ಭೂಕುಸಿತ ಹಿನ್ನೆಲೆ : ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು […]
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ – ಗೃಹ ಸಚಿವ ಡಾ. ಜಿ. ಪರಮೇಶ್ವರ್

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹಸಚಿವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದ್ದಾರೆ. ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ […]
ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

ಬೆಂಗಳೂರು, ಫೆ.13: ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ […]
ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ಮಂಗಳೂರು: ಸಹಕಾರಿ ಬ್ಯಾಂಕ್ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ ಮತ್ತು ನಗದು ಲೂಟಿ ಮಾಡಿದ್ದಾರೆ. ಇವರು ಸುಮಾರು ರೂ. 12 ಕೋಟಿ ರೂ. ಮೌಲ್ಯದ ನಗದು ಮತ್ತು […]