ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ

ಶಿವಮೊಗ್ಗ, ಜ.17 ( ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್‌ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ […]

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ…

ಚಿಕ್ಕಮಗಳೂರು: ಲಾರಿ ಸಮೇತ ಕೋಟ್ಯಂತರ ಮೌಲ್ಯದ ಅಡಿಕೆ (Areca Nut) ಕಳ್ಳತನ ಮಾಡಿದ್ದ ಐವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 10552500 ಮೌಲ್ಯದ 335 ಚೀಲ ಅಡಿಕೆ ಕಳ್ಳತನ ಮಾಡಿದ್ದರು. ಹಮ್ಜ, ಮೊಹಮ್ಮದ್ ಗೌಸ್ ಖಾನ್, ಮೊಹಮ್ಮದ್ ಸುಭಾನ್, ಮೊಹಮ್ಮದ್ ಫಯಾಜ್ ಮತ್ತು ಮೊಹಮ್ಮದ್ ಸಾದಿಕ್ ಬಂಧಿತರು. ಬಂಧಿತರಿಂದ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಅಡಕೆ, 12 ಚಕ್ರದ ಲಾರಿ ಮತ್ತು 2.30 ಲಕ್ಷ ರೂ ನಗದು ವಶಕ್ಕೆ ಪಡೆಯಲಾಗಿದೆ. ಬೀರೂರು ಪೊಲೀಸ್ […]