ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು […]

ಮಾಲಾಶ್ರೀ ಅಭಿನಯದ ‘ಮಾರಕಾಸ್ತ್ರ’ ಸಿನಿಮಾ ಈಗ ಒಟಿಟಿ ಪ್ಲೇಯರ್​ನಲ್ಲಿ ಲಭ್ಯ

ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಸಾಧ್ಯವಾಗದಿದ್ದರೆ ಒಟಿಟಿಯಲ್ಲಿ ವೀಕ್ಷಿಸಲು ಪ್ರೇಕ್ಷಕರು ಬಯಸುತ್ತಾರೆ. ಆದರೆ ಎಲ್ಲ ಸಿನಿಮಾಗಳಿಗೂ ಒಟಿಟಿಯಲ್ಲಿ ಜಾಗ ಸಿಗುವುದಿಲ್ಲ. ಸಣ್ಣ ಸಿನಿಮಾಗಳು ಎಂಬ ಕಾರಣಕ್ಕೆ ದೊಡ್ಡ ಒಟಿಟಿ ಸಂಸ್ಥೆಗಳು ಕೆಲವು ಚಿತ್ರಗಳನ್ನು ಖರೀದಿಸುವುದೇ ಇಲ್ಲ. ಮುಖ್ಯವಾಗಿ ಕನ್ನಡ ಸಿನಿಮಾಗಳಿಗೆ ಒಟಿಟಿಯಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಕೊರಗು ಮೊದಲಿನಿಂದಲೂ ಇದೆ. ಅದಕ್ಕಾಗಿ ಸಿನಿಮಾ ತಂಡಗಳು ಬೇರೆ ಬೇರೆ ಮಾರ್ಗಗಳನ್ನು ಕಂಡುಕೊಳ್ಳುತ್ತಿವೆ. ಕನ್ನಡದ ‘ಮಾರಕಾಸ್ತ್ರ’ ಸಿನಿಮಾ ಕೂಡ ಈಗ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಹಾಗಂತ ಇದು ನೆಟ್​ಫ್ಲಿಕ್ಸ್​, ಅಮೇಜಾನ್ […]

ಕಂಗನಾ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಈ ದೇಶದಲ್ಲಿ ಬ್ಯಾನ್ ಬಿಸಿ

ನಟಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜನವರಿ 17ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ 70ರ ದಶಕದ ಕಥೆ ಹೊಂದಿದೆ. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ ತುರ್ತುಪರಿಸ್ಥಿತಿ ಕುರಿತು ಸಿನಿಮಾದಲ್ಲಿ ಹೇಳಲಾಗಿದೆ. ಈಗ ಈ ಚಿತ್ರಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಇದು ಚಿತ್ರಕ್ಕೆ ಕೊಂಚ ಹಿನ್ನಡೆ ತರಬಹುದು ಎನ್ನಲಾಗುತ್ತಿದೆ. ಎಮರ್ಜೆನ್ಸಿ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, […]