ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?
ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ
ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]
ತೀರ್ಥಹಳ್ಳಿ : ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, ಜನವರಿ 15, (ಕರ್ನಾಟಕ ವಾರ್ತೆ) : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 20 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]