ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಮೈಕ್ ಬಳಕೆಗೆ ಅನುಮತಿ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ನಿರ್ಧಾರಕ್ಕೆ ಗ್ರಾಮಸ್ಥರು ಮತ್ತು ಯಕ್ಷಗಾನ ಕಲಾವಿದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಪಡೆಯಲು ಆಯೋಜಕರು ಮಾಡಿದ ಪ್ರಯತ್ನಗಳು ವಿಫಲವಾದವು ಎಂಬುದು ತಿಳಿದುಬಂದಿದೆ.