ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ – ಗೃಹ ಸಚಿವ ಡಾ. ಜಿ. ಪರಮೇಶ್ವರ್

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹಸಚಿವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದ್ದಾರೆ. ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ […]
ಪೆಹಲ್ಗಾಮ್ ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂಗಳ ಪರಿಹಾರ

ಚಿಕ್ಕಮಗಳೂರು : ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳೀಗೆ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಗಳ ಪರಿಹಾರವನ್ನು ಘೋಷಣೆ ಮಾಡಿದೆ. ದಾಳಿಯಲ್ಲಿ ಮೃತಪಟ್ಟ ಒಟ್ಟು 26 ಸದಸ್ಯರ ಕುಟುಂಬಗಳೀಗೆ ಒಟ್ಟು 52 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಶೃಂಗೇರಿ ಶಾರದ ಮಠದಲ್ಲಿ ಇಂದು ನಡೆದ ಅನುರಾಗ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿತೀರ್ಥ ಸ್ವಾಮೀಜಿಯವರು ಕಾಶ್ಮೀರದಲ್ಲಿ ಶ್ರೀ ಶಾರದಾ ಮಾತೆಯು ನೆಲ್ಲೆಸಿದಾಳೆ […]
ಹುಚ್ಚರಾಯಸ್ವಾಮಿ ಅದ್ದೂರಿ ಬ್ರಹ್ಮ ರಥೋತ್ಸವ

ಶಿಕಾರಿಪುರ ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ ಶನುವಾರ ಅದ್ದೂರಿಯಾಗಿ ನೆರವೇರಿತು. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು. ರಥೋತ್ಸವದ ವೇಳೆ ಗರುಡ ದರ್ಶನ..! ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ ನಂತರ ರಥವನ್ನು ಎಳೆಯಲಾಗುತ್ತದೆ. ಮಾಜಿ ಸಿಎಂ ಬಿಎಸ್ ವೈ ಭಾಗಿ:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಹುಚ್ಚರಾಯಸ್ವಾಮಿಯ ಪರಮಭಕ್ತರಾಗಿದ್ದು ರಥೋತ್ಸವಕ್ಕೆ ತಪ್ಪದೆ ಆಗಮಿಸುತ್ತಾರೆ. ಮಕ್ಕಳಾದ ಸಂಸದ ಬಿವೈ […]
ಪ್ರಯಾಗ್ ರಾಜ್ ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ರಾಜ್ಯದ 4 ಮಂದಿ ಸಾವು..!

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಭಕ್ತರ ಜನದಟ್ಟಣೆಯಿಂದ ಕಾಲ್ತುಳಿತ ಉಂಟಾಗಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ. ಮಹಾಕುಂಭ ಮೇಳದ ಕಾಲ್ತುಳಿತಕ್ಕೆ ಸಿಲುಕಿದ್ದ ಇವರನ್ನು ಪ್ರಯಾಗರಾಜ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇದೇ 26 ರಂದು ಖಾಸಗಿ ಸಾರಿಗೆ ಸಂಸ್ಥೆಯ ಮೂಲಕ 13 ಜನರ ತಂಡ ಕುಂಭಮೇಳಕ್ಕೆ ತೆರಳಿತ್ತು ಎಂದು ಅವರು ವಿವರ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ […]
ಸಿಗಂದೂರು ದೇವಿ ಸನ್ನಿಧಿಯಲ್ಲಿ ವಿಜೃಂಭಣೆ ಸಂಕ್ರಮಣ ಜಾತ್ರೆ

ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ತಾಯಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ ಹವನ ಪೂರ್ಣಾಹುತಿಯಲ್ಲಿ ಧರ್ಮದರ್ಶಿ ಡಾ.ಎಸ್.ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.