಕೆಇಬಿ 11 ಕೆವಿ ಗ್ರೀಡ್ ನೀಲನಕ್ಷೆ ವಿದ್ಯುತ್ ಮಾರ್ಗ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಸೋಮವಾರ ಬೆಳಗ್ಗೆಯಿಂದಲೇ ಆರಂಭವಾದ ಪ್ರತಿಭಟನೆ ಅಹೋರಾತ್ರಿ ಭಜನೆ ಮಾಡಲುವ ಮೂಲಕ ಚಳಿಯನ್ನು ಲೆಕ್ಕಿಸದೇ ರೈತರು ಪ್ರತಿಭಟನೆ ಧರಣಿ ಮುಂದುವರಿಸಿದ್ದಾರೆ. ಶಾಸಕ ಬಿವೈ ವಿಜಯೇಂದ್ರ ಮನವೋಲಿಕೆ ವಿಫಲ:ಶಾಸಕ ಬಿವೈ ವಿಜಯೇಂದ್ರ ಸಂಜೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧರಣಿ ನಿಲ್ಲಿಸುವಂತೆ ಮನವಿ […]
ತಾಲೂಕು ಕಚೇರಿ ಎದುರು ಪ್ರತಿಭಟನೆ ವೇಳೆ ವಿಷ ಕುಡಿಯಲು ಯತ್ನಿಸಿದ ರೈತ..!
ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಈಸೂರಿನಿಂದ ಅಂಜನಾಪುರವರೆಗೆ ಕೆಇಬಿಗ್ರೀಡ್ ಅವೈಜ್ಞಾನಿಕ ನೀಲನಕ್ಷೆ ವಿದ್ಯುತ್ ಮಾರ್ಗದ ವಿರುದ್ದ ತಾಲೂಕ್ ಕಛೇರಿ ಎದುರು ಪ್ರತಿಭಟನೆ ವೇಳೆ ರೈತನೋರ್ವ ವಿಷ ಕುಡಿಯಲು ಯತ್ನಿಸಿದ ಘಟನೆ ನಡೆದಿದೆ. ಚಿಕ್ಕಜೋಗಿಹಳ್ಳಿಯ ಸುಭಷ್ ಚಂದ್ರ ಎನ್ನುವ ರೈತ ವಿಷ ಕುಡಿಯಲು ಯತ್ನಿಸಿದ ರೈತ ಎಂದು ತಿಳಿದು ಬಂದಿದೆ. ತಕ್ಷಣ ರೈತ ಮುಖಂಡರು ಪೋಲಿಸ್ ಇಲಾಖೆ ಸಿಬ್ಬಂದಿಗಳು ಬಟರ್ ಅನ್ನು ಕಸಿದುಕೊಂಡಿದ್ದಾರೆ. ಸುದ್ದಿ ಜಾಹೀರಾತಿಗಾಗಿ-7411515737
ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!
ಶಿಕಾರಿಪುರ ತಾಲೂಕಿನ ಕಣಿವೆಮನೆ ಗ್ರಾಮದಲ್ಲಿ ಜಿಲ್ಲಾ ಅಡಿಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಜಿಲ್ಲಾ ಖೇಣಿದಾರರ ಸಭೆ ನಡೆಸಲಾಯಿತು. ಈ ವೇಳೆ ಜಿಲ್ಲೆಯ ಅಡಿಕೆ ಖೇಣಿದಾರರು ಒಂದೇ ದರದಲ್ಲಿ ರೈತರ ತೋಟಗಳನ್ನು ಹಿಡಿಯಬೇಕು ಹಾಗೂ ಆಗಸ್ಟ್ 15ರ ನಂತರ ಅಡಿಕೆ ಕೊಯ್ಲು ಶುರು ಮಾಡಬೇಕು ಇದರಿಂದ ರೈತರಿಗೂ ಹಾಗೂ ಖೇಣಿದಾರರಿಗೂ ಅನುಕೂಲ ಆಗಲಿದೆ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಜಿಲ್ಲಾದ್ಯಂತ ಪ್ರತಿ 75ಕೆಜಿ ಗೆ 1kg ಪೆಚ್ಚು ನಿಗದಿ ಇನ್ನು ಹೆಚ್ಚಿನ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು […]
ಸರ್ವೋದಯ ಮಂಡಲದಿಂದ ಈಸೂರಿನಲ್ಲಿ 2ದಿನಗಳ ರಾಷ್ಟ್ರೀಯ ಸಮಾವೇಶ ಹುತಾತ್ಮರ ದಿನ ಆಚರಣೆ..!
ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಈಸೂರು ಹುತಾತ್ಮರ ಸ್ಮಾರಕದಲ್ಲಿ ರಾಷ್ಟ್ರೀಯ ಸಮಾವೇಶ ಮತ್ತು ಹುತಾತ್ಮರ ದಿನ ಆಚರಿಸುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಈಸೂರು ಗ್ರಾಮದ ವೀರ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು.1942 ರ ಸೆಪ್ಟೆಂಬರ್ 25 ರಂದು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಮೇಲೆ ತ್ರಿವರ್ಣಧ್ವಜ ಹಾರಿಸಿ ತಮ್ಮ ಗ್ರಾಮ ಸ್ವತಂತ್ರ್ಯ ಗಳಿಸಿತು. ಎಂಬುದನ್ನು ತೋರಿಸಿಕೊಟ್ಟರು. ಈ ಮೂಲಕ ಈಸೂರಿನ ಕೀರ್ತಿ ದೇಶಾದ್ಯಂತ ಪಸರಿಸಿತ್ತು. […]
ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?
ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಸಾಲೂರು-ಹರಿಹರಪುರ ನಿರಂತರ ವಿದ್ಯುತ್ ವ್ಯತ್ಯಯ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ಶಿಕಾರಿಪುರ ತಾಲೂಕಿನ ಸಾಲೂರು ಹಾಗೂ ಹರಿಹರಪುರ ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಮಾಡಲಾಗಿದೆ ಎಂದು ಊರಿನ ಗ್ರಾಮಸ್ಥರು ಪಟ್ಟಣದ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ 12 ದಿನಗಳಿಂದ ವಿದ್ಯುತ್ ಇಲ್ಲದೆ ರತರು ಬೆಳೆದ ಬೆಳೆಗಳು ನಾಶವಾಗುತ್ತಿದೆ ಮೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಮಸ್ಯೆ ಬಗ್ಗೆ ತಿಳಿಸಲಾಗಿದ್ದು ಅವರು ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೂಡಲೇ ಮೇಲಾಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ […]
ಕೊರಟಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವಿರೋಧ ಆಯ್ಕೆ
ಶಿಕಾರಿಪುರ ತಾಲೂಕಿನ ಕೊರಟಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಾಲಾಕ್ಷಪ್ಪ ಮುಳಕೊಪ್ಪ ಅವರು ಆಯ್ಕೆಯಾಗಿದ್ದಾರೆ. ಗ್ರಾಮದ ಮುಖಂಡರು ಕಾರ್ಯಕರ್ತರು ಅಭಿನಂದಿಸಿದ್ದಾರೆ.
ಶಿಕಾರಿಪುರ ಪಿಎಲ್ ಡಿ ಬ್ಯಾಂಕ್ ಕಾಂಗ್ರೇಸ್ ತೆಕ್ಕೆಗೆ..!
ಶಿಕಾರಿಪುರ ತಾಲೂಕು ಪ್ರಾಥಮಿಕ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರ ಉಪಾಧ್ಯಕ್ಷರಾದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಲೋಹಿತ್ ಕಪ್ಪನಹಳ್ಳಿ ಉಪಾಧ್ಯಕ್ಷರಾಗಿ ಶಾಂತಮ್ಮ ಈಶ್ವರಪ್ಪ ಆಯ್ಕೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ನಾಗರಾಜ್ ಗೌಡ ಮಾತನಾಡಿ ಕಳೆದ 25 ವರ್ಷಗಳ ನಂತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರ ಪರಿಶ್ರಮದಿಂದ ನಮ್ಮ ಪಕ್ಷ ಬೆಂಬಲಿತರು ಅಧಿಕಾರ ಹಿಡಿದಿದ್ದು ಗ್ರಾಮೀಣ ರೈತರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಗರದ […]