ಕೇಂದ್ರ ಬಜೆಟ್‌ ಮಂಡನೆ ಯಾವ ಕ್ಷೇತ್ರಕ್ಕೆ ಎಷ್ಟು? ಯಾರಿಗೆ ಲಾಭನಷ್ಟ ..?

ನವದೆಹಲಿ :ಲೋಕಸಭೆಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು. ಈ ಬಾರಿಯ ಬಜೆಟ್ ಕೃಷಿ ವಲಯ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಹೂಡಿಕೆ ವಲಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವಿಶೇಷತೆಗಳನ್ನು ಹೊಂದಿದೆ. ಬಜೆಟ್ ಮಂಡನೆಯ ಆರಂಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್ ಬೆಳವಣಿಗೆಗೆ ಹೊಸ ಶಕ್ತಿ ನೀಡುವ ಒಳಗೊಳ್ಳುವ ಅಭಿವೃದ್ಧಿ ಖಾತ್ರಿಪಡಿಸುವ, ಖಾಸಗಿ ಹೂಡಿಕಯನ್ನು ಉತ್ತೇಜಿಸುವ ಮತ್ತು ಮಧ್ಯಮವರ್ಗದವರ […]

ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವಿ ಶರಣಾಗತಿ :ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆ..!

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ […]

ಪೋಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಇಲ್ಲಿದೆ ಮಾಹಿತಿ..!

ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪೇದೆಗಳಿಂದ ಡಿವೈಎಸ್ಪಿ ಹುದ್ದೆವರೆಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇಖಡ 2 ರಿಂದ ಶೇಖಡ 3 ಕ್ಕೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕ ಸೇವಾ ಆಯೋಗ ತಿದ್ದುಪಡಿ ನಿಯಮಗಳು 2024 ರ ಕರಡನ್ನು ಸಂವಿಧಾನದ ಅನುಚ್ಛೇದ 318ರ ಅನ್ವಯ ರಾಜ್ಯಪಾಲರ ಅನುಮೋದನೆ ಪಡೆದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆಗಳನ್ನು ಆಹ್ವಾನಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರಡು ನಿಯಮಗಳಲ್ಲಿ ಯಾವುದೇ […]

ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?

ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ […]

ವಿಶೇಷ ಲೇಖನ ಕನ್ನಡ ನೆಲದಲ್ಲಿ ಮಹಾತ್ಮ ಗಾಂಧಿಜೀ ಅವರ ನೆನಪು ಶಾಶ್ವತ

ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ ಪ್ರಭಾವದಿಂದ ಇಡೀ ದೇಶದಲ್ಲಿ ಮೊದಲು ಸ್ವಾತಂತ್ರö್ಯವನ್ನು ಘೋಷಿಸಿಗೊಂಡ ಗ್ರಾಮ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ, ಶಿವಪುರ ದ್ವಜ ಸತ್ಯಗ್ರಹ ಅಂಕೋಲ ಉಪ್ಪಿನ ಸತ್ಯಗ್ರಹ, ಅಸಹಕಾರ ಚಳುವಳಿ, ಹೀಗೆ ಗಾಂಧಿಜೀ ಅವರ ಜೀವನ […]

ಬಿಡುಗಡೆ ಆಯಿತು ಬಣ್ಣ ಬದಲಾಯಿಸುವ ಸ್ಮಾರ್ಟ್​ಫೋನ್: ಇದರ ಬೆಲೆ ಕೇವಲ 24,999 ರೂ

ಪ್ರಸಿದ್ಧ ರಿಯಲ್ ಮಿ ಕಂಪನಿಯ ಬಹುನಿರೀಕ್ಷಿತ ರಿಯಲ್ ಮಿ 14 Pro ಸರಣಿಯು ಅಂತಿಮವಾಗಿ ಭಾರತದಲ್ಲಿ ಬಿಡುಗಡೆಯಾಗಿದೆ. ಇದು ಎರಡು ಮಾದರಿಗಳನ್ನು ಒಳಗೊಂಡಿದೆ: ರಿಯಲ್ ಮಿ 14 Pro ಮತ್ತು ರಿಯಲ್ ಮಿ 14 Pro+. ಈ ಫೋನ್‌ಗಳ ಪ್ರಮುಖ ಹೈಲೇಟ್ ಎಂದರೆ ಇದರಲ್ಲಿ ಬಣ್ಣ-ಬದಲಾಯಿಸುವ ತಂತ್ರಜ್ಞಾನ ನೀಡಲಾಗಿದೆ. ಅಂದರೆ ಈ ಫೋನಿನ ​​ಪರ್ಲ್ ವೈಟ್ ರೂಪಾಂತರದಲ್ಲಿ ಕೋಲ್ಡ್ ಸೆನ್ಸಿಟಿವ್ ಬಣ್ಣ-ಬದಲಾವಣೆ ತಂತ್ರಜ್ಞಾನವನ್ನು ಬಳಸಿದೆ. ತಾಪಮಾನವು 16 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾದಾಗ, ಫೋನ್‌ನ ಹಿಂಭಾಗದ ಕವರ್ ಪರ್ಲ್ […]

ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ಕಾಂಪ್ಲೆಕ್ಸ್​ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. 9 ಎಕರೆ ವಿಸ್ತೀರ್ಣದ ಮತ್ತು ವೇದ ಶಿಕ್ಷಣ ಕೇಂದ್ರ, ಸಭಾಂಗಣವನ್ನು ಒಳಗೊಂಡಿರುವ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಖಾರ್ಘರ್‌ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ್ ದೇವಾಲಯವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ದೇವಾಲಯವು ಯುವ ಪೀಳಿಗೆಯನ್ನು ಆಕರ್ಷಿಸಲು, ಈ ಸಂಕೀರ್ಣವು ಮಹಾಭಾರತ ಮತ್ತು ರಾಮಾಯಣ ಮಹಾಕಾವ್ಯಗಳನ್ನು ಆಧರಿಸಿದ ವಸ್ತುಸಂಗ್ರಹಾಲಯವನ್ನು ಒಳಗೊಂಡಿದೆ. ಇಲ್ಲಿ […]