ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]

ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ವೇಳೆ ಆಹಾರ ಅರಸಿ ಸಂಸದರ ಮನೆ ಅಂಗಳಕ್ಕೆ  ಚಿರತೆ ನುಗ್ಗಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸ ಶಿರಸಿ ತಾಲೂಕಿನ ಕಾಗೇರಿಯಲ್ಲಿದೆ. ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ […]

ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ

ಕಾರವಾರದ ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ನಡೆದ ಹಲ್ಲೆಯಿಂದಾಗಿ ನೇವಲ್ ಹೌಸಿಂಗ್ ಕಾಲೋನಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಹಲ್ಲೆಗಾರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ. ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲಿಸಿದ್ದಾರೆ. ಪೊಲೀಸರು ಭದ್ರತಾ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಘಟನೆಯಿಂದ ಕಾರವಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಮೈಕ್ ಬಳಕೆಗೆ ಅನುಮತಿ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ನಿರ್ಧಾರಕ್ಕೆ ಗ್ರಾಮಸ್ಥರು ಮತ್ತು ಯಕ್ಷಗಾನ ಕಲಾವಿದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಪಡೆಯಲು ಆಯೋಜಕರು ಮಾಡಿದ ಪ್ರಯತ್ನಗಳು ವಿಫಲವಾದವು ಎಂಬುದು ತಿಳಿದುಬಂದಿದೆ.