ಸರ್ವೋದಯ ಮಂಡಲದಿಂದ ಈಸೂರಿನಲ್ಲಿ 2ದಿನಗಳ ರಾಷ್ಟ್ರೀಯ ಸಮಾವೇಶ ಹುತಾತ್ಮರ ದಿನ ಆಚರಣೆ..!

ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಈಸೂರು ಹುತಾತ್ಮರ ಸ್ಮಾರಕದಲ್ಲಿ ರಾಷ್ಟ್ರೀಯ ಸಮಾವೇಶ ಮತ್ತು ಹುತಾತ್ಮರ ದಿನ ಆಚರಿಸುತ್ತಿದೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಈಸೂರು ಗ್ರಾಮದ ವೀರ ಹೋರಾಟಗಾರರು ಸಕ್ರಿಯವಾಗಿ ಭಾಗವಹಿಸಿದ್ದರು.1942 ರ ಸೆಪ್ಟೆಂಬರ್ 25 ರಂದು ಗ್ರಾಮದ ವೀರಭದ್ರಸ್ವಾಮಿ ದೇವಾಲಯದ ಮೇಲೆ ತ್ರಿವರ್ಣಧ್ವಜ ಹಾರಿಸಿ ತಮ್ಮ ಗ್ರಾಮ ಸ್ವತಂತ್ರ್ಯ ಗಳಿಸಿತು. ಎಂಬುದನ್ನು ತೋರಿಸಿಕೊಟ್ಟರು. ಈ ಮೂಲಕ ಈಸೂರಿನ ಕೀರ್ತಿ ದೇಶಾದ್ಯಂತ ಪಸರಿಸಿತ್ತು. […]

ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ಸಾಲೂರು-ಹರಿಹರಪುರ ನಿರಂತರ ವಿದ್ಯುತ್ ವ್ಯತ್ಯಯ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಶಿಕಾರಿಪುರ ತಾಲೂಕಿನ ಸಾಲೂರು ಹಾಗೂ ಹರಿಹರಪುರ ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಮಾಡಲಾಗಿದೆ ಎಂದು ಊರಿನ ಗ್ರಾಮಸ್ಥರು ಪಟ್ಟಣದ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ 12 ದಿನಗಳಿಂದ ವಿದ್ಯುತ್ ಇಲ್ಲದೆ ರತರು ಬೆಳೆದ ಬೆಳೆಗಳು ನಾಶವಾಗುತ್ತಿದೆ ಮೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಮಸ್ಯೆ ಬಗ್ಗೆ ತಿಳಿಸಲಾಗಿದ್ದು ಅವರು ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೂಡಲೇ ಮೇಲಾಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ್ […]

ಕೊರಟಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವಿರೋಧ ಆಯ್ಕೆ

ಶಿಕಾರಿಪುರ ತಾಲೂಕಿನ ಕೊರಟಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಾಲಾಕ್ಷಪ್ಪ ಮುಳಕೊಪ್ಪ‌ ಅವರು ಆಯ್ಕೆಯಾಗಿದ್ದಾರೆ. ಗ್ರಾಮದ ಮುಖಂಡರು ಕಾರ್ಯಕರ್ತರು ಅಭಿನಂದಿಸಿದ್ದಾರೆ.

ಶಿಕಾರಿಪುರ ಪಿಎಲ್ ಡಿ ಬ್ಯಾಂಕ್ ಕಾಂಗ್ರೇಸ್ ತೆಕ್ಕೆಗೆ..!

ಶಿಕಾರಿಪುರ ತಾಲೂಕು ಪ್ರಾಥಮಿಕ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರ ಉಪಾಧ್ಯಕ್ಷರಾದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಲೋಹಿತ್ ಕಪ್ಪನಹಳ್ಳಿ ಉಪಾಧ್ಯಕ್ಷರಾಗಿ ಶಾಂತಮ್ಮ ಈಶ್ವರಪ್ಪ ಆಯ್ಕೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ನಾಗರಾಜ್ ಗೌಡ ಮಾತನಾಡಿ ಕಳೆದ 25 ವರ್ಷಗಳ ನಂತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರ ಪರಿಶ್ರಮದಿಂದ ನಮ್ಮ‌ ಪಕ್ಷ ಬೆಂಬಲಿತರು ಅಧಿಕಾರ ಹಿಡಿದಿದ್ದು ಗ್ರಾಮೀಣ ರೈತರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಗರದ […]

ಪ್ರತಿಷ್ಠಿತ ಶಾಲೆಯೊಂದರ ವಾಹನದಿಂದ ಕುಮದ್ವತಿ‌ ನದಿಗೆ ಕಸದ ರಾಶಿ…!

ಶಿಕಾರಿಪುರ ಪಟ್ಟಣದ ಜೀವನದಿ ಕುಮದ್ವತಿ ನದಿಗೆ ಅನೇಕರು ಕಸವನ್ನು ಎಸೆಯುತ್ತಿರುವ ಘಟನೆ ನಡೆಯುತ್ತಿದೆ ಆದರೆ ಜನರಿಗೆ ಜಾಗೃತಿ ಮೂಡಿಸುವ ಶಿಕ್ಷಣ ಸಂಸ್ಥೆಯೊಂದರಿಂದಲೇ ಕಸವನ್ನು ನದಿಗೆ ಹಾಕು ಘಟನೆ ನಡೆದಿರುವುದು ಖಂಡನೀಯವಾಗಿದೆ. ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿ ಇರುವ ಕುಮದ್ವತಿ ಸೇತುವೆ ಬಳಿ ಶ್ರೀ ಕೊಟ್ಟರೇಶ್ವರ ವಿದ್ಯಾಸಂಸ್ಥೆಯ ವಾಹನದಿಂದ ಬಂದು ಸಿಬ್ಬಂದಿಗಳು ಚೀಲಗಟ್ಟಲೇ ಕಸವನ್ನು ನದಿಗೆ ಎಸೆಯುತ್ತಿರುವ ದೃಶ್ಯ ಕಂಡುಬಂದಿದೆ‌. ನದಿಗಳ ಬಗ್ಗೆ ಕಸದ ವಿಲೇವಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿದ್ಯಾಸಂಸ್ಥೆಯಿಂದ ಈ‌ ರೀತಿಯ ಘಟನೆ ನಡೆಯುತ್ತಿರುವುದು […]

ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]

ಯುವನಿಧಿ ನೋಂದಣಿ ಅಭಿಯಾನ

ಶಿಕಾರಿಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜ.20ವರೆಗೆ ಕಾಲೇಜಿನಲ್ಲಿ ಸಹಾಯಕೇಂದ್ರ ಸ್ಥಾಪಿಸಲಾಗಿದೆ.  ಯುವನಿಧಿ ಅರ್ಜಿ ಸಲ್ಲಿಸುವ ಯುವಕ/ಯುವತಿಯರು 2022, 2023 ಹಾಗೂ 2024ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿ‍ಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು ಎಂಬ ನಿಬಂಧನೆಗಳಿವೆ. ಅರ್ಹ ಯುವಕ/ಯುವತಿಯರು ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸ್ಥಳೀಯ ಸೈಬರ್ ಕೇಂದ್ರಗಳು, ಸೇವಾಸಿಂಧು ಪೋರ್ಟಲ್ […]