FM-ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ
ಭದ್ರಾವತಿ ಆಕಾಶವಾಣಿಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಗುರುವಾರ ಚಾಲನೆ ನೀಡಿದರು. ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿಯ ದೂರದರ್ಶನ ಕಚೇರಿ ಆವರಣದಲ್ಲಿ ಉದ್ದೇಶಿತ ಏಫ್ ಎಂ ರೇಡಿಯೋ ಮುದ್ರಿತ ಅತ್ಯಾಧುನಿಕ ಟ್ರಾನ್ಸ್ ಮಿಟರ್ ಅಳವಡಿಕೆ ಕಾಮಗಾರಿಗೆ ಕೇಂದ್ರ ಸಚಿವ ಮುರಗನ್ ಚಾಲನೆ ನೀಡಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪ್ರಯತ್ನದ ಫಲವಾಗಿ ಪ್ರಸಾರ ಟ್ರಾನ್ಸ್‌ಮಿಟರ್ ಸ್ಥಾಪನೆಗೆ ಕಾರಣವಾಯಿತು. ಯೋಜನೆಯು ಕೇಂದ್ರ ಸರ್ಕಾರದ ಆರ್ಥಿಕ ಬೆಂಬಲದೊಂದಿಗೆ […]
ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ
ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]
ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ
ಶಿವಮೊಗ್ಗ, ಜ.17 ( ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್‌ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ […]
ಜ.21 ರಿಂದ ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. […]