ಜ.19 ರಂದು ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ
ದಾವಣಗೆರೆ,ಜನವರಿ.16 (ಕರ್ನಾಟಕ ವಾರ್ತೆ): ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆಯು ಜನವರಿ 19 ಮತ್ತು 25 ರಂದು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನವರಿ 19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ 1 ರ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 6 ಕೇಂದ್ರಗಳಲ್ಲಿ 3422 […]