ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ […]
ಪೋಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಇಲ್ಲಿದೆ ಮಾಹಿತಿ..!

ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪೇದೆಗಳಿಂದ ಡಿವೈಎಸ್ಪಿ ಹುದ್ದೆವರೆಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇಖಡ 2 ರಿಂದ ಶೇಖಡ 3 ಕ್ಕೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕ ಸೇವಾ ಆಯೋಗ ತಿದ್ದುಪಡಿ ನಿಯಮಗಳು 2024 ರ ಕರಡನ್ನು ಸಂವಿಧಾನದ ಅನುಚ್ಛೇದ 318ರ ಅನ್ವಯ ರಾಜ್ಯಪಾಲರ ಅನುಮೋದನೆ ಪಡೆದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆಗಳನ್ನು ಆಹ್ವಾನಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರಡು ನಿಯಮಗಳಲ್ಲಿ ಯಾವುದೇ […]
ಯುವನಿಧಿ ನೋಂದಣಿ ಅಭಿಯಾನ

ಶಿಕಾರಿಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜ.20ವರೆಗೆ ಕಾಲೇಜಿನಲ್ಲಿ ಸಹಾಯಕೇಂದ್ರ ಸ್ಥಾಪಿಸಲಾಗಿದೆ. ಯುವನಿಧಿ ಅರ್ಜಿ ಸಲ್ಲಿಸುವ ಯುವಕ/ಯುವತಿಯರು 2022, 2023 ಹಾಗೂ 2024ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು ಎಂಬ ನಿಬಂಧನೆಗಳಿವೆ. ಅರ್ಹ ಯುವಕ/ಯುವತಿಯರು ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸ್ಥಳೀಯ ಸೈಬರ್ ಕೇಂದ್ರಗಳು, ಸೇವಾಸಿಂಧು ಪೋರ್ಟಲ್ […]
ಕೆಪಿಎಸಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ:ಕೆಎಎಸ್ ಪರೀಕ್ಷೆ ಕುರಿತು ಸರ್ಕಾರ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಭೆ..!

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ ಅವರು ಆದ ಸಮಸ್ಯೆಗಳು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆ ಬಳಿಕ ಮಹತ್ವ […]