ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ವೇಳೆ ಆಹಾರ ಅರಸಿ ಸಂಸದರ ಮನೆ ಅಂಗಳಕ್ಕೆ  ಚಿರತೆ ನುಗ್ಗಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸ ಶಿರಸಿ ತಾಲೂಕಿನ ಕಾಗೇರಿಯಲ್ಲಿದೆ. ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ […]

ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ

ಕಾರವಾರದ ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ನಡೆದ ಹಲ್ಲೆಯಿಂದಾಗಿ ನೇವಲ್ ಹೌಸಿಂಗ್ ಕಾಲೋನಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಹಲ್ಲೆಗಾರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ. ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲಿಸಿದ್ದಾರೆ. ಪೊಲೀಸರು ಭದ್ರತಾ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಘಟನೆಯಿಂದ ಕಾರವಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು‌ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ ಮತ್ತು ನಗದು ಲೂಟಿ ಮಾಡಿದ್ದಾರೆ. ಇವರು ಸುಮಾರು ರೂ. 12 ಕೋಟಿ ರೂ. ಮೌಲ್ಯದ ನಗದು ಮತ್ತು […]